ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರನ್ನು ಇಂಡಿಯಾ (I.N.D.I.A) ಒಕ್ಕೂಟದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ವರದಿಯಾಗಿದೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಇಂಡಿಯಾ ಮೈತ್ರಿಕೂಟದ ಸಂಚಾಲಕರಾಗಿ ನೇಮಕ ಮಾಡಲಾಗಿದ್ದರೂ, ಅದನ್ನು ಅವರು ತಿರಸ್ಕರಿಸಿರುವುದಾಗಿ ವರದಿಯಾಗಿದೆ. ಈ ಬಗ್ಗೆ ಇಂಡಿಯಾ ಮೈತ್ರಿಕೂಟವು ಇನ್ನಷ್ಟೇ ಅಧಿಕೃತ ಘೋಷಣೆ ಮಾಡಬೇಕಿದೆ.
ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಧ್ಯಕ್ಷರಾಗಿ ಮಾಡುವುದಕ್ಕೆ ನಿರ್ಧಾರಕ್ಕೆ ಮಿತ್ರ ಪಕ್ಷಗಳ ನಾಯಕರು ಒಪ್ಪಿಗೆ ಸೂಚಿಸಿದ್ದಾರೆ ಎಂದು ವರದಿಯಾಗಿದೆ. ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ 14 ಪಕ್ಷಗಳ ನಾಯಕರ ಸಮ್ಮುಖದಲ್ಲಿ ಸಭೆ ನಡೆಯಿತು. ಈ ಸಭೆಯಲ್ಲಿ ಲೋಕಸಭೆ ಚುನಾವಣೆ ಸಂಬಂಧ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇವತ್ತಿನ ಸಭೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗೈರಾಗಿದ್ದರು. ಕಾಂಗ್ರೆಸ್ ಜೊತೆ ಸೀಟು ಹಂಚಿಕೆ ವಿಚಾರದಲ್ಲಿ ಟಿಎಂಸಿ ಕೆಲವು ತೊಡಕುಗಳಿರುವುದರಿಂದ ಇವತ್ತಿನ ಸಭೆಗೆ ದೀದಿ ಹಾಜರಾಗಿಲ್ಲ ಎಂದು ಹೇಳಲಾಗಿದೆ.
JD(U) leader & Bihar CM Nitish Kumar rejects the post of convenor of INDIA alliance: Sources
(file photo) pic.twitter.com/QyYQywsxFK
— ANI (@ANI) January 13, 2024
28 ವಿರೋಧ ಪಕ್ಷಗಳ INDIA ಮೈತ್ರಿಕೂಟವು ಶನಿವಾರ ನಡೆಸಿದ ವರ್ಚುವಲ್ ಸಭೆಯಲ್ಲಿ ಚರ್ಚೆ ನಡೆಸಿದ ನಂತರ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಇತ್ತೀಚೆಗಷ್ಟೇ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯನ್ನಾಗಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಬಲಿಸಲು ಸೂಚಿಸಿದ್ದವು. ಇದು ವ್ಯಾಪಕ ಚರ್ಚೆಯನ್ನು ಕೂಡ ಹುಟ್ಟು ಹಾಕಿದ್ದವು.
▪️ Mallikarjun Kharge’s named proposed as ‘INDIA’ bloc chairperson
▪️ Nitish Kumar turns down the Convenor post
India Today’s Aditya Vaibhav and Mausami Singh share the latest updates #ITVideo #NitishKumar #MallikarjunKharge #Politics | @PoojaShali @ScribeAditya @mausamii2u pic.twitter.com/KPxXMypRfN— IndiaToday (@IndiaToday) January 13, 2024