ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಪುನಾರಚನೆ: ರಾಜ್ಯದ ಸಯ್ಯದ್ ನಾಸೀರ್‌ ಹುಸೇನ್‌ ಅವರಿಗೆ ಸ್ಥಾನ

Date:

ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಜನ್ಮದಿನದ ಪ್ರಯುಕ್ತ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಪುನಾರಚನೆ ಮಾಡಿದ್ದು, ರಾಜ್ಯದಿಂದ ರಾಜ್ಯಸಭಾ ಸದಸ್ಯರಾದ ಸಯ್ಯದ್‌ ನಾಸೀರ್‌ ಹುಸೇನ್‌ ಅವರು ಸ್ಥಾನ ಪಡೆದಿದ್ದಾರೆ.

ಹಾಗೆಯೇ ಕರ್ನಾಟಕದ ಮೂಲದವರಾದ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಬಿ ವಿ ಶ್ರೀನಿವಾಸ್‌, ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಅವರ ಸ್ಥಾನದಲ್ಲಿ ಬದಲಾವಣೆಯಾಗಿಲ್ಲ. ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ವಿಧಾನ ಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್‌ ಶಾಶ್ವತ ಆಹ್ವಾನಿತರಲ್ಲಿ ಸ್ಥಾನ ಪಡೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಲಡಾಕ್‌ನಲ್ಲಿ 130 ಕಿಮೀ ಬೈಕ್‌ ಸವಾರಿ ಮಾಡಿದ ರಾಹುಲ್‌ ಗಾಂಧಿ; ಈ ವಾರ ಕಾರ್ಗಿಲ್‌ಗೆ ಭೇಟಿ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕಾಂಗ್ರೆಸ್‌ ಕಾರ್ಯಕಾರಿ ಸಮಿತಿಯಲ್ಲಿ ರಾಜಸ್ಥಾನದ ನಾಯಕ ಸಚಿನ್ ಪೈಲಟ್ ಸ್ಥಾನ ಪಡೆದಿದ್ದಾರೆ. ಹೊಸದಾಗಿ ಸ್ಥಾನ ಪಡೆದವರಲ್ಲಿ ಶಶಿ ತರೂರ್‌, ದೀಪಾ ದಾಸ್ ಮುನ್ಷಿ ಮತ್ತು ಕರ್ನಾಟಕದ ಸೈಯದ್ ನಾಸರ್ ಹುಸೇನ್ ಕೂಡ ಸೇರಿದ್ದಾರೆ. ಸಚಿನ್‌ ಪೈಲಟ್ ಅವರನ್ನು ದೊಡ್ಡ ರಾಜ್ಯದ ಉಸ್ತುವಾರಿಯನ್ನಾಗಿ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

2020 ರಲ್ಲಿ ಪಕ್ಷದಲ್ಲಿ ಸುಧಾರಣೆಗೆ ಒತ್ತಾಯಿಸಿ ಜಿ-23 ಗುಂಪು ಬರೆದ ಪತ್ರಕ್ಕೆ ಸಹಿ ಹಾಕಿದ ಆನಂದ್ ಶರ್ಮಾ ಅವರು ಪಕ್ಷದ ಸಮಿತಿಯಲ್ಲಿ ಸ್ಥಾನ ಪಡೆದಿದ್ದಾರೆ.

ಕಾರ್ಯಕಾರಿ ಸಮಿತಿಯ ಒಟ್ಟು 39 ಸದಸ್ಯರಲ್ಲಿ ಸಚಿನ್ ಪೈಲಟ್, ಗೌರವ್ ಗೊಗೊಯ್ ಮತ್ತು ಕಮಲೇಶ್ವರ್ ಪಟೇಲ್ ಮಾತ್ರ 50 ವರ್ಷಕ್ಕಿಂತ ಕಡಿಮೆ ವಯಸ್ಸಿನ ಸದಸ್ಯರಾಗಿದ್ದಾರೆ.

ಎಲ್ಲ ಸಿಡಬ್ಲ್ಯೂಸಿ ಸದಸ್ಯರನ್ನು ನಾಮನಿರ್ದೇಶನ ಮಾಡಲು ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಧಿಕಾರ ನೀಡಲು ಸರ್ವಾನುಮತದಿಂದ ನಿರ್ಧರಿಸಲಾಗಿದೆ ಎಂದು ಕಾಂಗ್ರೆಸ್ ಉಸ್ತುವಾರಿ ಸಮಿತಿ ಫೆಬ್ರವರಿಯಲ್ಲಿ ತಿಳಿಸಿತ್ತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭೆ ಚುನಾವಣೆ | ಮತ ಎಣಿಕೆ ವೇಳೆ ಈ ಅಂಶಗಳನ್ನು ತಪ್ಪದೆ ಪರಿಶೀಲಿಸಿ

ಲೋಕಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಜೂನ್ 4ರಂದು ನಡೆಯಲಿದೆ. ಈಗಾಗಲೇ...

ʼನಾವೆದ್ದು ನಿಲ್ಲದಿದ್ದರೆ- ಕರ್ನಾಟಕʼ ಸಂಘಟನೆಯಿಂದ ಹಾಸನ ಚಲೋಗೆ ಬೆಂಬಲ

‘ನಾವೆದ್ದು ನಿಲ್ಲದಿದ್ದರೆ’ ಎಂಬುದು ಮಹಿಳೆಯರಿಗೆ ಮತ್ತು ಮಾನವಹಕ್ಕುಗಳಿಗೆ ಸಂಬಂಧಪಟ್ಟ ಎಲ್ಲ ವಿಷಯಗಳ...

ಮೋದಿ ಭಕ್ತರಿಗೆ ಶ್ರೇಯಸ್ ಅಯ್ಯರ್ ಬ್ಯಾಟಿನ ಏಟು; ವಿಶ್ವಕಪ್‌ನಲ್ಲಿ ಶ್ರೇಯಸ್ ಕೈಬಿಡಲು ಮೋದಿ ಕಾರಣವೇ?

ಬೆಟ್ಟಿಂಗ್‌ ದಂಧೆಗೂ ಹೆಸರಾಗಿರುವ, ಭಾರತದ ಕ್ರಿಕೆಟ್‌ ಪ್ರೇಮಿಗಳ ಹುಚ್ಚಿನ ಆಟ ಐಪಿಎಲ್‌-2024...

ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ: ಯುಪಿ ಕೋರ್ಟ್‌ನಲ್ಲಿ ಜೂನ್ 7ಕ್ಕೆ ವಿಚಾರಣೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ...