ಆಗಸ್ಟ್ 11ರಂದು ಇಂಡಿಯಾ ಒಕ್ಕೂಟದ ಸಂಸದರಿಗೆ ಭೋಜನ ಕೂಟ ಆಯೋಜಿಸಲಿರುವ ಮಲ್ಲಿಕಾರ್ಜುನ ಖರ್ಗೆ

Date:

ಬಿಹಾರದಲ್ಲಿ ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆ ಮತ್ತು ಚುನಾವಣಾ ಅಕ್ರಮಗಳ ಆರೋಪದ ವಿರುದ್ಧ ವಿರೋಧ ಪಕ್ಷಗಳು ಒಗ್ಗಟ್ಟಿನಿಂದ ಹೋರಾಡಲು ಪ್ರಯತ್ನಿಸುತ್ತಿರುವ ನಡುವೆಯೇ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ(ಆಗಸ್ಟ್ 11ರಂದು) ಇಂಡಿಯಾ ಒಕ್ಕೂಟದ ಸಂಸದರಿಗೆ ಭೋಜನ ಕೂಟ ಆಯೋಜಿಸಲಿದ್ದಾರೆ ಎಂದು ವರದಿಯಾಗಿದೆ.

- Advertisement -

ಚುನಾವಣಾ ವಂಚನೆ ವಿಷಯದ ಕುರಿತು ವಿರೋಧ ಪಕ್ಷದ ನಾಯಕರು ಮತ್ತು ಸಂಸದರು ಸೋಮವಾರ ಸಂಸತ್ತಿನಿಂದ ಚುನಾವಣಾ ಆಯೋಗದ ಕಚೇರಿಗೆ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದಾರೆ. ಅದೇ ದಿನ ಚಾಣಕ್ಯಪುರಿಯ ಹೋಟೆಲ್ ತಾಜ್ ಪ್ಯಾಲೇಸ್‌ನಲ್ಲಿ ಇಂಡಿಯಾ ಒಕ್ಕೂಟದ ಸಂಸದರಿಗೆ ಖರ್ಗೆ ಭೋಜನ ಕೂಟ ಆಯೋಜಿಸಲಿದ್ದಾರೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ಮತ ಕಳವು ವಿರುದ್ಧ ಅಭಿಯಾನ ಆರಂಭಿಸಿದ ಕಾಂಗ್ರೆಸ್: ಡಿಜಿಟಲ್ ಮತದಾರರ ಪಟ್ಟಿ ನೀಡಲು ಆಗ್ರಹ

ಈ ಹಿಂದೆ ಇಂಡಿಯಾ ಬ್ಲಾಕ್‌ನ ಉನ್ನತ ನಾಯಕರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ನಿವಾಸದಲ್ಲಿ ಭೋಜನ ಕೂಟ ನಡೆಸಿ ಬಿಹಾರದಲ್ಲಿ ಮತದಾರರ ಪಟ್ಟಿಗಳ ಪರಿಷ್ಕರಣೆಯ ವಿರುದ್ಧ ಹೋರಾಡುವುದಾಗಿ ಪ್ರತಿಜ್ಞೆ ಮಾಡಿದ ಕೆಲವೇ ದಿನಗಳ ನಂತರ ಇದೀಗ ಖರ್ಗೆ ಭೋಜನ ಕೂಟ ಆಯೋಜಿಸಲು ಮುಂದಾಗಿದ್ದಾರೆ.

2024ರ ಜೂನ್ ತಿಂಗಳಲ್ಲಿ ಲೋಕಸಭಾ ಚುನಾವಣೆ ನಡೆದ ಬಳಿಕ ವಿರೋಧ ಪಕ್ಷದ ಪ್ರಮುಖ ನಾಯಕರ ಮೊದಲ ಸಭೆ ಇದಾಗಿತ್ತು. ಮಲ್ಲಿಕಾರ್ಜುನ ಖರ್ಗೆ , ಸೋನಿಯಾ ಗಾಂಧಿ, ಎನ್‌ಸಿಪಿ-ಎಸ್‌ಪಿ ಮುಖ್ಯಸ್ಥ ಶರದ್ ಪವಾರ್, ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ, ಪಿಡಿಪಿಯ ಮೆಹಬೂಬಾ ಮುಫ್ತಿ, ಎಸ್‌ಪಿಯ ಅಖಿಲೇಶ್ ಯಾದವ್, ಆರ್‌ಜೆಡಿಯ ತೇಜಸ್ವಿ ಯಾದವ್, ಟಿಎಂಸಿಯ ಅಭಿಷೇಕ್ ಬ್ಯಾನರ್ಜಿ, ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ, ಡಿಎಂಕೆಯ ತಿರುಚಿ ಶಿವ ಮತ್ತು ಟಿ ಆರ್ ಬಾಲು, ಸಿಪಿಐ (ಎಂ) ನ ಎಂ ಎ ಬೇಬಿ, ಸಿಪಿಐನ ಡಿ ರಾಜಾ, ಸಿಪಿಐ (ಎಂಎಲ್) ನ ದೀಪಂಕರ್ ಭಟ್ಟಾಚಾರ್ಯ ಮತ್ತು ಎಂಎನ್‌ಎಂ ಮುಖ್ಯಸ್ಥ ಕಮಲ್ ಹಾಸನ್ ಸೇರಿದಂತೆ 25 ಪಕ್ಷಗಳ ಹಲವಾರು ನಾಯಕರು ಸಭೆಯಲ್ಲಿ ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

22 ನಿಮಿಷದ ಜಾಹೀರಾತು, 75 ಸಾವಿರ ದಂಡ! ಸಿನಿಪ್ಲೆಕ್ಸ್‌ ಕಿವಿಹಿಂಡಿದ ಗ್ರಾಹಕ ವೇದಿಕೆ

ಸಿನಿಮಾ ಶುರುವಾಗುವ ಮುನ್ನ 22 ನಿಮಿಷಗಳ ಕಾಲ ವಾಣಿಜ್ಯ ಜಾಹೀರಾತುಗಳು ಮತ್ತು...

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...