ರಾಜ್ಯದಲ್ಲಿ ಹನಿಟ್ರ್ಯಾಪ್ ಜಟಾಪಟಿ ಜೋರಾಗಿರುವ ಹೊತ್ತಿನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ.
ಸಿಎಂ ಅವರ ಅಧಿಕೃತ ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದ್ದಾರೆ. ಜೊತೆಗೆ ಸುಮಾರು 1 ಗಂಟೆಗೂ ಹೆಚ್ಚುಕಾಲ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಇದ್ದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕರ್ನಾಟಕಕ್ಕೆ ಶಾಸನಸಭೆಯಿಂದ ಅಪಮಾನ; ನೈತಿಕ ಹೊಣೆ ಯಾರದ್ದು?
ಇತ್ತೀಚೆಗೆ ಮುಕ್ತಾಯಗೊಂಡ ಬಜೆಟ್ ಅಧಿವೇಶನದ ಕೊನೆಯ ದಿನ ಸಚಿವ ಕೆ.ಎನ್ ರಾಜಣ್ಣ ಅವರು, ತಮ್ಮ ವಿರುದ್ಧ ಹನಿಟ್ರ್ಯಾಪ್ ಯತ್ನ ನಡೆದಿರುವುದಾಗಿ ಹೇಳಿಕೆ ನೀಡಿದ್ದರು. ರಾಜಣ್ಣ ಅವರ ಈ ಹೇಳಿಕೆ ಬಳಿಕ ಆಡಳಿತ ಪಕ್ಷ ಹಾಗೂ ವಿಪಕ್ಷಗಳ ನಡುವೆ ಜಟಾಪಟಿ ಜೋರಾಗಿದೆ. ಈ ನಡುವೆ ಸಿಎಂ ಅವರನ್ನು ಖರ್ಗೆ ಭೇಟಿ ಮಾಡಿರುವುದು ಕುತೂಹಲ ಕೆರಳಿಸಿದೆ.
ಖರ್ಗೆ ಅವರು ಭೇಟಿ ಮಾಡಿದ ಸಂರ್ಭದಲ್ಲೇ ಮುಖ್ಯಮಂತ್ರಿಗಳು ಹನಿಟ್ರ್ಯಾಪ್ ಪ್ರಕರಣದ ಬಗ್ಗೆ ಚರ್ಚಿಸಿದ್ದಾರೆ. ಘಟನೆಯ ಎಲ್ಲ ವಿವರವನ್ನು ಸಿಎಂ, ಎಐಸಿಸಿ ಅಧ್ಯಕ್ಷರಿಗೆ ನೀಡಿದ್ದಾರೆ. ಜೊತೆಗೆ ರಾಜಣ್ಣ ಅವರು ತಮ್ಮ ಬಳಿ ಹಂಚಿಕೊಂಡ ಮಾಹಿತಿಯನ್ನು ಖರ್ಗೆ ಅವರಿಗೆ ತಿಳಿಸಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.