ಮಲ್ಲಿಕಾರ್ಜುನ ಖರ್ಗೆ ಸೋಲು ರಾಜ್ಯಕ್ಕೆ ದೊಡ್ಡ ನಷ್ಟವಾಗಿದೆ, ಈ ಬಾರಿ ಹಾಗೇ ಆಗಬಾರದು: ಸಿದ್ದರಾಮಯ್ಯ

Date:

Advertisements

ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಮಲ್ಲಿಕಾರ್ಜುನ ಖರ್ಗೆಯವರು ಸೋತಿದ್ದರಿಂದ ಹೆಚ್ಚು ನಷ್ಟ ಆಗಿದ್ದು ರಾಜ್ಯಕ್ಕೆ. ಈ ಬಾರಿ ಮತ್ತೆ ಅಂತಹ ತಪ್ಪಾಗಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ ರಾಧಾಕೃಷ್ಣ ಅವರ ಪರವಾಗಿ ಬೃಹತ್ ಜನಸಮಾವೇಶವನ್ನು ಉದ್ಘಾಟಿಸಿ, ಪಕ್ಷಕ್ಕೆ ಸೇರ್ಪಡೆಗೊಂಡ ಬಿಜೆಪಿ ಮುಖಂಡರುಗಳನ್ನು ಸ್ವಾಗತಿಸಿದ ಬಳಿಕ ಮಾತನಾಡಿದ ಅವರು, “ಅಭಿವೃದ್ಧಿ ಪರವಾಗಿರುವ ಕಾಂಗ್ರೆಸ್ ಅಭ್ಯರ್ಥಿ ಡಾ. ರಾಧಾಕೃಷ್ಣ ಅವರು ಗೆಲ್ಲುವುದು ನೂರಕ್ಕೆ ನೂರು ಖಚಿತ” ಎಂದರು.

“371ಜೆ ಜಾರಿ ಆಗೋದಕ್ಕೆ ಮಲ್ಲಿಕಾರ್ಜುನ ಖರ್ಗೆ ಪ್ರಮುಖ ಕಾರಣ. ಇವರ ಹೋರಾಟ, ಶ್ರಮದಿಂದಾಗಿ ಈ ಭಾಗಕ್ಕೆ 371ಜೆ ಜಾರಿಯಾಗಿ ಲಕ್ಷಾಂತರ ಕುಟುಂಬಗಳಿಗೆ ದೊಡ್ಡ ಮಟ್ಟದ ವರದನವಾಗಿದೆ. ಬಿಜೆಪಿಯವರು 371ಜೆ ಕೊಡಲು ಖಡಾಖಂಡಿತವಾಗಿ ನಿರಾಕರಿಸಿದ್ದರು. ಆದರೆ ಖರ್ಗೆಯವರ ಕಾರಣದಿಂದ ಸಂವಿಧಾನಕ್ಕೆ ತಿದ್ದುಪಡಿ ತರಲಾಯಿತು. ಇದರ ಫಲವಾಗಿ 371ಜೆ ಈ ಭಾಗಕ್ಕೆ ದೊಡ್ಡ ಮಟ್ಟದ ಅನುಕೂಲ ಆಗಿದೆ” ಎಂದು ಹೇಳಿದರು.

Advertisements

“ಮಲ್ಲಿಕಾರ್ಜುನ ಖರ್ಗೆಯವರ ಸೋಲಿನಿಂದ ಈ ಭಾಗಕ್ಕೆ ಬಹಳ ನಷ್ಟ ಆಗಿದೆ. ಈ ಬಾರಿ ಅದಕ್ಕೆ ಅವಕಾಶ ಕೊಡಬಾರದು. KKRDB ಮೂಲಕ ಕಲ್ಯಾಣ ಕರ್ನಾಟಕ ಜಿಲ್ಲೆಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ರೂ. 5000 ಕೋಟಿ ನೀಡಲಾಗಿದೆ. ಎಲ್ಲಾ ಜಾತಿ, ಎಲ್ಲಾ ಧರ್ಮದವರ ಅಭಿವೃದ್ಧಿ ಮತ್ತು‌ ಏಳಿಗೆಗಾಗಿ ನಮ್ಮ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸಿ ನುಡಿದಂತೆ ನಡೆದು, ಐದು ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ” ಎಂದು ಹೇಳಿದರು.

“ಮೋದಿಯವರು ಹತ್ತತ್ತು ವರ್ಷ ಪ್ರಧಾನಿಯಾಗಿ ಬಡ ಭಾರತೀಯರ, ಮಧ್ಯಮ ವರ್ಗದ ಭಾರತೀಯರ ಪ್ರಗತಿಗಾಗಿ, ಏಳಿಗೆಗಾಗಿ ಒಂದೇ ಒಂದು ಕಾರ್ಯಕ್ರಮವನ್ನು ಜಾರಿ ಮಾಡಿದ ಉದಾಹರಣೆ ಇದ್ದರೆ ತೋರಿಸಿ” ಎಂದು ಸವಾಲು ಹಾಕಿದರು.

“ನಮ್ಮ ಗ್ಯಾರಂಟಿಗಳನ್ನು ಕದ್ದಿರುವ ಮೋದಿ ಮತ್ತು ಟೀಮು ಪರಮ ಸುಳ್ಳುಗಾರರು ಎನ್ನುವುದು ದೇಶದ ಪ್ರತಿಯೊಬ್ಬರಿಗೂ ಅರ್ಥವಾಗಿದೆ. ಬಿಜೆಪಿ ಸುಳ್ಳಿನ ಕಾರ್ಖಾನೆ ಆಗಿದೆ. ಸುಳ್ಳುಗಳ ಮೂಲಕ ಭಾರತೀಯರನ್ನು ನಿರಂತರವಾಗಿ ಬಕ್ರಾ ಮಾಡುವ ಬಿಜೆಪಿಯ ಅಭಿಯಾನಕ್ಕೆ ಬ್ರೇಕ್ ಹಾಕಿ” ಎಂದು ಕರೆ ನೀಡಿದರು.

“ಬಿಜೆಪಿ ಸಂಸದರ ಅಯೋಗ್ಯತನದ ಕಾರಣದಿಂದ ರಾಜ್ಯಕ್ಕೆ ಬರಬೇಕಾದ ಬರಗಾಲದ ಪಾಲನ್ನು ಪಡೆಯಲು ನಾವು ಸುಪ್ರೀಂಕೋರ್ಟ್‌ಗೆ ಹೋಗಬೇಕಾಯಿತು. ಬರಗಾಲದ ಅನುದಾನದ ವಿಚಾರದಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಸಚಿವ ಅಮಿತ್ ಶಾ ರಾಜ್ಯದ ಜನರಿಗೆ ದೊಡ್ಡ ಸುಳ್ಳು ಹೇಳಿದರು” ಎಂದು ಕಿಡಿಕಾರಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X