ಬಿಜೆಪಿ ತೊರೆದು ಮರಳಿ ಜೆಡಿಎಸ್‌ ಸೇರ್ಪಡೆಯಾದ ಮಲ್ಲಿಕಾರ್ಜುನ ಖೂಬಾ

Date:

  • ಜೆಡಿಎಸ್‌ ಗೆ ಬರಮಾಡಿಕೊಂಡ ಹೆಚ್ ಡಿ ಕುಮಾರಸ್ವಾಮಿ
  • ಶೀಷ್ರದಲ್ಲೇ ಪಕ್ಷದ ಕಚೇರಿಯಲ್ಲಿ ಅಧಿಕೃತ ಸೇರ್ಪಡೆ

ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಅವರು ಮರಳಿ ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಯಾದ ಬೆನ್ನಲ್ಲಿ ನಡೆಯುತ್ತಿರುವ ಪಕ್ಷಾಂತರ ಪರ್ವದ ಭಾಗವಾಗಿ ಅವರು ಜಾತ್ಯತೀತ ಜನತಾ ದಳ ಸೇರಿಕೊಂಡರು.

ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ತಮ್ಮ ನಿವಾಸದಲ್ಲಿ ಮಲ್ಲಿಕಾರ್ಜುನ ಖೂಬಾ ಅವರಿಗೆ ಜೆಡಿಎಸ್‌ ಪಕ್ಷದ ಶಾಲು ಹಾಕುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.

ಈ ಕುರಿತು ಮಾತನಾಡಿದ ಕುಮಾರಸ್ವಾಮಿ, “ಖೂಬಾ ಅವರು ಜೆಡಿಎಸ್ ಪಕ್ಷದಲ್ಲಿಯೇ ಇದ್ದವರು. ಕಾರಣಾಂತರಗಳಿಂದ ಅವರು ಪಕ್ಷ ಬಿಟ್ಟಿದ್ದರು. ಈಗ ಮರಳಿ ತಮ್ಮ ಮನೆಗೆ ವಾಪಸ್ ಆಗಿದ್ದಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಜೆಡಿಎಸ್ ತೊರೆದ ಮತ್ತೋರ್ವ ಕಟ್ಟಾಳು; ಶಾಸಕ ಸ್ಥಾನಕ್ಕೆ ಎಟಿಆರ್ ರಾಜೀನಾಮೆ

“ಒಳ್ಳೆಯ ಸಮಯ ಇದೆ ಎನ್ನುವ ಕಾರಣಕ್ಕೆ ಬಂದು ಪಕ್ಷಕ್ಕೆ ಸೇರಿದರು. ಶೀಘ್ರದಲ್ಲಿಯೇ ಅವರು ಪಕ್ಷದ ರಾಜ್ಯದ ಕಚೇರಿಯಲ್ಲಿ ರಾಜ್ಯಾಧ್ಯಕ್ಷರಾದ ಸಿ ಎಂ ಇಬ್ರಾಹಿಂ, ಬಂಡೆಪ್ಪ ಕಾಶೆಂಪೂರ್ ಮತ್ತಿತರೆ ಹಿರಿಯ ನಾಯಕರ ಸಮಕ್ಷಮದಲ್ಲಿ ತಮ್ಮ ಬೆಂಬಲಿಗರ ಜತೆ ಪಕ್ಷಕ್ಕೆ ಅಧಿಕೃತವಾಗಿ ಸೇರಿಕೊಳ್ಳಲಿದ್ದಾರೆ” ಎಂದು ಕುಮಾರಸ್ವಾಮಿ ತಿಳಿಸಿದರು.

ಖೂಬಾ ಅವರು ಜೆಡಿಎಸ್ ಪಕ್ಷದಿಂದ ಬಸವ ಕಲ್ಯಾಣ ಕ್ಷೇತ್ರವನ್ನು ಎರಡು ಅವಧಿಗೆ ಪ್ರತಿನಿಧಿಸಿದ್ದರು.

ಬಸವಕಲ್ಯಾಣ ಕ್ಷೇತ್ರದ ಮಾಜಿ ಶಾಸಕರಾಗಿರುವ ಮಲ್ಲಿಕಾರ್ಜುನ ಅವರು 2018ರ ವಿಧಾನಸಭಾ ಚುನಾವಣೆ ವೇಳೆ ಜೆಡಿಎಸ್‌ ತೊರೆದು ಬಿಜೆಪಿಗೆ ಹೋಗಿದ್ದರು. ಬಿಜೆಪಿಯಿಂದ ಸ್ಪರ್ಧಿಸಿದ್ದ ಸೋಲನುಭವಿಸಿದ್ದರು.

ನಂತರ 2019ರಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಆದರೆ, ಬಿಜೆಪಿ ಅವರಿಗೆ ಟಿಕೆಟ್‌ ನೀಡದೆ ಶರಣು ಸಲಗರಗೆ ಟಿಕೆಟ್‌ ನೀಡಿತ್ತು. ಇದರಿಂದ ಖೂಬಾ ಅಸಮಾಧಾನಗೊಂಡಿದ್ದರು.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ನಿವೃತ್ತ ಐಎಎಸ್‌ ಅಧಿಕಾರಿ ವಿರುದ್ಧ ಅತ್ಯಾಚಾರ ಆರೋಪ: ದೂರು ದಾಖಲು

ಪಾನೀಯದಲ್ಲಿ ಮತ್ತು ಬರಿಸುವ ಪದಾರ್ಥ ಬೆರೆಸಿ ಅತ್ಯಾಚಾರ ಎಸಗಿದ್ದಾರೆ ಎಂದು 28...

ಎಚ್‌ ಡಿ ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆ

ಸಾಮಾಜಿಕ ಹೋರಾಟಗಾರ ಸಿ ಎಸ್ ​ಸಿದ್ದರಾಜು ಅವರಿಂದ ದೂರು ಚುನಾವಣಾ...

ಬೆಂಗಳೂರು | ಬಿಎಂಟಿಸಿ ಬಸ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದ ಕಾರು ಸುಟ್ಟು ಕರಕಲು

ಯಶವಂತಪುರ-ನಾಯಂಡಹಳ್ಳಿಗೆ ತೆರಳುತ್ತಿದ್ದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ಗೆ ಕಾರ್‌ವೊಂದು...