ಮಾಲೂರು ಮರು ಮತ ಎಣಿಕೆ: ಮುಚ್ಚಿದ ಲಕೋಟೆಯಲ್ಲಿ ಕೋರ್ಟ್‌ಗೆ ಫಲಿತಾಂಶ ಮಾಹಿತಿ ಸಲ್ಲಿಕೆ

Date:

ಸುಪ್ರೀಂ ಕೋರ್ಟ್ ಸೂಚನೆಯಂತೆ ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತಎಣಿಕೆ ಒಟ್ಟು 18 ಸುತ್ತುಗಳಲ್ಲಿ ಮಂಗಳವಾರ ನಡೆದಿದ್ದು, ಮುಚ್ಚಿದ ಲಕೋಟೆಯಲ್ಲಿ ಕೋರ್ಟ್‌ಗೆ ಫಲಿತಾಂಶ ಮಾಹಿತಿ ಸಲ್ಲಿಸಲಾಗುತ್ತದೆ. ಫಲಿತಾಂಶ ಮುಂದಿನ ವಿಚಾರಣೆ ನವೆಂಬರ್ 24ರಂದು ಹೊರಬೀಳುವ ಸಾಧ್ಯತೆಯಿದೆ.

- Advertisement -

2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಕೆವೈ ನಂಜೇಗೌಡ ಅವರು 248 ಮತಗಳ ಅಂತರದಿಂದ ಗೆದ್ದು ಶಾಸಕರಾಗಿದ್ದರು. ಆದರೆ ಬಿಜೆಪಿ ಅಭ್ಯರ್ಥಿ ಕೆಎಸ್ ಮಂಜುನಾಥಗೌಡ ಫಲಿತಾಂಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಮಂಜುನಾಥಗೌಡ ಮರು ಮತಎಣಿಕೆಗೆ ಮನವಿ ಮಾಡಿದ್ದು, ಸುದೀರ್ಘ ವಿಚಾರಣೆ ಬಳಿಕ ಕೋರ್ಟ್ ಮರು ಮತಎಣಿಕೆಗೆ ಆದೇಶಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಇದನ್ನು ಓದಿದ್ದೀರಾ? ಮಾಲೂರು ಶಾಸಕ ನಂಜೇಗೌಡರ ಆಯ್ಕೆ ರದ್ದು ಆದೇಶಕ್ಕೆ ತಾತ್ಕಾಲಿಕ ತಡೆ: ಮರು ಮತ ಎಣಿಕೆಗೆ ಸುಪ್ರೀಂ ಸೂಚನೆ

ಹಾಗೆಯೇ ವಿಚಾರಣೆ ನಡೆಸಿದ್ದ ಹೈಕೋರ್ಟ್, ನಂಜೇಗೌಡರ ಆಯ್ಕೆಯನ್ನು ಅಸಿಂಧುಗೊಳಿಸಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ನಂಜೇಗೌಡರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಸುಪ್ರೀಂ ಕೋರ್ಟ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿ, ಮತಗಳ ಮರುಎಣಿಕೆಗೆ ಆದೇಶಿಸಿತ್ತು.

ಸುಪ್ರೀಂ ಕೋರ್ಟ್ ಆದೇಶದಂತೆ ಮಾಲೂರು ವಿಧಾನಸಭಾ ಕ್ಷೇತ್ರದ ಮತಗಳ ಮರುಎಣಿಕೆ ನಡೆದಿದ್ದು, ಫಲಿತಾಂಶವನ್ನು ಚುನಾವಣಾಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳು ಮುಚ್ಚಿದ ಲಕೋಟೆಯಲ್ಲಿ ಸುಪ್ರೀಂ ಕೋರ್ಟ್‌ಗೆ ರವಾನಿಸಿದ್ದಾರೆ.

ಇನ್ನು ಮರು ಎಣಿಕೆಯಲ್ಲಿ ಯಾವುದೇ ಗಮನಾರ್ಹ ಬದಲಾವಣೆಗಳಾಗಿಲ್ಲ ಎಂದು ಶಾಸಕ ನಂಜೇಗೌಡ ಹೇಳಿದ್ದಾರೆ. ಆದರೆ ಅಂತಿಮ ತೀರ್ಪು ಸುಪ್ರೀಂ ಕೋರ್ಟ್‌ನಿಂದ ಬರಲಿದೆ.

ಇನ್ನೂ ಹೊರಬೀಳದ ಗಾಯತ್ರಿ ಶಾಂತೇಗೌಡ ಫಲಿತಾಂಶ

2021ರ ಡಿಸೆಂಬರ್‌ನಲ್ಲಿ ನಡೆದ ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯಲ್ಲಿ, ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಅವರು ಬಿಜೆಪಿಯ ಎಂ.ಕೆ. ಪ್ರಾಣೇಶ್ ವಿರುದ್ಧ ಕೇವಲ 6 ಮತಗಳ ಅಂತರದಿಂದ ಸೋತಿದ್ದರು. ಮರು ಮತ ಎಣಿಕೆ ಕೋರಿ ಗಾಯತ್ರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ನಾಮನಿರ್ದೇಶಿತ ಸದಸ್ಯರು ಚಲಾಯಿಸಿದ ಮತಗಳನ್ನು ಪರಿಗಣಿಸಬಾರದಿತ್ತು ಎಂದು ಗಾಯತ್ರಿ ಹೇಳಿದ್ದರು.

ಹೈಕೋರ್ಟ್ ಆದೇಶದಂತೆ 2025ರ ಫೆಬ್ರವರಿಯಲ್ಲಿ ಮತ ಮರು ಎಣಿಕೆ ನಡೆದಿದೆ. ಆದರೆ ಸುಪ್ರೀಂ ಕೋರ್ಟ್ ಆದೇಶದಂತೆ ಈವರೆಗೂ ಫಲಿತಾಂಶ ಪ್ರಕಟಿಸಿಲ್ಲ. ಚುನಾವಣಾ ಆಯೋಗ ಮೊಹರು ಮಾಡಿದ ಲಕೋಟೆಯಲ್ಲಿ ಫಲಿತಾಂಶವನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ. ಆದರೆ ವಿಚಾರಣೆ ಮುಂದುವರೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | 2013ರ ಮಹದಾಯಿ ಪ್ರಕರಣ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇರ್ ಬಂಧನ

ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರನ್ನು...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

RSSಗೆ ಅಪಾರ್ಟ್‌ಮೆಂಟ್ ಬಾಗಿಲು ತೆರೆದಿದ್ದಕ್ಕೆ ಪ್ರಿಯಾಂಕ್ ಖರ್ಗೆ ಆಕ್ಷೇಪ: ಪಾರದರ್ಶಕತೆ ಪ್ರಶ್ನಿಸುವಂತೆ ಸಂಘಗಳಿಗೆ ಸಲಹೆ

ಬೆಂಗಳೂರಿನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಆರ್‌ಎಸ್‌ಎಸ್‌ ಆಯೋಜಿಸಿದ್ದ ಸಭೆಗೆ ಗೃಹ ಸಚಿವ ಪ್ರಿಯಾಂಕ್...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...