ರಾಜ್ಯ ಚುನಾವಣಾ ಅಖಾಡಕ್ಕೆ ಮಮತಾ ಬ್ಯಾನರ್ಜಿ; ಜೆಡಿಎಸ್‌ ಪರ ಪ್ರಚಾರ

Date:

  • ರಾಜ್ಯದಲ್ಲಿ ಜೆಡಿಎಸ್‌ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ
  • ಕುತೂಹಲ ಕೆರಳಿಸಿದ ಮಮತಾ ಬ್ಯಾನರ್ಜಿ – ಕುಮಾರಸ್ವಾಮಿ ಭೇಟಿ

ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಗೆಲುವಿಗಾಗಿ ರಾಜಕೀಯ ಪಕ್ಷಗಳು ಇನ್ನಿಲ್ಲದ ಕಸರತ್ತು ನಡೆಸುತ್ತಿವೆ. ಒಂದೆಡೆ ರಾಷ್ಟ್ರೀಯ ಪಕ್ಷ ಬಿಜೆಪಿ ತನ್ನ ದೆಹಲಿ ನಾಯಕರನ್ನು ವಾರಕ್ಕೊಬ್ಬರಂತೆ ಪ್ರಚಾರಕ್ಕೆ ಕರೆಸುತ್ತಿದ್ದರೆ, ಮತ್ತೊಂದೆಡೆ ಪ್ರಾದೇಶಿಕ ಪಕ್ಷ ಜೆಡಿಎಸ್‌ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಪ್ರಚಾರದ ಅಖಾಡಕ್ಕಿಳಿಸುತ್ತಿದೆ.

ವಿಧಾನಸಭಾ ಚುನಾವಣೆಯಲ್ಲಿ ಗಮನಾರ್ಹ ಸೀಟುಗಳನ್ನು ಗೆಲ್ಲಬೇಕೆಂದು ಪಣ ತೊಟ್ಟಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ಪಂಚರತ್ನ ರಥಯಾತ್ರೆಯ ಮೂಲಕ ರಾಜ್ಯದ ಮೂಲೆ ಮೂಲೆಗೂ ಪ್ರಯಾಣಿಸಿ, ಪಕ್ಷದ ಪರ ಪ್ರಚಾರ ನಡೆಸುತ್ತಿದ್ದಾರೆ. ಈ ನಡುವೆಯೇ ರಾಷ್ಟ್ರೀಯ ಮಟ್ಟದ ನಾಯಕರನ್ನು ರಾಜ್ಯ ಚುನಾವಣಾ ಪ್ರಚಾರಕ್ಕೆ ಕರೆತರಲು ಮುಂದಾಗಿರುವ ಕುಮಾರಸ್ವಾಮಿ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಿದ್ದಾರೆ.

ಯಾದಗಿರಿ ಜಿಲ್ಲೆಯಲ್ಲಿ ಪಂಚರತ್ನ ರಥಯಾತ್ರೆ ಮುಗಿಸಿದ ಬಳಿಕ ಕುಮಾರಸ್ವಾಮಿ ವಿಶೇಷ ವಿಮಾನದಲ್ಲಿ ಕೋಲ್ಕತ್ತಾಗೆ ತೆರಳಿದ್ದಾರೆ. ಮಮತಾ ಬ್ಯಾನರ್ಜಿ ಅವರೊಂದಿಗಿನ ಸುದೀರ್ಘ ಮಾತುಕತೆಯ ಬಳಿಕ ತಮ್ಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ. “ಮಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪರವಾಗಿ ಟಿಎಂಸಿ ನಾಯಕಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಚಾರ ಮಾಡಲಿದ್ದಾರೆ” ಎಂದು ಎಚ್‌.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

“ಮಮತಾ ಬ್ಯಾನರ್ಜಿ ಅವರ ಜತೆ ಸುದೀರ್ಘ ಮಾತುಕತೆ ನಡೆಸಲಾಯಿತು. ಮುಂಬರುವ ಕರ್ನಾಟಕದ ವಿಧಾನಸಭೆ ಚುನಾವಣೆ, ರಾಷ್ಟ್ರ ರಾಜಕಾರಣ, ರಾಹುಲ್ ಗಾಂಧಿ ಅವರ ಅನರ್ಹತೆ ಸೇರಿ ಅನೇಕ ವಿದ್ಯಮಾನಗಳ ಬಗ್ಗೆ ಚರ್ಚಿಸಿದ್ದೇವೆ” ಎಂದು ಸಭೆಯ ಕುರಿತು ವಿವರಿಸಿದ್ದಾರೆ.

ಕರ್ನಾಟಕದಲ್ಲಿ ಮತ್ತೆ ಜೆಡಿಎಸ್‌ ಅಧಿಕಾರಕ್ಕೆ ಬರಲಿದೆ ಎನ್ನುವ ವಿಶ್ವಾಸವನ್ನು ಮಮತಾ ಬ್ಯಾನರ್ಜಿ ವ್ಯಕ್ತಪಡಿಸಿರುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ.

ಕಳೆದ ಬಾರಿ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ನಡೆದಾಗಲೂ ಕೇಂದ್ರ ಸರ್ಕಾರ ವಿಪರೀತ ಕಿರುಕುಳ ನೀಡಿತು. ಆದರೂ ಜನತೆಯ ಆಶೀರ್ವಾದದಿಂದ ನಮ್ಮ ಪಕ್ಷ ಅಧಿಕಾರಕ್ಕೆ ಬಂತು. ಅದೇ ರೀತಿ ಕರ್ನಾಟಕದಲ್ಲಿ ಜೆಡಿಎಸ್ ಕೂಡ ಅಧಿಕಾರಕ್ಕೆ ಬರಲಿದೆ ಎಂದು ಮಮತಾ ಅವರು ಹೇಳಿದ್ದಾಗಿ ಕುಮಾರಸ್ವಾಮಿ ತಿಳಿಸಿದ್ದಾರೆ.

“’ನೀವು ಯಾವಾಗ ಹೇಳಿದರೂ ನಾನು ಕರ್ನಾಟಕಕ್ಕೆ ಬಂದು ಜೆಡಿಎಸ್ ಪರವಾಗಿ ಚುನಾವಣಾ ಪ್ರಚಾರ ಮಾಡುತ್ತೇನೆ. ನೀವು ವೇಳಾಪಟ್ಟಿಯನ್ನು ಸಿದ್ಧಪಡಿಸಿ ತಿಳಿಸಿ’ ಎಂದು ಮಮತಾ ಬ್ಯಾನರ್ಜಿ ಅವರು ಹೇಳಿದರು. ಇದರಿಂದ ನನಗೆ ಬಹಳ ಸಂತಸ ಆಗಿದೆ. ಇಂದು ಅವರು ನನ್ನನ್ನು ಅತ್ಯಂತ ಆದರಪೂರ್ವಕವಾಗಿ ಸ್ವಾಗತಿಸಿ ಗೌರವಿಸಿದರು” ಎಂದಿದ್ದಾರೆ.

“ಇದೇ 26ರಂದು ಮೈಸೂರಿನಲ್ಲಿ ನಡೆಯಲಿರುವ ಪಂಚರತ್ನ ರಥಯಾತ್ರೆಯ ಸಮಾರೋಪ ಸಮಾವೇಶದ ಬಗ್ಗೆಯೂ ಮಮತಾ ಅವರು ಮಾಹಿತಿ ಪಡೆದರು. ಅಲ್ಲದೆ, ಕರ್ನಾಟಕದ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಿದರು” ಎಂದು ಕುಮಾರಸ್ವಾಮಿ ಅವರು ಮಾಹಿತಿ ನೀಡಿದ್ದಾರೆ.

ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಸಹ ಕೆಲ ತಿಂಗಳಗಳ ಹಿಂದೆ ರಾಜ್ಯಕ್ಕೆ ಭೇಟಿ ನೀಡಿ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಮತ್ತು ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ತೃತೀಯರಂಗ ರಚನೆ ಕುರಿತು ಚರ್ಚೆ ನಡೆಸಿದ್ದರು. ಈ ಬೆನ್ನಲ್ಲೇ ಕುಮಾರಸ್ವಾಮಿ ಅವರು ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಿದ್ದಾರೆ. ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಮತ್ತು ಬಿಜೆಪಿಗೆ ಪರ್ಯಾಯ ಶಕ್ತಿಯನ್ನು ಹುಟ್ಟುಹಾಕುವುದು ಪ್ರಾದೇಶಿಕ ಪಕ್ಷಗಳ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ ಎನ್ನಲಾಗಿದೆ.

ಮಮತಾ ಬ್ಯಾನರ್ಜಿ ಅವರು ಕಳೆದ ವಾರ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಜೊತೆ ಮಾತುಕತೆ ನಡೆಸಿದ್ದರು. ಇದೀಗ ಎಚ್.ಡಿ ಕುಮಾರಸ್ವಾಮಿ ಜೊತೆ ಸಮಾಲೋಚನೆ ನಡೆಸಿದ್ದಾರೆ. ಒಡಿಶಾದ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರನ್ನು ಭೇಟಿಯಾಗಿದ್ದಾರೆ. ಪ್ರಾದೇಶಿಕ ಪಕ್ಷಗಳ ನಾಯಕರ ನಡೆ ರಾಷ್ಟ್ರ ರಾಜಕಾರಣದಲ್ಲಿ ಕುತೂಹಲ ಕೆರಳಿವೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟ್ರಸ್ಟ್‌ಗಳ ಕಾರ್ಯನಿರ್ವಹಣೆಗೆ ಹೆಚ್ಚಿನ ಬಲ ತುಂಬುವೆ : ಸಚಿವ ಶಿವರಾಜ್ ತಂಗಡಗಿ

ವಿವಿಧ ಟ್ರಸ್ಟ್‌ಗಳ ಅಧ್ಯಕ್ಷರು, ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿದ ಸಚಿವರು ಕನ್ನಡ ಮತ್ತು ಸಂಸ್ಕೃತಿ...

ಇದು ನನ್ನ ಕೊನೆ ಚುನಾವಣೆ; ಸಕ್ರಿಯ ರಾಜಕಾರಣದಲ್ಲಿದ್ದು ಸೇವೆ ಮಾಡುವೆ: ಸಿಎಂ ಸಿದ್ದರಾಮಯ್ಯ

ವರುಣಾ ಕ್ಷೇತ್ರದ ಕಾರ್ಯಕರ್ತರು, ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಸಿದ್ದರಾಮಯ್ಯ ರಾಜ್ಯದ ಜನ ಬಿಜೆಪಿಯ...

ದಲಿತರ ಹತ್ಯಾಕಾಂಡ | 42 ವರ್ಷಗಳ ಬಳಿಕ ತೀರ್ಪಿತ್ತ ಕೋರ್ಟ್‌; ನ್ಯಾಯ ದಕ್ಕಿದ್ದು ಯಾರಿಗೆ?

ಇಲ್ಲಿ ನ್ಯಾಯ ತೋರುತ್ತಿದೆಯೇ? ನಾನು ನನ್ನ ಇಡೀ ಜೀವನವನ್ನು ನ್ಯಾಯಕ್ಕಾಗಿ ಕಾಯುವುದರಲ್ಲೇ...

ಮುಂಗಾರು ವಿಳಂಬ: ರಾಜ್ಯದ 11 ಜಲಾಶಯಗಳು ಖಾಲಿ!

ಕುಡಿಯುವ ನೀರಿಗೆ ಸಮಸ್ಯೆ ಎದುರಾಗುವ ಆತಂಕ ತಮಿಳುನಾಡಿನ ಜೊತೆ ಜಲಸಂಘರ್ಷ ಸೃಷ್ಟಿಯ ಭೀತಿ ಮುಂಗಾರು...