ರಾಹುಲ್ ಗಾಂಧಿ ಸೇರಿ 25 ಕಾಂಗ್ರೆಸ್ ಸಂಸದರಿಗೆ ಗುಂಡಿಕ್ಕುವ ಬೆದರಿಕೆ ಹಾಕಿದಾತನ ಬಂಧನ

Date:

ಕಾಂಗ್ರೆಸ್ ಸಂಸದ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಪಕ್ಷದ ಇತರ 25 ಸಂಸದರಿಗೆ ಗುಂಡು ಹಾರಿಸುವುದಾಗಿ ಬೆದರಿಕೆ ಹಾಕಿ ವಿಡಿಯೋ ಹರಿಬಿಟ್ಟಿದ್ದ ವ್ಯಕ್ತಿಯನ್ನು ರಾಜಸ್ಥಾನ ಪೊಲೀಸರು ಗುರುವಾರ ಕೋಟಾದಲ್ಲಿ ಬಂಧಿಸಿದ್ದಾರೆ.

- Advertisement -

ಬಲಪಂಥೀಯ ಗುಂಪು ಕರ್ಣಿ ಸೇನಾದ ವಕ್ತಾರ ರಾಜ್ ಸಿಂಗ್ ವಿಡಿಯೋ ಮಾಡಿ ಕಾಂಗ್ರೆಸ್ ಸಂಸದರಿಗೆ ಗುಂಡಿಕ್ಕುವುದಾಗಿ ಬೆದರಿಕೆ ಹಾಕಿದ್ದ. ಇತ್ತೀಚೆಗೆ ಮುಕ್ತಾಯಗೊಂಡ ಸಂಸತ್ತಿನ ಬಜೆಟ್ ಅಧಿವೇಶನದ ಮೊದಲ ಭಾಗದಲ್ಲಿ 25 ಕಾಂಗ್ರೆಸ್ ಸಂಸದರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ನಿಂದಿಸಿದ್ದಾರೆ. ಈ ವಿಚಾರದಲ್ಲಿ ಬಿಜೆಪಿ ಮತ್ತು ಕರ್ಣಿ ಸೇನಾ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ ಎಂದು ರಾಜ್ ಸಿಂಗ್ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಇದನ್ನು ಓದಿದ್ದೀರಾ? ಕೊಲೆ ಬೆದರಿಕೆ | ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಭಾರಿ ಪಿತೂರಿ: ಬಿ ಕೆ ಹರಿಪ್ರಸಾದ್‌ ಗಂಭೀರ ಆರೋಪ

“ಅಂತಹ ಘಟನೆ ಮತ್ತೆ ಸಂಭವಿಸಿದಲ್ಲಿ ಸಂಸದರ ಮನೆಗಳಿಗೆ ಪ್ರವೇಶಿಸಿ ಅವರನ್ನು ನಾಶ ಮಾಡಲಾಗುವುದು. ಈ ಘಟನೆ ರಾಹುಲ್ ಗಾಂಧಿಯವರ ಆದೇಶದ ಮೇರೆಗೆ ನಡೆದಿದೆ ಎಂದು ನಾನು ನಂಬುತ್ತೇನೆ. ರಾಹುಲ್ ಗಾಂಧಿ, ಎಚ್ಚರಿಕೆಯಿಂದ ಆಲಿಸಿ, ಅಂತಹ ಘಟನೆ ಮತ್ತೊಮ್ಮೆ ನಡೆದರೆ, ನಾವು ನಿಮ್ಮ ಮನೆಗೆ ನುಗ್ಗಿ ನಿಮಗೆ ಗುಂಡಿಕ್ಕಿತ್ತೇವೆ. 25 ಸಂಸದರನ್ನು 24 ಗಂಟೆಗಳ ಒಳಗೆ ಬಂಧಿಸದಿದ್ದರೆ, ನಾವು ಅವರೆಲ್ಲರಿಗೂ ಗುಂಡು ಹಾರಿಸುತ್ತೇವೆ” ಎಂದೂ ಬೆದರಿಕೆ ಹಾಕಿದ್ದಾರೆ.

ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕೋಟಾದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಕೋಟಾದ ಪೊಲೀಸ್ ವರಿಷ್ಠಾಧಿಕಾರಿ ತೇಜಸ್ವಾನಿ ಗೌತಮ್, “ಆರೋಪಿಯನ್ನು ಬೋರ್ಖೇಡಾ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿದೆ ಮತ್ತು ವಿಡಿಯೋಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಲಾಗುತ್ತಿದೆ” ಎಂದು ತಿಳಿಸಿದ್ದಾರೆ.

WhatsApp Image 2025 11 17 at 4.20.34 PM
+ posts

ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಮಯೂರಿ ಬೋಳಾರ್
ಮಯೂರಿ ಬೋಳಾರ್
ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಫಕೀರನಂತೆ ‘ಜೋಳಿಗೆ’ ಎತ್ತಿಕೊಂಡು ಹೋಗುವ ಸಮಯ ಬಂತು, ಹೊರಡಿ ಮೋದಿಜಿ: ಕಾಂಗ್ರೆಸ್ ಲೇವಡಿ

ದೇಶಾದ್ಯಂತ ಔಷಧಿಗಳ ಬೆಲೆ ತೀವ್ರವಾಗಿ ಏರಿಕೆಯಾಗುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್ ಪ್ರಶಸ್ತಿ ವಿಜೇತ ಸಂಶೋಧನೆ‌

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ...

CEC ಗ್ಯಾನೇಶ್‌ ಕುಮಾರ್‌ ವಿರುದ್ಧ ಭುಗಿಲೆದ್ದ ಆಕ್ರೋಶ; ತೀವ್ರಗೊಂಡ ಮೋಶಾ ದಮನ ಕ್ರಮಗಳು

ಚುನಾವಣಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌...

ಸಿಇಸಿ ಗ್ಯಾನೇಶ್ ವಿರುದ್ಧ ಅರ್ಜಿ: ಕೇಂದ್ರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರು ಇತರ ಚುನಾವಣಾ...