ಕೇರಳದ ವಯನಾಡ್‌ನಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದು, ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡಲು ರಾಹುಲ್ ಗಾಂಧಿ ತಾವು ಪ್ರತಿನಿಧಿಸುವ ವಯನಾಡ್ ಕ್ಷೇತ್ರಕ್ಕೆ ತೆರಳಿದ್ದಾರೆ. ಸದ್ಯ, ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆಯುತ್ತಿದ್ದ ಭಾರತ್ ಜೋಡೋ ನ್ಯಾಯ್ ಯಾತ್ರೆ ಇಂದು ಸ್ಥಗಿತಗೊಂಡಿದ್ದು, ಭಾನುವಾರ ಮಧ್ಯಾಹ್ನ ಪ್ರಯಾಗರಾಜ್‌ನಿಂದ ಪುನಾರರಂಭವಾಗಲಿದೆ ಎಂದು ಕಾಂಗ್ರೆಸ್ ತಿಳಿಸಿದೆ.
ಶುಕ್ರವಾರ ಬೆಳಗ್ಗೆ ಕಾಡಾನೆ ದಾಳಿಯಿಂದ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೆ, ಶನಿವಾರ ಮೃತಪಟ್ಟಿದ್ದಾರೆ. ರೈತನ ಸಾವಿನ ಸುದ್ದಿ ತಿಳಿದ ರಾಹುಲ್ ಗಾಂಧಿ, ವಯನಾಡ್‌ಗೆ ತೆರಳಿದ್ದಾರೆ.
ಕಾಡಾನೆ ದಾಳಿಯಿಂದ ಸಾವನ್ನಪ್ಪಿದ ವ್ಯಕ್ತಿಯು ಅರಣ್ಯ ಇಲಾಖೆಯ ಪರಿಸರ ಪ್ರವಾಸೋದ್ಯಮ ಮಾರ್ಗದರ್ಶಿಯಾಗಿದ್ದರು. ಅವರು ಪ್ರಸಿದ್ಧ ಪ್ರವಾಸಿ ತಾಣವಾಗಿರುವ ಕುರುವ ದ್ವೀಪದಲ್ಲಿ ನೆಲೆಸಿದ್ದರು ಎಂದು ಅರಣ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾಹುಲ್ ಗಾಂಧಿ ವಯನಾಡ್‌ಗೆ ತೆರಳಿರುವ ಬಗ್ಗೆ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, “ವಯನಾಡ್‌ನಲ್ಲಿ ರಾಹುಲ್ ಗಾಂಧಿಯವರ ತುರ್ತು ಉಪಸ್ಥಿತಿಯ ಅಗತ್ಯವಿದೆ. ಹೀಗಾಗಿ, ಅವರು ಶನಿವಾ ಸಂಜೆ ವಾರಣಾಸಿಯಿಂದ ವಯನಾಡ್‌ಗೆ ಹೊರಟಿದ್ದಾರೆ. ಭಾರತ್ ಜೋಡೋ ನ್ಯಾಯ್ ಯಾತ್ರೆಯು ಭಾನುವಾರ ಮಧ್ಯಾಹ್ನ 3 ಗಂಟೆಗೆ ಪ್ರಯಾಗರಾಜ್‌ನಲ್ಲಿ ಪುನರಾರಂಭವಾಗಲಿದೆ” ಎಂದು ಹೇಳಿದ್ದಾರೆ.
वायनाड में @RahulGandhi की उपस्थिति की तत्काल आवश्यकता है। वह आज शाम 5 बजे वाराणसी से प्रस्थान कर रहे हैं। भारत जोड़ो न्याय यात्रा कल 18 फरवरी को दोपहर 3 बजे प्रयागराज में फिर से शुरू होगी।
Rahul Gandhi’s presence is required urgently in Wayanad. He is leaving this evening from…
— Jairam Ramesh (@Jairam_Ramesh) February 17, 2024