ಕೈಗಾರಿಕಾ ಪ್ರದೇಶಗಳಲ್ಲಿ ದಲಿತ ಉದ್ಯಮಿಗಳಿಗೆ ನಿಯಮಾನುಸಾರ ಜಾಗ ಮೀಸಲು: ಎಂ ಬಿ ಪಾಟೀಲ್‌

Date:

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಲಿಯಿಂದ ಅಭಿವೃದ್ಧಿಪಡಿಸಲಾಗಿರುವ ಕೈಗಾರಿಕಾ ಪ್ರದೇಶಗಳಲ್ಲಿ ಇನ್ನು ಮುಂದೆ ದಲಿತ ಉದ್ಯಮಿಗಳಿಗೆ ನಿಯಮಾನುಸಾರವಾಗಿ ಶೇ. 24.1ರಷ್ಟು ಜಾಗವನ್ನು‌ ಮೀಸಲಿಡಲಾಗುವುದು. ಈ ವಿಚಾರದಲ್ಲಿ ನಿಯಮಗಳ ಉಲ್ಲಂಘನೆಗೆ ಅವಕಾಶ ಕೊಡುವುದಿಲ್ಲ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.

ಸೋಮವಾರ ಖನಿಜ ಭವನದಲ್ಲಿ ತಮ್ಮನ್ನು ಭೇಟಿಯಾಗಿ ಈ ವಿಚಾರವನ್ನು ಪ್ರಸ್ತಾಪಿಸಿದ ಕರ್ನಾಟಕ ದಲಿತ ಉದ್ದಿಮೆದಾರರ ಸಂಘದ ಕಾರ್ಯಾಧ್ಯಕ್ಷ ಶ್ರೀನಿವಾಸನ್ ನೇತೃತ್ವದ ನಿಯೋಗಕ್ಕೆ ಅವರು ಈ ಭರವಸೆ ನೀಡಿದರು.

ನಿಯೋಗವು ಸಚಿವರ ಬಳಿ ಮಾತನಾಡಿ, “ಕೆಐಎಡಿಬಿ ಅಭಿವೃದ್ಧಿಪಡಿಸುವ ಕೈಗಾರಿಕಾ ಪ್ರದೇಶಗಳಲ್ಲಿ ದಲಿತ ಉದ್ಯಮಗಳಿಗೆ ನಿಯಮಾನುಸಾರ ಶೇಕಡ 24.1ರಷ್ಟು ಜಾಗವನ್ನು ಮೀಸಲಿಡಬೇಕು. ಆದರೆ ವಾಸ್ತವದಲ್ಲಿ ಇದು ಶೇ.16ರಷ್ಟು ಮಾತ್ರ ಜಾರಿಯಲ್ಲಿದೆ. ವಿಶೇಷವಾಗಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರ ಜಿಲ್ಲೆಯ 12 ಕೈಗಾರಿಕಾ ಪ್ರದೇಶಗಳಲ್ಲಿ ದಲಿತ ಉದ್ಯಮಿಗಳಿಗೆ 653 ಎಕರೆ ಜಾಗ ಕೊಡುವುದು ಬಾಕಿ ಇದೆ” ಎಂದು ಶ್ರೀನಿವಾಸ ಅವರು ಸಚಿವರ ಗಮನಕ್ಕೆ ತಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದಕ್ಕೆ ಸ್ಪಂದಿಸಿದ ಸಚಿವರು, “ಈಗಾಗಲೇ ಉದ್ದಿಮೆಗಳು ನೆಲೆಯೂರಿರುವ ಕೈಗಾರಿಕಾ ಪ್ರದೇಶಗಳಲ್ಲಿ ಏನನ್ನೂ ಮಾಡುವ ಸ್ಥಿತಿಯಲ್ಲಿಲ್ಲ. ಆದರೆ, ಅಕ್ಕಪಕ್ಕದ ಕೈಗಾರಿಕಾ ಪ್ರದೇಶಗಳಲ್ಲಿ ದಲಿತ ಉದ್ಯಮಿಗಳಿಗೆ ಶೇಕಡಾ 24.1ರಷ್ಟು ಜಾಗವನ್ನು ಮೀಸಲಿಡಲಾಗುವುದು. ಈ ವಿಷಯದಲ್ಲಿ ಸರಕಾರದ ಬದ್ಧತೆಯ ಬಗ್ಗೆ ಅನುಮಾನ ಬೇಡ. ಅಧಿಕಾರಿಗಳಿಗೆ ಈ ಬಗ್ಗೆ ತಕ್ಷಣವೇ ಸೂಚನೆ ಕೊಡಲಾಗುವುದು. ಜತೆಗೆ ನಿಮ್ಮ ಸಂಘದ ಜೊತೆ ಇನ್ನೊಂದು ಸುತ್ತಿನ ಸಭೆ ನಡೆಸಲಾಗುವುದು” ಎಂದು ಆಶ್ವಾಸನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಶ್ನಿಸದ ಸಂಸದರು, ಉತ್ತರಿಸದ ಪ್ರಧಾನಿ ಮತ್ತು ದಿಕ್ಕೆಟ್ಟ ದೇಶ

“ದಲಿತ ಉದ್ಯಮಿಗಳಿಗೆ ಕಾಂಗ್ರೆಸ್ ಸರಕಾರ ಬಂದ ಮೇಲೆ ಅನ್ಯಾಯವಾಗಿಲ್ಲ. ಹಿಂದಿನ ಸರಕಾರಗಳ ಅವಧಿಯಲ್ಲಿ ಈ ಸಮಸ್ಯೆ ಉಂಟಾಗಿದೆ. ನಮ್ಮ ಸರಕಾರವು ದಲಿತರ ಪರವಾಗಿದೆ. ಇದಕ್ಕೆ ತಕ್ಕಂತೆ ಮುಂದಿನ ಹೆಜ್ಜೆ ಇಡಲಾಗುವುದು” ಎಂದು ಅವರು ನುಡಿದರು.

ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಕೆಐಎಡಿಬಿ ಸಿಇಒ ಡಾ.ಮಹೇಶ್, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜ ಉಪಸ್ಥಿತರಿದ್ದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರ ಸರ್ಕಾರ ಉದ್ಯಮಿಗಳ ಏಳಿಗೆಗಾಗಿ ಮಾತ್ರ ಕೆಲಸ ಮಾಡುತ್ತಿದೆ: ರಾಹುಲ್‌ ಗಾಂಧಿ ವಾಗ್ದಾಳಿ

"ಕೇಂದ್ರ ಸರ್ಕಾರ 20-25 ಉದ್ಯಮಿಗಳ ಏಳಿಗೆಗಾಗಿ ಮಾತ್ರ ಕೆಲಸ ಮಾಡುತ್ತಿದೆ. ಉದ್ಯಮಿಗಳ...

ನರೇಂದ್ರ ಮೋದಿಯೇ ಭಾರತದ ದೊಡ್ಡ ಸಮಸ್ಯೆ: ಎಂ ಕೆ ಸ್ಟಾಲಿನ್

ಪ್ರಸ್ತುತ ಭಾರತದ ದೊಡ್ಡ ಸಮಸ್ಯೆ ಪ್ರಧಾನಿ ನರೇಂದ್ರ ಮೋದಿ ಅವರೇ ಆಗಿದ್ದಾರೆ...

ಪಿಎಸ್‌ಐ ಹಗರಣದ ಕಿಂಗ್‌ಪಿನ್ ಆರ್‌.ಡಿ ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ, ಸಂಸದ ಉಮೇಶ್ ಜಾಧವ್ ಭೇಟಿ

ಪೊಲೀಸ್‌ ಅಧಿಕಾರಿ ಆಗಬೇಕೆಂಬ ರಾಜ್ಯದ ಯುವಜನರ ಭವಿಷ್ಯವನ್ನೇ ಹಾಳು ಮಾಡಿದ್ದ ಪಿಎಸ್‌ಐ...

ರಾಮನವಮಿ | ‘ಎಎಪಿ ಕಾ ರಾಮ್‌ರಾಜ್ಯ’ ವೆಬ್‌ಸೈಟ್ ಪ್ರಾರಂಭಿಸಿದ ಎಎಪಿ

ಆಮ್ ಆದ್ಮಿ ಪಕ್ಷ (ಎಎಪಿ) ಬುಧವಾರ ರಾಮನವಮಿ ದಿನದಂದು 'ಎಎಪಿ ಕಾ...