ಮಂಡ್ಯ | ಕೇಸರಿ ಧ್ವಜ ತೆರವಿಗೆ ಹಿಂದುತ್ವವಾದಿಗಳ ವಿರೋಧ; ನಿಷೇಧಾಜ್ಞೆ ಜಾರಿ

Date:

Advertisements

ಗ್ರಾಮದಲ್ಲಿ ಹಾರಿಸಲಾಗಿದ್ದ ಕೇಸರಿ ಧ್ವಜವನ್ನು ತಾಲೂಕು ಪಂಚಾಯತಿ ಅಧಿಕಾರಿಗಳು ತೆರವುಗೊಳಿಸಲು ಮುಂದಾಗಿದ್ದು, ಹಿಂದುತ್ವವಾದಿ ಕಾರ್ಯಕರ್ತರು ಅಡ್ಡಿಪಡಿಸಿರುವ ಘಟನೆ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ನಡೆದಿದೆ. ಕೇಸರಿ ಧ್ವಜ ತೆರವಿಗೆ ಅಡ್ಡಿ ಪಡಿಸಿದ ಹಿಂದುತ್ವವಾದಿ ಕಾರ್ಯಕರ್ತರು ದಾಂಧಲೆ ನಡೆಸಿದ್ದು, ಪೊಲೀಸರು ಲಾಠಿಚಾರ್ಜ್‌ ಮಾಡಿದ್ದಾರೆ. ಗ್ರಾಮದಲ್ಲಿ 144 ಸೆಕ್ಷನ್‌ ಅಡಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಅಯೋಧ್ಯೆಯಲ್ಲಿ ನಡೆದ ರಾಮ ಪ್ರಾಣ ಪ್ರತಿಷ್ಠ ಕಾರ್ಯಕ್ರಮದ ಸಂಭ್ರಮದಲ್ಲಿ ಜನವರಿ 22ರಂದು ಕೆರಗೋಡು ಗ್ರಾಮದ ಸರ್ಕಾರಿ ಜಾಗದಲ್ಲಿ ಹಿಂದುತ್ವವಾದಿ ಕಾರ್ಯಕರ್ತರು ಕೇಸರಿ ಧ್ವಜ ಹಾರಿಸಿದ್ದರು. ಇದಕ್ಕೆ ಗ್ರಾಮದ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದರು. ಸರ್ಕಾರಿ ಜಾಗದಲ್ಲಿರುವ ಧ್ವಜಸ್ಥಂಭವನ್ನು ತೆರವುಗೊಳಿಸಲು ಆಗ್ರಹ ಕೇಳಿಬಂದಿತ್ತು.

ಅಲ್ಲದೆ, ಸರ್ಕಾರಿ ಜಾಗದಲ್ಲಿ ಧ್ವಜಸ್ಥಂಭ ನೆಡಬಾರದೆಂದು, ಅದನ್ನು ತೆರವುಗೊಳಿಸಲು ತಾಲೂಕು ಪಂಚಾಯತಿ ಅಧಿಕಾರಿಗಳಿಗೆ ಮೇಲಾಧಿಕಾರಿಗಳು ಸೂಚನೆ ನೀಡಿದ್ದರು. ಹೀಗಾಗಿ, ಭಾನುವಾರ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ವೀಣಾ ಅವರು ಗ್ರಾಮಕ್ಕೆ ತೆರಳಿ, ಧ್ವಜ ಮತ್ತು ಧ್ವಜಸ್ಥಂಭ ತೆರವಿಗೆ ಮುಂದಾಗಿದ್ದಾರೆ.

Advertisements

ಆದರೆ, ಬಜರಂಗ ದಳದ ಕಾರ್ಯಕರ್ತರು ತೆರವಿಗೆ ಅಡ್ಡಿಪಡಿಸಿದ್ದಾರೆ. ಧ್ವಜಸ್ಥಂಭವನ್ನು ತೆರವುಗೊಳಿಸಬಾರದು ಎಂದು ಪ್ರತಿಭಟನೆ ನಡೆಸಿದ್ದಾರೆ. ಹಿಂದುತ್ವವಾದಿ ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್‌ ನಡೆಸಿದ್ದಾರೆ.

ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಚಲುವರಾಯಸ್ವಾಮಿ, “ಗಣರಾಜ್ಯೋತ್ಸವದ ಹಂಗವಾಗಿ ರಾಷ್ಟ್ರಧ್ವಜ ಹಾರಿಸಲು ಪಂಚಾಯತಿಯಿಂದ ಅನುಮತಿ ಪಡೆದುಕೊಂಡಿದ್ದರು. ಆದರೆ, ಜನವರಿ 26ರಂದು ರಾಷ್ಟ್ರಧ್ವಜವನ್ನು ಇಳಿಸಿ, ಕೇಸರಿ ಧ್ವಜ ಹಾರಿಸಿದ್ದಾರೆ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X