ಮಂಡ್ಯ | ಪಾರ್ಕ್‌ನಲ್ಲಿ ವಾಕಿಂಗ್‌ ಮಾಡುತ್ತಲೇ ಸಾರ್ವಜನಿಕರ ಅಭಿಪ್ರಾಯ ಆಲಿಸಿದ ಶಾಸಕ ರವಿಕುಮಾರ್ ಗಣಿಗ

Date:

ಮಂಡ್ಯ ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿನ ಪಾರ್ಕ್‌ನಲ್ಲಿ ಭಾನುವಾರ ಬೆಳಗ್ಗೆ ವಾಕಿಂಗ್‌ಗೆ ತೆರಳಿದ್ದ ಶಾಸಕ ರವಿಕುಮಾರ್ ಗಣಿಗ ಅವರು ಮಂಡ್ಯದ ಅಭಿವೃದ್ಧಿಯ ಬಗ್ಗೆ ಸಾರ್ವಜನಿಕರ ಅಭಿಪ್ರಾಯ ಆಲಿಸಿದ್ದಾರೆ. ನಗರದ ಎಲ್ಲ ವಾರ್ಡ್‌ಗಳಲ್ಲಿ ರಸ್ತೆಗಳು, ಪಾದಚಾರಿ ಮಾರ್ಗ ಸೇರಿದಂತೆ ನೆನೆಗುದಿಗೆ ಬಿದ್ದಿರುವ ಹಲವು ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಕೆಲಸಗಳಿಗೆ ನಾಗರಿಕರ ಬೆಂಬಲದ ಅಗತ್ಯವಿದೆ ಎಂದು ಶಾಸಕರು ತಿಳಿಸಿದ್ದಾರೆ.

- Advertisement -

ಶಾಸಕರೊಂದಿಗೆ ಮಾತನಾಡಿದ ಸಾರ್ವಜನಿಕರು ಮಂಡ್ಯ ನಗರವನ್ನು ಅಭಿವೃದ್ಧಿ ಪಡಿಸಲು ಕೈಗೊಳ್ಳಬೇಕಾದ ಹಲವು ಕ್ರಮಗಳ ಬಗ್ಗೆ ಸಲಹೆ ನೀಡಿದ್ದಾರೆ. ಯುವ ಜನರು ಮಾದಕ ವ್ಯಸನಕ್ಕೆ ಬಲಿಯಾಗುತ್ತಿದ್ದಾರೆ. ಇದಕ್ಕೆ ಮೂಲ ಕಾರಣ ನಿರುದ್ಯೋಗ. ಯುವ ಜನರನ್ನು ಸರಿದಾರಿಗೆ ತರಲು ಮಂಡ್ಯದಲ್ಲಿ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸಬೇಕು. ಮಾದಕ ವಸ್ತುಗಳ ದಂಧೆಕೋರರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ನಗರವಾಸಿಗಳ ಸಲಹೆ, ಸೂಚನೆಗಳನ್ನು ಆಲಿಸಿದ ಶಾಸಕರು, “ಮಂಡ್ಯ ನಗರದ ಸಮಸ್ಯೆಗಳು ಕುರಿತು ಸದನದಲ್ಲಿ ಚರ್ಚಿಸುತ್ತೆನೆ. ಶೀಘ್ರದಲ್ಲಿ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳುತ್ತೇವೆ. ನನ್ನ ಕ್ಷೇತ್ರ ವ್ಯಾಪ್ತಿಯ ಸಾವಿರಾರು ಬಡಜನರು ಇಂದಿಗೂ ಸಹ ಸ್ವಂತ ನಿವೇಶನ ಹಾಗೂ ಮನೆ ಇಲ್ಲದೆ ಕಷ್ಟಪಡುತ್ತಿದ್ದಾರೆ. ಅದರೆ, ಬೇಕಾದಷ್ಟು ಸರ್ಕಾರಿ ಜಾಗಗಳು ದಾಖಲೆಗಳಲ್ಲಿ ಇದ್ದರೂ, ಹಲವೆಡೆ ಒತ್ತುವರಿ ಮಾಡಿಕೊಂಡಿದ್ದಾರೆ. ಒತ್ತುವರಿಯಾಗಿರುವ ಭೂಮಿಯನ್ನ ತೆರವುಗೊಳಿಸುವ ಬಗ್ಗೆ ಯೋಜಿಸಲಾಗುತ್ತಿದೆ” ಎಂದು ಹೇಳಿದ್ದಾರೆ.

“ಅಧಿಕಾರಾವಧಿಯ 5 ವರ್ಷಗಳಲ್ಲಿ ಕ್ಷೇತ್ರದ ಮತದಾರರಿಗೆ ಬೇಕಿರುವ ಸೌಲಭ್ಯಗಳಾದ ಶಿಕ್ಷಣ, ಆರೋಗ್ಯ ಹಾಗೂ ರೈತರು, ಕಾರ್ಮಿಕರು ಮತ್ತು ಮಹಿಳೆಯರ ಸುರಕ್ಷತೆಯ ಬಗ್ಗೆ ಸರ್ಕಾರದ ಜೊತೆ ಚರ್ಚಿಸಿ, ಕಾರ್ಯಗತಗೊಳಿಸಲು ಶ್ರಮಿಸುತ್ತೇನೆ. ಮಂಡ್ಯ ನಗರವನ್ನು ಅಭಿವೃದ್ಧಿ ಪಡಿಸುವ ಹೊಣೆ ನನ್ನ ಮೇಲಿದೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು | ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ವಿಸ್ತರಣೆ: ಬಸ್ ಕಂಡಕ್ಟರ್ ಆಗಿ ಟಿಕೆಟ್ ನೀಡಿದ ಸಿಎಂ ವಿಜಯ್

ತಮಿಳುನಾಡು ಸರ್ಕಾರವು ಮಹಿಳೆಯರಿಗಾಗಿ ಜಾರಿಗೆ ತಂದಿರುವ ಉಚಿತ ಬಸ್ ಪ್ರಯಾಣ ಯೋಜನೆಯನ್ನು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ ಮತ್ತು ಮೇಕೆ

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು...

ಜಂತರ್‌ ಮಂತರ್‌ನಲ್ಲಿ 500ಕ್ಕೂ ಅಧಿಕ ಮಂದಿ ಅರೆಸ್ಟ್: ‘ಗ್ಯಾನೇಶ್ ಕುಮಾರ್ ಬಂಧನವಾಗಲಿ’ ಎಂದ ನಾಯಕರು

ಎಸ್‌ಐಆರ್ ಮೊದಲಾದ ಪ್ರಕ್ರಿಯೆ ವಿಚಾರದಲ್ಲಿ ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ...

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...