ಮಂಡ್ಯ | ನನಗೆ ಬೇರೆಡೆ ಟಿಕೆಟ್​ ಪಡೆಯುವುದು ಕಷ್ಟವಲ್ಲ: ಸುಮಲತಾ ಅಂಬರೀಶ್

Date:

ನಿನ್ನೆ(ಫೆ.22) ದೆಹಲಿಯಲ್ಲಿ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ತಮ್ಮ ಪುತ್ರ ನಿಖಿಲ್‌ನೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು. ಇದಾದ ನಂತರ ಮಂಡ್ಯ, ಹಾಸನ, ಕೋಲಾರ ಲೋಕಸಭಾ ಕ್ಷೇತ್ರಗಳ ಟಿಕೆಟ್ ಜೆಡಿಎಸ್ ಪಾಲಾಗಿದೆ ಎಂದು ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು.

- Advertisement -

ಈ ಸುದ್ದಿಯ ಬೆನ್ನಲ್ಲೇ ಹೇಳಿಕೆ ನೀಡಿರುವ ಮಂಡ್ಯ ಕ್ಷೇತ್ರದ ಪ್ರಬಲ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಸಂಸದೆ ಸುಮಲತಾ ಅಂಬರೀಶ್, ಮಂಡ್ಯ ಟಿಕೆಟ್ ನನಗೇ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಲ್ಲದೇ, ನನಗೆ ಬೇರೆಡೆ ಟಿಕೆಟ್​ ಪಡೆಯುವುದು ಕಷ್ಟವಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಮಂಡ್ಯದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಮಂಡ್ಯ ಕ್ಷೇತ್ರ ಉಳಿಸಿಕೊಳ್ಳಬೇಕೆಂಬುದು ಬಿಜೆಪಿಗೆ ಮಂಡ್ಯ ಕ್ಷೇತ್ರದ ಟಿಕೆಟ್ ಸಿಗಬೇಕೆಂಬುದು ನನ್ನ ಹೋರಾಟ. ಟಿಕೆಟ್ ಘೋಷಣೆಯಾಗುವವರೆಗೂ ಅಂತೆಕಂತೆಗಳು ಕೇಳಿಬರುತ್ತಲೇ ಇರುತ್ತವೆ. ಹೈಕಮಾಂಡ್ ಏನು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಕಾದು ನೋಡೋಣ” ಎಂದಿದ್ದಾರೆ.

“ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ. ನಾನು ಈ ಬಾರಿ ಕೂಡ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಂಡಿತ. ಮಂಡ್ಯ ಬಿಡುವ ಪ್ರಶ್ನೆಯೇ ಇಲ್ಲ” ಎಂದು ಸಂಸದೆ ಸುಮಲತಾ ಅಂಬರೀಶ್ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ.

ಇದನ್ನು ಓದಿದ್ದೀರಾ? ವಿಪಕ್ಷ ನಾಯಕ ಸ್ಥಾನದಿಂದ ಅಶೋಕ್‌ರನ್ನು ಕೆಳಗಿಳಿಸಿ: ಬಿಜೆಪಿ ರಾಜ್ಯಾಧ್ಯಕ್ಷರಿಗೆ ಬಜರಂಗದಳ ಒತ್ತಾಯ

ಕುಮಾರಸ್ವಾಮಿ ದೆಹಲಿ ಭೇಟಿಯ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಜೆಡಿಎಸ್ ನಾಯಕರು ಬಿಜೆಪಿ ಹೈಕಮಾಂಡ್ ಅನ್ನು ಭೇಟಿ ಮಾಡಿ ತಮಗೆ ಟಿಕೆಟ್ ಸಿಗಬೇಕೆಂದು ಕೇಳುವುದು ಸಹಜ. ನನಗಂತೂ ಮಂಡ್ಯ ಕ್ಷೇತ್ರದ ಟಿಕೆಟ್ ಬಿಜೆಪಿ ಪಾಲಾಗುತ್ತದೆ ಎಂಬ ನಂಬಿಕೆಯಿದೆ. ನನಗೆ ಬೇರೆ ಕ್ಷೇತ್ರಗಳಲ್ಲಿ ಟಿಕೆಟ್ ಕೇಳುವುದು ಕಷ್ಟವೇನಲ್ಲ, ನನ್ನ ಮುಂದೆ ಹಲವು ಆಯ್ಕೆಗಳಿವೆ, ಆದರೆ ನಾನು ಮಂಡ್ಯ ಬಿಟ್ಟು ಬೇರೆ ಕಡೆಗೆ ಹೋಗುವ ಪ್ರಶ್ನೆಯೇ ಇಲ್ಲ. ಅಧಿಕೃತ ಟಿಕೆಟ್ ಘೋಷಣೆಯಾಗುವವರೆಗೂ ಹೀಗೆ ಅಂತೆ-ಕಂತೆಗಳು ಕೇಳಿಬರುತ್ತಲೇ ಇರುತ್ತವೆ” ಎಂದು ಸುಮಲತಾ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್ ಧರಣಿ ಸ್ಥಳ ರದ್ದತಿ ಖಂಡಿಸಿ ಎಸ್‌ಎಫ್‌ಐ, ಡಿವೈಎಫ್‌ಐ ಪ್ರತಿಭಟನಾ ಮೆರವಣಿಗೆ: ಹಲವು ನಾಯಕರು ಪೊಲೀಸ್ ವಶಕ್ಕೆ

ದೇಶದ ರಾಜಧಾನಿ ದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರಜಾಸತ್ತಾತ್ಮಕ ಪ್ರತಿಭಟನಾ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಓವೈಸಿ: ಅರ್ಜಿಯ ತುರ್ತು ವಿಚಾರಣೆಗೆ ಮನವಿ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ನಡೆಸುತ್ತಿರುವ ಚುನಾವಣಾ ಆಯೋಗದ...

ಪಶ್ಚಿಮ ಬಂಗಾಳ | ದುರ್ಗಾ ಪೂಜೆ ಪಂಡಾಲ್‌ನಲ್ಲಿ ಮಮತಾ ಮೇಲೆ ದಾಳಿ; ಟಿಎಂಸಿ ಮುಖಂಡರೇ ಗುರಿಯೆ?

ಈಗಾಗಲೇ ಸರಣಿ ದಾಳಿಯು ಟಿಎಂಸಿ ಕಾರ್ಯಕರ್ತರಲ್ಲಿ ಆತಂಕ ಸೃಷ್ಟಿಸಿದೆ. ಹೀಗಿರುವಾಗ ನಿನ್ನೆಯಷ್ಟೇ...

KPSC ಅಕ್ರಮ | ಫೋನ್ ಟ್ಯಾಪಿಂಗ್ ಆರೋಪದ ನೆರಳು; ಹೈಕೋರ್ಟ್ ಎಸ್‌ಐಟಿ ತಂಡಕ್ಕೆ ಸುಪ್ರೀಂ ಬ್ರೇಕ್

ಕರ್ನಾಟಕ ಲೋಕಸೇವಾ ಆಯೋಗದ (KPSC) ಗಂಭೀರ ಅಕ್ರಮ ಮತ್ತು ಭ್ರಷ್ಟಾಚಾರ ಪ್ರಕರಣಗಳ...