ಮಂಗಳೂರು | ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಸಿಎಂ ಶಂಕು ಸ್ಥಾಪನೆ

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಬಜೆಟ್‌ನಲ್ಲಿ ಘೋಷಿಸಿದ್ದಂತೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಮಂಗಳೂರಿನಲ್ಲಿ ಶುಕ್ರವಾರ ಶಂಕು ಸ್ಥಾಪನೆ ನೆರವೇರಿಸಿದರು.

ಬಳಿಕ ಮಾತನಾಡಿದ ಸಿದ್ದರಾಮಯ್ಯ, “ರಾಜೀವ್ ಗಾಂಧಿ ವಿವಿ, ಏಷ್ಯಾದ ಅತ್ಯಂತ ದೊಡ್ಡ ಆರೋಗ್ಯ ವಿಶ್ವ ವಿದ್ಯಾಲಯ ಆಗಿದೆ. 3.5 ಲಕ್ಷ ವೈದ್ಯ ವಿದ್ಯಾರ್ಥಿಗಳಿರುವ ಅತ್ಯಂತ ದೊಡ್ಡ ಆರೋಗ್ಯ ವಿವಿ ಇದಾಗಿದೆ. ಆದ್ದರಿಂದ ಗುಣಮಟ್ಟದ ವೈದ್ಯರನ್ನು ರೂಪಿಸುವುದರ ಜೊತೆಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವಲ್ಲಿ ರಾಜೀವ್ ಗಾಂಧಿ ವಿವಿಯ ಕೊಡುಗೆ ಅಪಾರ” ಎಂದರು.

“ಸರ್ಕಾರಿ ಆಸ್ಪತ್ರೆಗಳೂ ಖಾಸಗಿ ಆಸ್ಪತ್ರೆಗಳ ಮಾದರಿಯಲ್ಲಿ ಶುಚಿತ್ವ ಮತ್ತು ನಿರ್ವಹಣೆ ಕಾಪಾಡುವ ಜೊತೆಗೆ ಗುಣಮಟ್ಟದ ಚಿಕಿತ್ಸಾ ಸೌಲಭ್ಯ ಸಿಗುವಂತಾಗಬೇಕು. ಶ್ರೀಮಂತರು ಮತ್ತು ನಮ್ಮಂಥಾ ರಾಜಕಾರಣಿಗಳೂ ಸರ್ಕಾರಿ ಆಸ್ಪತ್ರೆಗೆ ಬರುವಂಥಾಗಬೇಕು ಎನ್ನುವ ದಿಕ್ಕಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದೇವೆ. ಜಿಲ್ಲೆಗೊಂದು ಸರ್ಕಾರಿ ವೈದ್ಯಕೀಯ ಕಾಲೇಜು ಇರಬೇಕು ಎನ್ನುವುದು ನನ್ನ ಗುರಿ. ಮಂಗಳೂರಿನಲ್ಲಿ ಉತ್ತಮ ಆರೋಗ್ಯ ಸೇವೆ ಇದ್ದರೂ ಈ ಜಿಲ್ಲೆಗೂ ಸರ್ಕಾರಿ ವೈದ್ಯಕೀಯ ಕಾಲೇಜಿನ ಅಗತ್ಯ ಇದೆ‌. ಈ ದಿಕ್ಕಿನಲ್ಲೂ ಸರ್ಕಾರ ಯೋಚಿಸಿ ಕ್ರಮ ಕೈಗೊಳ್ಳಲಿದೆ” ಎಂದು ಹೇಳಿದರು.

Advertisements

“ರಾಜೀವ್ ಗಾಂಧಿ ಆರೋಗ್ಯ ವಿವಿ ಆರೋಗ್ಯ ಸೇವೆ ಸರಳವಾಗಿ ಜನರಿಗೆ ಸಿಗುವ ದಿಕ್ಕಿನಲ್ಲಿ ಸಂಶೋಧನೆಗಳನ್ನು ಹೆಚ್ಚೆಚ್ಚು ನಡೆಸಬೇಕು. ದೇಶದ ಅತ್ಯುತ್ತಮ ಆರೋಗ್ಯ ಸೇವೆ ಬಡವರಿಗೂ ಸುಲಭವಾಗಿ ಸಿಗುವಂತೆ ಮಾಡಬೇಕು. ಈ ಕ್ಷೇತ್ರದ ಡಿಪ್ಲೊಮಾ ಮತ್ತು ಇತರೆ ಕೋರ್ಸ್ ಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ನೀಡಲಾಗುತ್ತಿದೆ. ವೈದ್ಯ ವಿಜ್ಞಾನ ಪದವೀಧರರೂ ಯುವ ನಿಧಿಗೆ ಅರ್ಹತೆ ಗಳಿಸಿದ್ದಾರೆ. ವೈದ್ಯ ವಿದ್ಯಾರ್ಥಿಗಳು ಇತರೆ ಕ್ಷೇತ್ರಗಳಿಗೆ ವಲಸೆ ಹೋಗದೆ ಆರೋಗ್ಯ ಕ್ಷೇತ್ರದಲ್ಲೇ ತಮ್ಮ ಸೇವೆ ಸಲ್ಲಿಸಬೇಕು” ಎಂದು ಕರೆ ನೀಡಿದರು.

BPL ಇದ್ದವರಿಗೆ ಉಚಿತ ಸೇವೆ

“BPL ಕಾರ್ಡ್ ಇದ್ದವರಿಗೆ ಎಲ್ಲಾ ರೀತಿಯ ಆರೋಗ್ಯ ಸೇವೆಯನ್ನು ಉಚಿತ ವಾಗಿ ನೀಡಿ ಎನ್ನುವ ಸೂಚನೆಯನ್ನು ವೈದ್ಯಕೀಯ ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ. ಬಡವರಿಗೂ ಕೂಡ ದೊಡ್ಡ ದೊಡ್ಡ ಕಾಯಿಲೆಗಳು ಬರುತ್ತಿವೆ. ಕಿಡ್ನಿ ಕಸಿಗೆ 5000 ಮಂದಿ ಸಾಲಿನಲ್ಲಿದ್ದಾರೆ. ಕಿಡ್ನಿ ದಾನಿಗಳು ಸಿಕ್ಕರೆ ನಿತ್ಯ ಕಿಡ್ನಿ ಕಸಿ ಮಾಡುವ ನುರಿತ ವೈದ್ಯರ ತಂಡ ನಮ್ಮಲ್ಲಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಭೂಮಾಲೀಕತ್ವದ ಇತಿಹಾಸ ತಿಳಿದುಕೊಳ್ಳಲು ಜಿಲ್ಲಾಧಿಕಾರಿ ಕರೆ

ಲಕ್ಷಾಂತರ ಮಂದಿ ಭೂರಹಿತರು ಭೂಮಾಲೀಕರಾಗಲು ಕಾರಣರಾದ ಭೂಸುಧಾರಣೆ ಕಾನೂನು ಮತ್ತು ಅಂದಿನ...

ಬೆಳ್ತಂಗಡಿ: ಎಸ್‌ಐಟಿಗೆ ಸಮಗ್ರ ತನಿಖೆ ನಡೆಸಲು ಸರ್ಕಾರ ಅವಕಾಶ ನೀಡಬೇಕು: ಸಮಾನ ಮನಸ್ಕ ಸಂಘಟನೆ

ಧರ್ಮಸ್ಥಳ ಗ್ರಾಮದ ವ್ಯಾಪ್ತಿಯಲ್ಲಿ ನೂರಾರು ಹೆಣಗಳನ್ನು ನನ್ನಿಂದ ಬಲವಂತವಾಗಿ ಹೂತು ಹಾಕಿಸಲಾಗಿದೆ...

ಮಂಗಳೂರು | ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರು

ಉಜಿರೆ ಖಾಸಗಿ ಆಸ್ಪತ್ರೆ ಮುಂಭಾಗ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X