ಮಂಗಳೂರು | ಕೋಲಾಹಲದ ನಡುವೆಯೇ ಕಾಂಗ್ರೆಸ್ ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ಘೋಷಿಸಿದ ಮುಸ್ಲಿಂ ಮುಖಂಡರು

Date:

Advertisements

ದ.ಕ ಜಿಲ್ಲೆಯ ಇತ್ತೀಚಿನ ಬೆಳವಣಿಗೆ ಮತ್ತು ರಾಜ್ಯ ಸರ್ಕಾರದ ಗೃಹ ಇಲಾಖೆಯ ವೈಫಲ್ಯಕ್ಕೆ ಮನನೊಂದು‌ ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರು ಸಾಮೂಹಿಕ ರಾಜೀನಾಮೆಯ ನಿರ್ಧಾರವನ್ನು ಸಾರ್ವಜನಿಕವಾಗಿ ಪ್ರಕಟಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕವು ಮೇ 29ರ ಮಧ್ಯಾಹ್ನ ನಗರದ ಬೋಳಾರದಲ್ಲಿರುವ ಶಾದಿಮಹಲ್‌ನ ಸಭಾಂಗಣದಲ್ಲಿ ಸಭೆ ಕರೆದು, ಈ ತೀರ್ಮಾನವನ್ನು ಪ್ರಕಟಿಸಿದ್ದಾರೆ.

ಸಭೆಯಲ್ಲಿದ.ಕ ಕನ್ನಡ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕೆ.ಕೆ ಶಾಹುಲ್ ಹಮೀದ್ ವೇದಿಕೆಯಲ್ಲಿ ಮಾತನಾಡುತ್ತಿರುವಾಗ ಕೋಲಾಹಲ ಉಂಟಾದ ಘಟನೆಯೂ ನಡೆಯಿತು. ಜಿಲ್ಲಾ ಘಟಕದ ಕರೆಗೆ ಸ್ಪಂದಿಸಿದ್ದ ಕಾಂಗ್ರೆಸ್‌ನ ನೂರಾರು ಮುಸ್ಲಿಂ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು. ಕಾರ್ಯಕರ್ತರ ಕೋಲಾಹಲದ ನಡುವೆಯೇ ಕಾಂಗ್ರೆಸ್ ಪಕ್ಷಕ್ಕೆ ಸಾಮೂಹಿಕ ರಾಜೀನಾಮೆಯನ್ನು ಘೋಷಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ? ಮಂಗಳೂರು | ಸಾಮೂಹಿಕ ರಾಜೀನಾಮೆಯಿಂದ ಹಿಂದೆ ಸರಿಯುವಂತೆ ದ.ಕ. ಅಲ್ಪಸಂಖ್ಯಾತ ಮುಖಂಡರಿಗೆ ಸಿಎಂ ಕರೆ

WhatsApp Image 2025 05 29 at 3.10.18 PM 1

ಜಮೀರ್ ಖಾನ್ ಅವರ ಮೊಬೈಲ್‌ನಲ್ಲಿ ದ.ಕ ಕನ್ನಡ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕೆ.ಕೆ ಶಾಹುಲ್ ಹಮೀದ್ ಅವರಿಗೆ ಗುರುವಾರ ಬೆಳಗ್ಗೆ ಕರೆ ಮಾಡಿದ್ದ ಸಿಎಂ ಸಿದ್ದರಾಮಯ್ಯ, ಸಾಮೂಹಿಕ ರಾಜೀನಾಮೆಯಿಂದ ಹಿಂದೆ ಸರಿಯುವಂತೆ ಮನವಿ ಮಾಡಿದ್ದರು ಕೂಡ ರಾಜೀನಾಮೆ ನಿರ್ಧಾರವನ್ನು ಬಹಿರಂಗವಾಗಿ ಘೋಷಿಸಿದ್ದಾರೆ.

ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ, ದ.ಕ ಕನ್ನಡ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕೆ.ಕೆ ಶಾಹುಲ್ ಹಮೀದ್, “ದೇಶದ ಅಲ್ಪಸಂಖ್ಯಾತರ ರಕ್ತದಲ್ಲಿ ಕಾಂಗ್ರೆಸ್ ಹರಿಯುತ್ತಿದೆ. ಎಲ್ಲಾ ಸಂಕಷ್ಟದ ಸಮಯದಲ್ಲೂ ಅಲ್ಪಸಂಖ್ಯಾತರು ಕಾಂಗ್ರೆಸ್ ಜೊತೆ ನಿಂತಿದ್ದಾರೆ. ಆದರೆ ಅಲ್ಪಸಂಖ್ಯಾತರ ಮೇಲೆ ಬಿಜೆಪಿ ಮತ್ತು ಸಂಘಪರಿವಾರ ನಡೆಸುವ ದೌರ್ಜನ್ಯಗಳಿಗೆ ಕಡಿವಾಣ ಹಾಕಲು ಕಾಂಗ್ರೆಸ್ ಸರಕಾರದಿಂದ ಸಾಧ್ಯವಾಗುತ್ತಿಲ್ಲ. ಮುಸ್ಲಿಮರಿಗೆ ರಕ್ಷಣೆ ನೀಡಲು ಸಾಧ್ಯವಾಗದ ನೀವು ಕಾಂಗ್ರೆಸ್ ಪಕ್ಷದಲ್ಲಿ ಯಾಕೆ ಇದ್ದೀರಿ ಎಂದು ನಮ್ಮ ತಾಯಿ, ಹೆಂಡತಿ, ಮಕ್ಕಳೇ ಪ್ರಶ್ನಿಸುತ್ತಿದ್ದಾರೆ” ಎಂದು ಬೇಸರ ಹೊರಹಾಕಿದರು.

WhatsApp Image 2025 05 29 at 4.48.02 PM

“ಅಬ್ದುಲ್ ರಹ್ಮಾನ್ ಹತ್ಯೆಯ ಬಳಿಕ ನಾವು ಆಸ್ಪತ್ರೆಗೆ ಹೋದಾಗ ಕಾಂಗ್ರೆಸ್ ನಲ್ಲಿರುವ ಮುಸ್ಲಿಮ್ ಕಾರ್ಯಕರ್ತರೇ ನಮ್ಮನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ನಿಮ್ಮನ್ನು ಹತ್ಯೆ ಮಾಡಬೇಕಿತ್ತು. ನಿಮ್ಮ ಮಕ್ಕಳನ್ನು ಹತ್ಯೆ ಮಾಡಬೇಕಿತ್ತು ಎಂದು ನಮ್ಮ ಕಾರ್ಯಕರ್ತರೇ ನಮ್ಮ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಸ್ಲಿಮರಿಗೆ ರಕ್ಷಣೆ ನೀಡಲು ಸಾಧ್ಯವಾಗದಿದ್ದರೆ ನೀವು ಕಾಂಗ್ರೆಸ್‌ನಲ್ಲಿ ಯಾಕೆ ಇದ್ದೀರಿ. ರಾಜೀನಾಮೆ ಕೊಟ್ಟು ಹೊರ ಬನ್ನಿ ಎಂದು ಸಮುದಾಯದಲ್ಲಿ ಒತ್ತಡ ಬರುತ್ತಿದೆ. ಈ ಹಿನ್ನೆಲೆಯಲ್ಲಿ ನಾವು ರಾಜೀನಾಮೆಗೆ ನಿರ್ಧಾರ ಮಾಡಿದ್ದೆವು. ಸಾಮೂಹಿಕ ರಾಜೀನಾಮೆಗೆ ಕಾಂಗ್ರೆಸ್‌ನ ಎಲ್ಲಾ ಮುಸ್ಲಿಮ್ ಕಾರ್ಯಕರ್ತರು, ನಾಯಕರು ಬೆಂಬಲ ಸೂಚಿಸಿದ್ದಾರೆ” ಎಂದು ತಿಳಿಸಿದ್ದಾರೆ.

“ಬೂತ್‌ ಮಟ್ಟದಿಂದ ರಾಜ್ಯಮಟ್ಟದವರೆಗೆ ಇರುವ ಜಿಲ್ಲೆಯ ಎಲ್ಲಾ ಮುಸ್ಲಿಮ್ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ಘೋಷಿಸುವ ಹಿನ್ನೆಲೆಯಲ್ಲಿ ಇಲ್ಲಿ ಇಂದು ಸಭೆ ಕರೆಯಲಾಗಿದೆ. ನಮ್ಮ ಸರಕಾರ ನಮ್ಮ ನಾಯಕರು ಇನ್ನಾದರೂ ಎಚ್ಚೆತ್ತು ಕೊಳ್ಳುತ್ತದೆಯೋ ಕಾದು ನೋಡಲು ಸಾಮೂಹಿಕ ರಾಜೀನಾಮೆಯ ನಿರ್ಧಾರವನ್ನು ನಮ್ಮ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನ ಮಾಡಿದ್ದೇವೆ. ಹಾಗಾಗಿ, ಎಲ್ಲರೂ ಸಾಮೂಹಿಕ ರಾಜೀನಾಮೆ ನೀಡುತ್ತಿದ್ದೇವೆ” ಎಂದು ದ.ಕ ಕನ್ನಡ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕೆ.ಕೆ ಶಾಹುಲ್ ಹಮೀದ್ ತಿಳಿಸಿದ್ದಾರೆ.

“ನಮ್ಮನ್ನು ನಾಯಿ, ಎಸಿಯಲ್ಲಿ ಕೂತುಕೊಳ್ಳುವವರು ಎಂದು ನಿಂದಿಸಿದ್ದಾರೆ. ಗೃಹ ಸಚಿವ ಬಂದರೂ, ಉಸ್ತುವಾರಿ ಸಚಿವ ಬಂದರೂ ಜಿಲ್ಲೆಯಲ್ಲಿ ಶಾಂತಿ ನೆಲೆಸುತ್ತಿಲ್ಲ” ಎಂದು ಶಾಹುಲ್ ಹಮೀದ್ ನೋವು ತೋಡಿಕೊಂಡಿದ್ದಾರೆ.

ಕೆಕೆ

“ದಕ್ಷಿಣ ಕನ್ನಡದ ಇತ್ತೀಚಿನ ವಿದ್ಯಮಾನಗಳು ಮತ್ತು ಪೊಲೀಸ್ ಇಲಾಖೆಯ ವೈಫಲ್ಯದ ಬಗ್ಗೆ ಸರ್ಕಾರಕ್ಕೆ ಸಂಪೂರ್ಣ ಮಾಹಿತಿ ಇದೆ, ತಕ್ಷಣವೇ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಅಮೂಲಾಗ್ರ ಬದಲಾವಣೆ ತಂದು ಶಾಂತಿ ಸ್ಥಾಪಿಸುತ್ತೇವೆ, ದಕ್ಷ ಅಧಿಕಾರಿಗಳನ್ನು ನೇಮಿಸುತ್ತೇವೆ, ಕೋಮುವಾದಿ ಸಮಾಜಘಾತುಕರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ, ಅನ್ಯಾಯಕ್ಕೊಳಗಾದ ಕುಟುಂಬಕ್ಕೆ ನ್ಯಾಯ ಒದಗಿಸುತ್ತೇವೆ, ಸರ್ಕಾರ ನಿಮ್ಮ ಜೊತೆ ಇದೆ, ತಕ್ಷಣವೇ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಬಿ.ಕೆ ಹರಿಪ್ರಸಾದ್ ಅವರನ್ನು ಮಂಗಳೂರಿಗೆ ಕಳಿಸುತ್ತೇನೆ, ನಿಮ್ಮ ಅಹವಾಲುಗಳನ್ನು ಅವರ ಬಳಿ ಹೇಳಿ, ನಿಮ್ಮ ಬೇಡಿಕೆಗಳನ್ನು ಪೂರೈಸುತ್ತೇವೆ” ಎಂದು ಸಿಎಂ ಸಿದ್ದರಾಮಯ್ಯ ಅವರು ಶಾಹುಲ್ ಹಮೀದ್ ಕೆ ಕೆ ಅವರ ಬಳಿ ಭರವಸೆ ನೀಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X