ಮಂಗಳೂರಿನ ಜನ ಲೋಕಸಭೆ ಚುನಾವಣೆಯಲ್ಲಿ ಬದಲಾವಣೆ ಮಾಡುವ ವಿಶ್ವಾಸವಿದೆ: ಡಿ ಕೆ ಶಿವಕುಮಾರ್

Date:

ಕರಾವಳಿ ಭಾಗದಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ವ್ಯಾಪಾರ ವಹಿವಾಟುಗಳು ಕುಸಿದಿವೆ. ಇಲ್ಲಿ ಮಕ್ಕಳು ವಿದ್ಯಾಭ್ಯಾಸದಿಂದ ದೂರ ಉಳಿಯುತ್ತಿದ್ದು, ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಈ ಕಾರಣಕ್ಕಾಗಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕರಾವಳಿ ಭಾಗದ ಜನ ಬದಲಾವಣೆ ಮಾಡುವ ವಿಶ್ವಾಸವಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಶಿವಕುಮಾರ್ ಉತ್ತರಿಸಿ, “ರಾಜಕೀಯದಲ್ಲಿ ಯಾವುದೂ ಶಾಶ್ವತವಿಲ್ಲ. ಅಸಾಧ್ಯ ಎಂಬುದಿಲ್ಲ. ರಾಜಕಾರಣ ಎಂದರೆ ಸಾಧ್ಯತೆಗಳ ಕಲೆ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಜನ ಇಲ್ಲಿ ಬದಲಾವಣೆ ಮಾಡಲಿದ್ದಾರೆ ಎಂಬ ನಂಬಿಕೆ ಇದೆ” ಎಂದರು.

” ಭಾಗದಲ್ಲಿ ನಿರುದ್ಯೋಗದ ಸಮಸ್ಯೆ ಇದೆ. ಇಲ್ಲಿ ಪಾಸಾಗುವ ಯುವಕರು ಮತ್ತು ವಿದ್ಯಾರ್ಥಿಗಳು ಉದ್ಯೋಗಕ್ಕಾಗಿ ಬೆಂಗಳೂರು, ಮುಂಬೈ, ಸೌದಿಗೆ ಹೋಗುತ್ತಿದ್ದಾರೆ. ಈ ಭಾಗದಲ್ಲಿ ಶಾಂತಿ ಕದಡಲಾಗುತ್ತಿದೆ. ಈ ಭಾಗದಲ್ಲಿ ಅನೇಕ ಮೆಡಿಕಲ್, ಇಂಜಿನಿಯರ್ ಕಾಲೇಜುಗಳಿವೆ. ಅನೇಕ ಮಕ್ಕಳು ಇಲ್ಲಿ ಬಿಜೆಪಿಯ ಧರ್ಮದ ಬಲೆಗೆ ಬಿದ್ದು ಶಿಕ್ಷಣದಿಂದ ದೂರ ಉಳಿಯುತ್ತಿದ್ದಾರೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಬಿಜೆಪಿ ಅಭಿವೃದ್ಧಿ ವಿಚಾರ ಬಿಟ್ಟು ಭಾವನಾತ್ಮಕ ವಿಚಾರವನ್ನು ಮುಂದಿಡುತ್ತಿದೆ. ಅದಕ್ಕಾಗಿ ನಾವು ನಮ್ಮ ಪ್ರಣಾಳಿಕೆಯಲ್ಲಿ ಹೊಸ ಆಲೋಚನೆ ಮಾಡುವುದಾಗಿ ಹೇಳಿದ್ದೆವು. ನಿನ್ನೆಯ ಬಜೆಟ್ ನಲ್ಲೂ ಮೀನುಗಾರರು ಹಾಗೂ ಕರಾವಳಿ ಭಾಗದಲ್ಲಿ ಹೊಸ ನೀತಿ ತರಲು ಘೋಷಣೆ ಮಾಡಿದ್ದೇವೆ. ಈ ವಿಚಾರವಾಗಿ ಸಲಹೆ ಕೇಳಲಾಗಿದೆ. ಈ ಭಾಗದಲ್ಲಿ ಉದ್ಯೋಗ ಸೃಷ್ಟಿಸಬೇಕಾಗಿದೆ. ಸಂಜೆ 7 ಗಂಟೆ ನಂತರ ಈ ಭಾಗದ ಪ್ರದೇಶದಲ್ಲಿ ಜನ ಓಡಾಟ ಕಡಿಮೆ ಮಾಡಿದ್ದಾರೆ. ವ್ಯಾಪಾರ ವಹಿವಾಟು ಕುಂಠಿತವಾಗಿದೆ. ವ್ಯಾಪಾರ ವಹಿವಾಟು ಆದಾಗಲೇ ಜನಕ್ಕೆ ಉದ್ಯೋಗ ಸಿಗುತ್ತದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಪೀಠಾಧಿಪತಿ ಆಯ್ಕೆ ವಿವಾದ: ರಂಭಾಪುರಿ ಶ್ರೀಗಳ ಕಾರಿಗೆ ಚಪ್ಪಲಿ ಎಸೆದು ಆಕ್ರೋಶ

ಪೊಲೀಸರ ಕೆಲಸದಲ್ಲಿ ಹಸ್ತಕ್ಷೇಪ ಮಾಡಲ್ಲ

ಜೊರೋಸಾ ಶಾಲೆ ವಿವಾದದಲ್ಲಿ ಶಾಸಕರ ವಿರುದ್ಧದ ಪ್ರಕರಣ ಹಿಂಪಡೆಯದಿದ್ದರೆ ಪ್ರತಿಭಟನೆ ಮಾಡುತ್ತೇವೆ ಎಂಬ ಬಿಜೆಪಿ ಹೇಳಿಕೆ ಬಗ್ಗೆ ಕೇಳಿದಾಗ, “ಅವರು ಮಾಡುತ್ತಿರಲಿ. ಕಾನೂನಿನ ಪ್ರಕಾರ ಕ್ರಮ ವಹಿಸಲಾಗುತ್ತದೆ. ಪೊಲೀಸರು ಅವರ ಕೆಲಸ ಮಾಡುತ್ತಾರೆ. ನಾನು ಅವರ ಕೆಲಸದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ” ಎಂದು ತಿಳಿಸಿದರು.

ಮುಸಲ್ಮಾನರಿಗೆ ಶೇ.1ರಷ್ಟು ಅನುದಾನ ನೀಡಬಾರದೇ?

ದಕ್ಷಿಣ ಕನ್ನಡ ಭಾಗದ ತೆರಿಗೆ ನಮಗೆ ಬೇಕು ಎಂಬ ಬೇಡಿಕೆ ಬಗ್ಗೆ ಕೇಳಿದಾಗ, “ನಮ್ಮ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು ಕೇಳಿದಾಗ ಅವರು ಧ್ವನಿ ಎತ್ತಲಿಲ್ಲ. ನಾವು ಮುಸಲ್ಮಾನರಿಗೆ ಎಷ್ಟು ಕೊಟ್ಟಿದ್ದೇವೆ? 3.71 ಲಕ್ಷ ಕೋಟಿಯಲ್ಲಿ 3 ಸಾವಿರ ಕೋಟಿ ಶಾಲೆಗಳು ಹಾಗೂ ಇತರೆ ಅಭಿವೃದ್ಧಿಗೆ ನೀಡಿದ್ದೇವೆ. ಮುಸ್ಲೀಮರಿಗೆ ಬಜೆಟ್ ನಲ್ಲಿ ಶೇ.1 ರಷ್ಟು ಅನುದಾನ ನೀಡಬಾರದೇ? ಬಿಜೆಪಿಯವರು ರಾಜಕಾರಣ ಮಾಡಲಿಕ್ಕೆ ಈ ರೀತಿ ಹೇಳುತ್ತಾರೆ” ಎಂದರು.

ಸುರೇಶ್ ವಿರುದ್ಧ ಕುಮಾರಸ್ವಾಮಿ ನಿಂತರೂ ಸ್ವಾಗತ

ಡಿ ಕೆ ಸುರೇಶ್ ವಿರುದ್ಧ ಮೈತ್ರಿ ಅಭ್ಯರ್ಥಿಯಾಗಿ ಡಾ. ಮಂಜುನಾಥ್ ಅವರನ್ನು ನಿಲ್ಲಿಸಲು ಚರ್ಚೆ ನಡೆಯುತ್ತಿರುವ ಬಗ್ಗೆ ಕೇಳಿದಾಗ, “ನಾನು ದೇವೇಗೌಡರ ವಿರುದ್ಧ ಸ್ಪರ್ಧೆ ಮಾಡಿದ್ದೆ. ಕುಮಾರಸ್ವಾಮಿ ಅವರ ವಿರುದ್ಧ ಸ್ಪರ್ಧಿಸಿದ್ದೆ. ಬಿಜೆಪಿ ಹಾಗೂ ಜೆಡಿಎಸ್ ಸೇರಿ ಕುಮಾರಸ್ವಾಮಿ ಅವರ ಧರ್ಮಪತ್ನಿ ಅವರನ್ನು ನಿಲ್ಲಿಸಿದಾಗ ಅವರ ವಿರುದ್ಧ ನನ್ನ ತಮ್ಮ ಸ್ಪರ್ಧೆ ಮಾಡಿದ್ದರು. ಆಗಲೂ 1.35 ಲಕ್ಷ ಮತಗಳಿಂದ ಗೆದ್ದಿದ್ದೆವು. ಕುಮಾರಸ್ವಾಮಿ ಸೇರಿದಂತೆ ಅವರು ಯಾರನ್ನಾದರೂ ನಿಲ್ಲಿಸಲಿ. ನಮಗೆ ನಮ್ಮ ಮತದಾರರಿದ್ದಾರೆ” ಎಂದು ಹೇಳಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಯೋತ್ಪಾದನಾ ಚಟುವಟಿಕೆ ನಿಯಂತ್ರಣಕ್ಕೆ ಟಾಸ್ಕ್‌ ಫೋರ್ಸ್‌ ರಚಿಸಿ: ಆರ್‌.ಅಶೋಕ್ ಆಗ್ರಹ

‌ಭಯೋತ್ಪಾದಕರು ಬಿಜೆಪಿ ಕಚೇರಿಯಲ್ಲಿ ಬಾಂಬ್‌ ಸ್ಫೋಟಿಸುವ ಸಂಚು ಮಾಡಿದ್ದು ಅತ್ಯಂತ ಖಂಡನೀಯ....

ಕನ್ನಡದ ಬೇರೆ ಬೇರೆ ನಟಿಯರಿಗೂ ಅಶ್ಲೀಲ ಸಂದೇಶ ಕಳುಹಿಸಿದ್ದ ರೇಣುಕಸ್ವಾಮಿ

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ ಆಗಿರುವ ಪ್ರದೋಶ್ ದಾಖಲಿಸಿರುವ...

ರೇಣುಕಸ್ವಾಮಿ‌ ಕೊಲೆ ಪ್ರಕರಣ | ಆರೋಪಪಟ್ಟಿ ಗೌಪ್ಯ ಮಾಹಿತಿ ಪ್ರಕಟಿಸದಂತೆ ಹೈಕೋರ್ಟ್ ನಿರ್ಬಂಧ

ರೇಣುಕಸ್ವಾಮಿ‌ ಕೊಲೆ ಪ್ರಕರಣದ ಸಂಬಂಧಿತ ಆರೋಪ ಪಟ್ಟಿಯಲ್ಲಿನ ಗೌಪ್ಯ ಮಾಹಿತಿಯನ್ನು ಪ್ರಸಾರ,...

ದೋಷಾರೋಪ ಪಟ್ಟಿ ಎಂಬುದು ಗೌಪ್ಯ ದಾಖಲಾತಿ ಏನಲ್ಲ: ಗೃಹ ಸಚಿವ ಪರಮೇಶ್ವರ್

ರಾಮೇಶ್ವರಂ ಕೆಫೆ ‌ಸ್ಫೋಟ ಪ್ರಕರಣದ ತನಿಖೆಯನ್ನು ಎನ್‌ಐಎ ಕೈಗೊಂಡಿದ್ದು, ದೋಷಾರೋಪ ಪಟ್ಟಿಯಲ್ಲಿ...