ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ರಾಜಭವನಕ್ಕೆ ತೆರಳುವ ಮಾರ್ಗದಲ್ಲಿ ಜನರ ಭಾವನೆಗಳನ್ನು ಗೌರವಿಸಿ ರಾಜೀನಾಮೆ ನೀಡದಿರಲು ನಿರ್ಧರಿಸಿದ್ದಾರೆ ಎಂದು ಹಿರಿಯ ಸಚಿವ ಗೋವಿಂದಸ್ ಕೊಂತೌಜಮ್ ಶುಕ್ರವಾರ ಮಧ್ಯಾಹ್ನ ಜನಸಮೂಹಕ್ಕೆ ತಿಳಿಸಿದರು.
ಹೆಚ್ಚಿನ ಸಂಖ್ಯೆಯ ಮಹಿಳೆಯರು ಸೇರಿದಂತೆ ಜನಸಮೂಹ ಗುಂಪು ಮಧ್ಯಾಹ್ನ 2.30ರ ಸುಮಾರಿಗೆ ರಾಜಭವನಕ್ಕೆ ಮುಖ್ಯಮಂತ್ರಿ ಒಯ್ಯುತ್ತಿದ್ದ ರಾಜೀನಾಮೆ ಪತ್ರವನ್ನು ಹರಿದು ಹಾಕಿದರು.
ಇಂಫಾಲದಲ್ಲಿರುವ ಮುಖ್ಯಮಂತ್ರಿ ಅವರ ಅಧಿಕೃತ ನಿವಾಸದ ಮುಂದೆ ಜನರು ಜಮಾಯಿಸಿದ ಜನರು ರಾಜಭವನಕ್ಕೆ ತೆರಳುತ್ತಿದ್ದ ಮುಖ್ಯಮಂತ್ರಿಯನ್ನು ತಡೆದು ರಾಜೀನಾಮೆ ನೀಡದಂತೆ ಮನವಿ ಮಾಡಿದರು.
ಟಿವಿ ಚಾನಲ್‌ಗಳು ಹರಿದ ರಾಜೀನಾಮೆ ಪತ್ರವನ್ನು ಪ್ರಸಾರ ಮಾಡಿದವು. ಹರಿದ ರಾಜೀನಾಮೆ ಪತ್ರದಲ್ಲಿ ಬಿರೇನ್ ಸಿಂಗ್ ಅವರು ರಾಜ್ಯಪಾಲರಾದ ಅನುಸೂಯಾ ಉಯ್ಕೆ ಅವರಿಗೆ ಸಲ್ಲಿಸಲು ಸಹಿ ಹಾಕಿದ್ದರು.
ಇದಕ್ಕೂ ಮೊದಲು, ಸಿಂಗ್ ಅವರು ತಮ್ಮ ನಿವಾಸದಲ್ಲಿ ಬೆಳಗ್ಗೆ 8 ಗಂಟೆಗೆ ಸಂಪುಟ ಸಚಿವರ ಸಭೆಯನ್ನು ಕರೆದಿದ್ದರು. ಅದರಲ್ಲಿ ತಾವು ರಾಜೀನಾಮೆ ನೀಡುವ ನಿರ್ಧಾರವನ್ನು ಪ್ರಕಟಿಸಿದರು. ಈ ಬಗ್ಗೆ ಮಣಿಪುರದ ಪ್ರಮುಖ ಇಂಗ್ಲಿಷ್ ದೈನಿಕ ಸುದ್ದಿ ಪ್ರಕಟಿಸಿತ್ತು.

ವರದಿಯ ಪ್ರಕಾರ, ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರ ರಾಜೀನಾಮೆ ಸುದ್ದಿಯನ್ನು ಪತ್ರಿಕೆಯಲ್ಲಿ ಪ್ರಕಟಿಸುವ ಆಯ್ಕೆಯನ್ನು ಪತ್ರಿಕಾ ಮಂಡಳಿಗೆ ನೀಡಲಾಗಿತ್ತು ಅಥವಾ ಕೇಂದ್ರವು ಮಧ್ಯಪ್ರವೇಶಿಸಿ ಮುಂದಿನ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ ಎನ್ನಲಾಗಿತ್ತು.
ಈ ಸುದ್ದಿ ಓದಿದ್ದೀರಾ? ಪ್ರಯಾಣಿಕರಿಗೆ ಮದ್ಯ ಕೊಂಡೊಯ್ಯಲು ಅವಕಾಶ ನೀಡಿದ ದೆಹಲಿ ಮೆಟ್ರೋ
“ಮುಖ್ಯಮಂತ್ರಿ ಅವರು ರಾಜೀನಾಮೆ ನೀಡುವ ಸಾಧ್ಯತೆಯಿದೆ ಎಂದು ಸಿಂಗ್ ಅವರಿಗೆ ನಿಕಟವಾಗಿರುವ ಮಣಿಪುರದ ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ ಬೆಳಗ್ಗೆ ಸುದ್ದಿ ಮಾಧ್ಯಮಕ್ಕೆ ತಿಳಿಸಿದ್ದರು.
ಮುಖ್ಯಮಂತ್ರಿ ಬಿರೇನ್ ಸಿಂಗ್ ಸಂಪುಟ ಸಚಿವರ ಸಭೆಗೂ ಮೊದಲು ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮುಂತಾದವರನ್ನು ಭೇಟಿ ಮಾಡಿ ಮಣಿಪುರದ ಪರಿಸ್ಥಿತಿ ಮತ್ತು ಶಾಂತಿ ಮರುಸ್ಥಾಪನೆಗೆ ತೆಗೆದುಕೊಂಡ ಕ್ರಮಗಳ ಬಗ್ಗೆ ತಿಳಿಸಿದ್ದರು.
ಜೂನ್‌ನಲ್ಲಿ ಮಣಿಪುರದ ಒಂಬತ್ತು ಬಿಜೆಪಿ ಶಾಸಕರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು, ಎನ್ ಬಿರೇನ್ ಸಿಂಗ್ ನೇತೃತ್ವದ ಸರ್ಕಾರದ ಮೇಲೆ ರಾಜ್ಯದ ಜನರು ಸಂಪೂರ್ಣ ನಂಬಿಕೆ ಕಳೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿ ಭೇಟಿ
ಮಣಿಪುರ ರಾಜ್ಯದ ಚುರಾಚಂದ್‌ಪುರದಲ್ಲಿ ಜನಾಂಗೀಯ ಹಿಂಸಾಚಾರದಿಂದ ನಿರಾಶ್ರಿತರಾದ ಜನರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗುರುವಾರ(ಜೂನ್ 29) ಪರಿಹಾರ ಶಿಬಿರದಲ್ಲಿ ಭೇಟಿ ಮಾಡಿದರು. ಪರಿಹಾರ ಶಿಬಿರದಲ್ಲಿ ಮಕ್ಕಳೊಂದಿಗೆ ರಾಹುಲ್ ಗಾಂಧಿ ಊಟ ಮಾಡಿದರು. ಪೋಷಕರು ಹಾಗೂ ಹಿರಿಯ ನಾಯಕರ ಕಷ್ಟಸುಖಗಳನ್ನು ಹಂಚಿಕೊಂಡರು. ಅಲ್ಲದೆ ಹಿಂಸಾಚಾರಕ್ಕೆ ಡಬಲ್ ಇಂಜಿನ್ ಸರ್ಕಾರದ ಆಡಳಿತವೆ ಕಾರಣ ಎಂದು ವಾಗ್ದಾಳಿ ನಡೆಸಿದರು.
ಮಣಿಪುರದಲ್ಲಿ ಕೇಂದ್ರದ ಮಧ್ಯಪ್ರವೇಶವಾಗಬೇಕೆಂದು ಪ್ರತಿಭಟನಾಕಾರರು ಮತ್ತು ರಾಜಕೀಯ ಪಕ್ಷಗಳ ಪ್ರಮುಖ ಬೇಡಿಕೆಯಾಗಿದೆ. ಒಂದು ತಿಂಗಳ ಹಿಂದೆ, ಮಣಿಪುರದ ಕುಕಿ ಸಮುದಾಯದ ಸದಸ್ಯರು ಮುಖ್ಯಮಂತ್ರಿಯ ಮೇಲಿನ ನಂಬಿಕೆಯನ್ನು ಕಳೆದುಕೊಂಡ ನಂತರ ಮಣಿಪುರದಲ್ಲಿ ಸಾಮಾನ್ಯ ಸ್ಥಿತಿಗೆ ತರಲು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಜೂನ್‌ನಲ್ಲಿ ಮಣಿಪುರದ ಒಂಬತ್ತು ಬಿಜೆಪಿ ಶಾಸಕರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು, ಎನ್ ಬಿರೇನ್ ಸಿಂಗ್ ನೇತೃತ್ವದ ಸರ್ಕಾರದ ಮೇಲೆ ರಾಜ್ಯದ ಜನರು ಸಂಪೂರ್ಣ ನಂಬಿಕೆ ಕಳೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಮಣಿಪುರದಲ್ಲಿ ಮೀತೀ ಮತ್ತು ಕುಕಿ ಸಮುದಾಯಗಳ ನಡುವೆ ನಡೆಯುತ್ತಿರುವ ಜನಾಂಗೀಯ ಘರ್ಷಣೆಗಳಿಂದ ಇಲ್ಲಿಯವರೆಗೆ 100 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.