ಕ್ರಿಶ್ಚಿಯನ್ ಧರ್ಮವನ್ನು ಭಾರತದಿಂದ ನಾಶಗೊಳಿಸಲು ಸಾಧ್ಯವಿಲ್ಲ; ಕೇರಳ ಆರ್ಚ್ ಬಿಷಪ್ ಕೌನ್ಸಿಲ್‌ ಅಧ್ಯಕ್ಷ

Date:

Advertisements

ಕ್ರಿಶ್ಚಿಯನ್ ಧರ್ಮವನ್ನು ಭಾರತದಿಂದ ನಾಶಪಡಿಸಲು ಸಾಧ್ಯವಿಲ್ಲ ಎಂದು ಕೇರಳ ಕ್ಯಾಥೋಲಿಕ್ ಬಿಷಪ್ ಕೌನ್ಸಿಲ್ ಅಧ್ಯಕ್ಷ ಕಾರ್ಡಿನಲ್ ಮಾರ್ ಬಸೆಲಿಯೋಸ್ ಕ್ಲೀಮಿಸ್ ಅವರು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮಣಿಪುರದಲ್ಲಿ ಮೈತೇಯಿ ಮತ್ತು ಕುಕಿ ಬುಡಕಟ್ಟು ಸಮುದಾಯಗಳ ನಡುವಿನ ಘರ್ಷಣೆಯಿಂದಾಗಿ ನಡೆಯುತ್ತಿರುವ ಅಶಾಂತಿಗೆ ಸಂಬಂಧಿಸಿದಂತೆ ಕೇರಳ ಎರ್ನಾಕುಲಂ ಜಿಲ್ಲೆಯ ಮುವಾಟ್ಟುಪ್ಝಾದಲ್ಲಿ ಕಾಂಗ್ರೆಸ್ ಶಾಸಕ ಮ್ಯಾಥ್ಯೂ ಕುಜಲ್ನಾಡನ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಹಿಂಸಾಚಾರ ಪೀಡಿತ ಮಣಿಪುರದಲ್ಲಿ ತಕ್ಷಣವೇ ಶಾಂತಿಯನ್ನು ಮರುಸ್ಥಾಪಿಸಲು ಕೇಂದ್ರದ ಮಧ್ಯಸ್ಥಿಕೆಗೆ ಒತ್ತಾಯಿಸಿದ ಕ್ಲೀಮಿಸ್, ಈ ವಿಷಯದ ಬಗ್ಗೆ ಮೌನ ಮುರಿಯಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದರು.

Advertisements

ಪ್ರಧಾನಿ ನರೇಂದ್ರ ಮೋದಿ ಮೌನ ಮುರಿಯಬೇಕು. ಈ ದೇಶದ ಸಮಗ್ರತೆಯನ್ನು ಜಗತ್ತಿಗೆ ಸಾರಬೇಕು. ಭಾರತದಲ್ಲಿ ಪ್ರಜಾಪ್ರಭುತ್ವವಿದೆ ಎಂಬ ಸಂದೇಶವನ್ನು ಜಗತ್ತಿಗೆ ತಿಳಿಸಲು ಇದು ಅವರಿಗೆ ಉತ್ತಮ ಅವಕಾಶ. ನಮ್ಮ ಸಂವಿಧಾನದಲ್ಲಿ ಬರೆಯಲಾದ ಜಾತ್ಯಾತೀತ ಎಂಬ ಪದವು ಅಲಂಕಾರಿಕ ಪದವಲ್ಲ, ಅದು ಜಾರಿಗೊಳಿಸಿದ ತತ್ವಶಾಸ್ತ್ರವಾಗಿದೆ. ಯಾವುದೇ ಧರ್ಮವನ್ನು ಅನುಸರಿಸುವ ಮತ್ತು ಆಚರಿಸುವ ಹಕ್ಕನ್ನು ನಮ್ಮ ಶ್ರೇಷ್ಠ ಸಂವಿಧಾನದಿಂದ ಏಕೆ ಮರೆಮಾಚಿಸಲಾಗುತ್ತಿದೆ ಎಂದು ಪ್ರಶ್ನಿಸಿದ ಕ್ಲೀಮಿಸ್ ಕೇಂದ್ರವು ಮಣಿಪುರದಲ್ಲಿ ಶಾಂತಿಯನ್ನು ಮರುಸ್ಥಾಪಿಸುವಲ್ಲಿ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಶ್ವಾನಗಳೊಂದಿಗೆ 42ನೇ ಹುಟ್ಟುಹಬ್ಬ ಆಚರಿಸಿಕೊಂಡ ಧೋನಿ

ಮಣಿಪುರದಲ್ಲಿ ಎರಡು ಸಮುದಾಯಗಳ ನಡುವೆ ಗಲಭೆ ನಡೆದು 65 ದಿನಗಳಾಗಿವೆ. ಸರ್ಜಿಕಲ್ ಸ್ಟ್ರೈಕ್‌ ನಡೆಸುವ ಸರ್ಕಾರಕ್ಕೆ ಗಲಭೆಗಳನ್ನು ನಿಯಂತ್ರಿಸಲು ಏಕೆ ಸಾಧ್ಯವಾಗುತ್ತಿಲ್ಲ ಎಂದು ಕ್ಲೀಮಿಸ್ ಪ್ರಶ್ನಿಸಿದರು.

ಕೇರಳದ ಕ್ರಿಶ್ಚಿಯನ್ ಬಿಷಪ್‌ಗಳು ಮತ್ತು ವಿವಿಧ ಧರ್ಮಪ್ರಾಂತ್ಯಗಳು ಈ ವಿಷಯದಲ್ಲಿ ಮಧ್ಯಪ್ರವೇಶಿಸಬೇಕೆಂದು ಕೇಂದ್ರವನ್ನು ಒತ್ತಾಯಿಸಿವೆ.

ಮೇ 3 ರಂದು ರಾಜ್ಯದ ಗುಡ್ಡಗಾಡು ಜಿಲ್ಲೆಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಸ್ಥಾನಮಾನದ ಬೇಡಿಕೆಯನ್ನು ವಿರೋಧಿಸಿ ಮಣಿಪುರದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಉದ್ವಿಗ್ನತೆ ಉಲ್ಬಣಗೊಂಡಿತು.

ಇಲ್ಲಿಯವರೆಗೆ ನಡೆದಿರುವ ಹಿಂಸಾಚಾರದಲ್ಲಿ 100 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರು ನಿರಾಶ್ರಿತರಾಗಿ ಪರಿಹಾರ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ. ಅರೆಸೇನೆ ಪಡೆಯ ಬೃಹತ್ ಉಪಸ್ಥಿತಿಯ ಹೊರತಾಗಿಯೂ, ರಾಜಕೀಯ ನಾಯಕರ ಮನೆಗಳನ್ನು ಸುಟ್ಟುಹಾಕುವುದು, ವ್ಯಾಪಕ ಲೂಟಿ ಮತ್ತು ಮುಂತಾದ ಹಿಂಸಾಚಾರಗಳು ನಡೆಯುತ್ತಲೇ ಇವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X