ಮಣಿಪುರ ಹಿಂಸಾಚಾರ | ಮೋದಿ ತುಟಿ ಬಿಚ್ಚಲು ಅತ್ಯಂತ ಹೇಯ ಕೃತ್ಯವೇ ನಡೆಯಬೇಕಾಯಿತು

Date:

ಮಣಿಪುರ ಹಿಂಸಾಚಾರದ ಬಗ್ಗೆ ಮೋದಿ ತುಟಿ ಬಿಚ್ಚಲು ಅತ್ಯಂತ ಹೇಯ ಕೃತ್ಯವೇ ನಡೆಯಬೇಕಾಯಿತು ಎಂದು ಪ್ರಧಾನಿ ಮೋದಿ ಅವರ ಬೇಜವ್ದಾರಿ ಧೋರಣೆಯನ್ನು ಕರ್ನಾಟಕ ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ.

ಕಳೆದ 80 ದಿನಗಳಿಂದ ಮಣಿಪುರದಲ್ಲಿ ಹಿಂಸಾಚಾರ ನಡೆಯುತ್ತಿದೆ. ಮೇ 4ರಂದು ವಿಕೃತ ಮನಸ್ಸಿನ ಪುರುಷರ ಗುಂಪೊಂದು ಇಬ್ಬರು ಮಹಿಳೆಯರನ್ನು ಬೆತ್ತಲೆ ಗೊಳಿಸಿ, ಮೆರವಣಿಗೆ ಮಾಡಿ, ಸಾಮೂಹಿಕ ಅತ್ಯಾಚಾರ ಎಸಗಿತ್ತು. ಕೃತ್ಯದ ವಿಡಿಯೋವನ್ನು ಬುಧವಾರ (ಜುಲೈ 18) ದುಷ್ಕರ್ಮಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಘಟನೆಯನ್ನು ಇಡೀ ದೇಶವೇ ಖಂಡಿಸಿದೆ.

ದೇಶದ ಆಕ್ರೋಶ ಮಣಿದ ಪ್ರಧಾನಿ ಮೋದಿ ಗುರುವಾರ ಕೃತ್ಯದ ಬಗ್ಗೆ ಮಾತನಾಡಿದ್ದಾರೆ. ‘ಘಟನೆಯ ವಿಡಿಯೋ ಕಂಡು ಆಘಾತಕ್ಕೊಳಗಾಗಿದ್ದೇನೆ. ಮಣಿಪುರದ ಹೆಣ್ಣು ಮಕ್ಕಳ ಮೇಲಾಗಿರುವ ದೌರ್ಜನಯವನ್ನು ಕ್ಷಮಿಸಲು ಸಾಧ್ಯವಿಲ್ಲ. ಆರೋಪಿಗಳನ್ನು ಸುಮ್ಮನೆ ಬಿಡುವುದಿಲ್ಲ’ ಎಂದು ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮೋದಿ ಅವರ ಹೇಳಿಕೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಕಾಂಗ್ರೆಸ್‌, “ಜಗತ್ತಿನೆದುರು ಭಾರತ ತಲೆ ತಗ್ಗಿಸುವಂತಹ ಘಟನೆಗಳು ಬಿಜೆಪಿ ಆಡಳಿತದ ಮಣಿಪುರದಲ್ಲಿ ಜರುಗುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇದುವರೆಗೂ ಅಲ್ಲಿಗೆ ಭೇಟಿ ನೀಡಬೇಕೆಂದು ಮನಸ್ಸಾಗಲಿಲ್ಲ. ಅವರು ಮಣಿಪುರದ ಬಗ್ಗೆ ತುಟಿ ಬಿಚ್ಚಲು ಅತ್ಯಂತ ಹೇಯ ಕೃತ್ಯವೇ ನಡೆಯಬೇಕಾಯಿತು” ಎಂದು ಟ್ವೀಟ್‌ ಮಾಡಿ, ಕಿಡಿಕಾರಿದೆ.

“ಗಲಭೆಗಳಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಂಡ ಮೋದಿಯವರಿಗೆ ಇದೆಲ್ಲಾ ಸಹಜ ಎನ್ನಿಸುತ್ತಿರಬಹುದೇ” ಎಂದು ಪ್ರಶ್ನಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ಚಲೋ | ಪ್ರಜ್ವಲ್‌ನನ್ನು 54ನೇ ಭಯೋತ್ಪಾದಕನೆಂದು ಹೆಸರಿಸಬೇಕು: ವಕೀಲ ಎಸ್‌ ಬಾಲನ್

ಭಾರತದಲ್ಲಿ 53 ಮಂದಿಯನ್ನು ಭಯೋತ್ಪಾದಕರು ಎಂದು ಸರ್ಕಾರ ಪಟ್ಟಿಮಾಡಿದೆ. ಪ್ರಜ್ವಲ್ ರೇವಣ್ಣ...

ಹಾಸನ ಚಲೋ | ಬಳ್ಳಾರಿ ರೀತಿಯಲ್ಲಿ ಹಾಸನದಲ್ಲಿರುವ ಪಾಳೆಗಾರಿಕೆಯನ್ನು ಬಗ್ಗುಬಡಿಯಬೇಕು: ಎಸ್‌.ಆರ್ ಹಿರೇಮಠ್‌

ದೇಶದಲ್ಲಿ ಮೂರು ಉತ್ಕೃಷ್ಟ ಸತ್ಯಾಗ್ರಹಗಳು ನಡೆದಿವೆ. ಒಂದು, ಅಂಬೇಡ್ಕರ್ ನೇತೃತ್ವದ ಮಹಾರ್...

ದೇಶ ಉಳಿಸಲು 100 ಬಾರಿ ಜೈಲಿಗೆ ಹೋಗಲು ಸಿದ್ಧ: ಅರವಿಂದ್ ಕೇಜ್ರಿವಾಲ್

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಅಬಕಾರಿ ನೀತಿ ಪ್ರಕರಣದಲ್ಲಿ ನೀಡಲಾದ...

ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದ 48 ಗಂಟೆಗಳಲ್ಲಿ ಪ್ರಧಾನಿ ಆಯ್ಕೆ: ಜೈರಾಮ್‌ ರಮೇಶ್

ಲೋಕಸಭಾ ಚುನಾವಣೆಯಲ್ಲಿ ವಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟ ಗೆಲುವು ಸಾಧಿಸಲಿದ್ದು, 48 ಗಂಟೆಯಲ್ಲಿ...