ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ದಿಂದ ಸ್ಥಳಾಂತರಗೊಂಡ 50 ಸಾವಿರಕ್ಕೂ ಹೆಚ್ಚು ಜನರು ಪ್ರಸ್ತುತ ರಾಜ್ಯಾದ್ಯಂತವಿರುವ 349 ಪರಿಹಾರ ಶಿಬಿರಗಳಲ್ಲಿ ವಾಸ್ತವ್ಯ ಹೂಡಿದ್ದಾರೆ ಎಂದು ರಾಜ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಸಚಿವ ಡಾ. ಆರ್.ಕೆ. ರಂಜನ್ ಭಾನುವಾರ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಜಿಲ್ಲೆಗಳಲ್ಲಿ ವಿಶೇಷವಾಗಿ ದುರ್ಬಲ ಪ್ರದೇಶಗಳಲ್ಲಿ ಕೂಂಬಿಂಗ್ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದ್ದು, ಕಾರ್ಯಾಚರಣೆಯಲ್ಲಿ 53 ಶಸ್ತ್ರಾಸ್ತ್ರಗಳು ಮತ್ತು 39 ಸ್ಪೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಜನಾಂಗೀಯ ಹಿಂಸಾಚಾರದಿಂದ ತೊಂದರೆಗೀಡಾದ ವಿದ್ಯಾರ್ಥಿಗಳ ಶಿಕ್ಷಣದ ಮಾರ್ಗಸೂಚಿಯನ್ನು ಪಡೆದುಕೊಳ್ಳಲಾಗಿದೆ ಮತ್ತು ಶೀಘ್ರದಲ್ಲೇ ಸಾರ್ವಜನಿಕಗೊಳಿಸಲಾಗುವುದು ಎಂದು ರಾಜ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಸಚಿವ ಡಾ. ಆರ್ ಕೆ ರಂಜನ್ ಹೇಳಿದ್ದಾರೆ.
ಜನಾಂಗೀಯ ಹಿಂಸಾಚಾರದಿಂದ ಸ್ಥಳಾಂತರಗೊಂಡ ಒಟ್ಟು 50,698 ಜನರು ಪ್ರಸ್ತುತ 349 ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ. ಪರಿಹಾರ ಶಿಬಿರಗಳಲ್ಲಿ ವಿಶೇಷವಾಗಿ ಮಹಿಳೆಯರು, ವೃದ್ಧರು ಮತ್ತು ಮಕ್ಕಳಿಗಾಗಿ ತೆರೆಯಲಾಗಿರುವ ಪರಿಹಾರ ಕೇಂದ್ರಗಳ ಉಸ್ತುವಾರಿ ನೋಡಿಕೊಳ್ಳಲು ಜಿಲ್ಲಾ ಮತ್ತು ಕ್ಲಸ್ಟರ್ ನೋಡಲ್ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ರಂಜನ್ ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಕರ್ನಾಟಕದ ಸೋಲಿನಿಂದಾಗಿ ಬಿಜೆಪಿಯಿಂದ ಅವಧಿಪೂರ್ವ ಲೋಕಸಭಾ ಚುನಾವಣೆ ಘೋಷಣೆ: ಎಂ ಕೆ ಸ್ಟಾಲಿನ್
ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ತಡೆಯಲು ಬೆಲೆ ನಿಯಂತ್ರಣ ಕಾರ್ಯವಿಧಾನವನ್ನು ಜಾರಿಗೆ ತರಲಾಗಿದೆ. ರಾಷ್ಟ್ರೀಯ ಹೆದ್ದಾರಿಗಳ ಮೂಲಕ ರಾಜ್ಯಕ್ಕೆ ವಿವಿಧ ಸರಕು ಸಾಮಗ್ರಿಗಳನ್ನು ತರಲಾಗುತ್ತಿದೆ. ಮೇ ಆರಂಭದಲ್ಲಿ ಹಿಂಸಾಚಾರ ಭುಗಿಲೆದ್ದ ನಂತರ 35 ಸಾವಿರ ಮೆಟ್ರಿಕ್ ಟನ್‌ಗಳಷ್ಟು ನಿರ್ಮಾಣ ಸಾಮಗ್ರಿಗಳು, ಇಂಧನಗಳು ಮತ್ತು ಅಗತ್ಯ ವಸ್ತುಗಳನ್ನು 2,376 ಟ್ರಕ್‌ಗಳಲ್ಲಿ ಮಣಿಪುರಕ್ಕೆ ಕೊಂಡೊಯ್ಯಲಾಗಿದೆ. ಅಸ್ತಿತ್ವದಲ್ಲಿರುವ 242 ಬ್ಯಾಂಕ್ ಶಾಖೆಗಳಲ್ಲಿ ಒಟ್ಟಾರೆಯಾಗಿ 198 ಈಗ ಕಾರ್ಯನಿರ್ವಹಿಸುತ್ತಿವೆ ಮತ್ತು ಉಳಿದವುಗಳನ್ನು ಶೀಘ್ರದಲ್ಲೇ ಕಾರ್ಯಗತಗೊಳಿಸಲಾಗುವುದು ಎಂದು ರಂಜನ್ ಹೇಳಿದರು.
ಗಮನಾರ್ಹವಾಗಿ, ಮೇ ತಿಂಗಳ ಆರಂಭದಲ್ಲಿ ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದಾಗ ಪೊಲೀಸ್ ಠಾಣೆಗಳಿಂದ ಹೆಚ್ಚಿನ ಸಂಖ್ಯೆಯ ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡಲಾಯಿತು. ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಬ್ಬರೂ ತಮ್ಮ ಶಸ್ತ್ರಾಸ್ತ್ರಗಳನ್ನು ಒಪ್ಪಿಸುವಂತೆ ಜನರಿಗೆ ಮನವಿ ಮಾಡಿದ್ದರು. ಮನವಿಯ ಮೇರೆಗೆ ಒಟ್ಟಾರೆ 990 ಶಸ್ತ್ರಾಸ್ತ್ರಗಳು ಮತ್ತು 13,526 ಮದ್ದುಗುಂಡುಗಳನ್ನು ಸರ್ಕಾರಕ್ಕೆ ಒಪ್ಪಿಸಲಾಗಿದೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.
ಸೇನೆ ಮತ್ತು ಅರೆಸೇನಾ ಪಡೆಗಳು ರಾಜ್ಯ ಪೊಲೀಸರ ಸಹಯೋಗದಲ್ಲಿ ರಾಜ್ಯದಲ್ಲಿ ಶಾಂತಿಯನ್ನು ಮರಳಿ ತರಲು ಕೂಂಬಿಂಗ್ ಕಾರ್ಯಾಚರಣೆಗಳನ್ನು ನಡೆಸುತ್ತಿವೆ.
ಮೈತೇಯಿ ಸಮುದಾಯವು ಪರಿಶಿಷ್ಟ ಪಂಗಡದ (ಎಸ್‌ಟಿ) ಸ್ಥಾನಮಾನಕ್ಕಾಗಿ ಕಣಿವೆಯ ಜಿಲ್ಲೆಗಳಲ್ಲಿ ‘ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆ’ ಆಯೋಜಿಸಿದ ನಂತರ ಮೇ 3 ರಂದು ಮೊದಲು ಘರ್ಷಣೆಗಳು ಪ್ರಾರಂಭವಾದವು.
ಮಣಿಪುರದ ಜನಸಂಖ್ಯೆಯ ಶೇಕಡ 53 ರಷ್ಟಿರುವ ಮೈತೇಯಿಗಳು ಇಂಫಾಲ್ ಕಣಿವೆಯಲ್ಲಿ ಹೆಚ್ಚಾಗಿ ವಾಸಿಸುತ್ತಿದ್ದಾರೆ. ಬುಡಕಟ್ಟು ಸಮುದಾಯದ ನಾಗಾಗಳು ಮತ್ತು ಕುಕಿಗಳು ಜನಸಂಖ್ಯೆಯ ಶೇ 40 ರಷ್ಟಿದ್ದು ಇತರ ಜಿಲ್ಲೆಗಳ ಗುಡ್ಡಗಾಡು ಪ್ರದೇಶಗಳಲ್ಲಿ ಜೀವನ ನಡೆಸುತ್ತಿದ್ದಾರೆ.
Result of hate mongers ruling, kick out them in 5024.