ದೆಹಲಿ ಅಬಕಾರಿ ಹಗರಣ |ಸಿಸೋಡಿಯಾಗೆ ಏಪ್ರಿಲ್ 3ರವರೆಗೆ ನ್ಯಾಯಾಂಗ ಬಂಧನ

Date:

  • ಸಿಸೋಡಿಯಾ ಇ.ಡಿ ಬಂಧನ ಮಾ.22ರವರೆಗೆ ವಿಸ್ತರಣೆ
  • ಪ್ರಕರಣದಲ್ಲಿ ವಿಚಾರಣೆ ನಡೆಸುತ್ತಿರುವ ಇ.ಡಿ, ಸಿಬಿಐ

ದೆಹಲಿ ಸರ್ಕಾರದ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೆ ಒಳಪಟ್ಟಿರುವ ಮಾಜಿ ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಅವರ ಸಿಬಿಐ ನ್ಯಾಯಾಂಗ ಬಂಧನದ ಅವಧಿಯನ್ನು ಏಪ್ರಿಲ್‌ 3ರವರೆಗೆ 14 ದಿನಗಳ ಕಾಲ ವಿಸ್ತರಿಸಿ ದೆಹಲಿ ನ್ಯಾಯಾಲಯ ಸೋಮವಾರ (ಮಾರ್ಚ್‌ 20) ಆದೇಶಿಸಿದೆ.

ಈ ಆದೇಶದಿಂದ ಮನೀಶ್‌ ಸಿಸೋಡಿಯಾ ಏಪ್ರಿಲ್‌ 3ರವರೆಗೆ ನ್ಯಾಯಾಂಗ ಬಂಧನದಲ್ಲಿ ಇರಲಿದ್ದಾರೆ. ಮಾರ್ಚ್‌ 17 ರಂದು ವಿಚಾರಣೆ ನಡೆಸಿದ್ದ ನ್ಯಾಯಾಲಯ ಸಿಸೋಡಿಯಾ ಜಾರಿ ನಿರ್ದೇಶನಾಲಯದ (ಇ.ಡಿ) ಬಂಧನವನ್ನು ಮಾರ್ಚ್‌ 22ರವರೆಗೆ ವಿಸ್ತರಿಸಿತ್ತು.  

ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ನೇತೃತ್ವದ ಸರ್ಕಾರ ಜಾರಿಗೊಳಿಸಿದ್ದ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಹಗರಣದ ಪ್ರಕರಣಕ್ಕೆ ಸಂಬಂಧಿಸಿ ಸಿಸೋಡಿಯಾ ಅವರನ್ನು ಸಿಬಿಐ ಫೆಬ್ರವರಿ 26 ರಂದು ಬಂಧಿಸಿತ್ತು. ಸಿಸೋಡಿಯಾ ಅವರನ್ನು ತಿಹಾರ್‌ ಜೈಲಿನಲ್ಲಿರಿಸಲಾಗಿತ್ತು. ಅದೇ ಪ್ರಕರಣಕ್ಕೆ ಸಂಬಂಧಿಸಿ ಇ.ಡಿ ಸಿಸೋಡಿಯಾ ಅವರನ್ನು ಮಾರ್ಚ್‌ 9ರಂದು ಬಂಧಿಸಿತ್ತು.

ರೋಸ್‌ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶರಾದ ಎಂ.ಕೆ. ನಾಗ್ಪಾಲ್‌ ಮಾರ್ಚ್‌ 6 ರಂದು ಸಿಸೋಡಿಯಾ ಅವರನ್ನು 14 ದಿನ ಸಿಬಿಐ ಬಂಧನಕ್ಕೆ ಒಪ್ಪಿಸಿದ್ದರು. ಬಂಧನದ ಅವಧಿ ಸೋಮವಾರಕ್ಕೆ ಮುಕ್ತಾಯಗೊಂಡಿತು.

ಇ.ಡಿ ಅಧಿಕಾರಿಗಳು ಆಮ್‌ ಆದ್ಮಿ ಪಕ್ಷದ ಹಿರಿಯ ನಾಯಕರಾಗಿರುವ ಮನೀಶ್‌ ಸಿಸೋಡಿಯಾ ಅವರ ವಿರುದ್ಧ ಹಣ ಅಕ್ರಮ ವರ್ಗಾವಣೆ ಆರೋಪದ ಮೇಲೆ ತನಿಖೆ ನಡೆಸುತ್ತಿದ್ದಾರೆ.

ನ್ಯಾಯಾಲಯ ಸಿಸೋಡಿಯಾ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಮಂಗಳವಾರ (ಮಾರ್ಚ್‌ 21) ನಡೆಸಲಿದೆ. ಸಿಬಿಐ ಕೂಡ ಇದೇ ಪ್ರಕರಣವನ್ನು ತನಿಖೆ ನಡೆಸುತ್ತಿದೆ.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

3ನೇ ಕಂತಿಗಾಗಿ ಮತ್ತೆ ಬಂದ ಸುರ್ಜೇವಾಲ: ಸಿ ಟಿ ರವಿ ಆರೋಪ

ಕಾಂಗ್ರೆಸ್ ಯಾವಾಗಲೂ ಚುನಾವಣೆ ನಡೆಸುವುದೇ ಕಡೇ 3 ದಿನದಲ್ಲಿ ...

ಚಂದ್ರಬಾಬು ನಾಯ್ಡು ಜಾಮೀನು ಷರತ್ತು ಸಡಿಲಿಸಿದ ಸುಪ್ರೀಂ; ರ‍್ಯಾಲಿ, ಸಭೆಗಳಲ್ಲಿ ಭಾಗವಹಿಸಲು ಅನುಮತಿ

ಕೌಶಲ್ಯಾಭಿವೃದ್ಧಿ ಕಾರ್ಯಕ್ರಮ ಹಗರಣ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿ ಷರತ್ತಾಗಿ ಸಾರ್ವಜನಿಕ...

ಜನತಾ ದರ್ಶನದ ಮೂಲಕ ರಾಜ್ಯದ ‘ಆಡಳಿತ’ ಸಿಎಂಗೆ ಮನವರಿಕೆಯಾಗಿರಬಹುದು: ಕುಮಾರಸ್ವಾಮಿ

ಎಲ್ಲದಕ್ಕೂ ಸರ್ಕಾರವನ್ನು ಟೀಕಿಸಲ್ಲ ಎಂದ ಜೆಡಿಎಸ್ ರಾಜ್ಯಾಧ್ಯಕ್ಷ ನಮ್ಮ ಶಕ್ತಿ...