ಸಿಂಗ್‌ ಅವರು ಉದಾರೀಕರಣ ಜಾರಿ ಮಾಡಿ ದೇಶವನ್ನು ಆರ್ಥಿಕ ಸಂಕಷ್ಟದಿಂದ ಮೇಲೆತ್ತಿದರು: ಸಿದ್ದರಾಮಯ್ಯ

Date:

ಮನಮೋಹನ್ ಸಿಂಗ್ ಅವರ ಬದುಕಿನ ಮಾರ್ಪಾಡು ನೋಡಿದಾಗ ಆಶ್ಚರ್ಯ ಆಗತ್ತೆ. ಅತ್ಯಂತ ಕಡುಬಡತನದ ಕುಟುಂಬದಲ್ಲಿ ಜನಿಸಿ, ದೇಶ ಕಂಡ ವಿಶ್ವಶ್ರೇಷ್ಠ ಆರ್ಥಿಕ ತಜ್ಞರಾಗಿ ಎರಡು ಬಾರಿ ದೇಶದ ಪ್ರಧಾನಿಯಾದರು. ದೇಶದ ಮಧ್ಯಮ ಮತ್ತು ಬಡ ಜನರ ಹಿತಕ್ಕಾಗಿ ದೇಶದ ಆರ್ಥಿಕತೆಯನ್ನು ರೂಪಿಸಿದ್ದರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

- Advertisement -

ಬೆಳಗಾವಿಯ ಸಿಪಿಇಡಿ ಮೈದಾನದಲ್ಲಿ ಕೆಪಿಸಿಸಿ ವತಿಯಿಂದ ಆಯೋಜಿಸಲಾಗಿದ್ದ ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರ ಸಂತಾಪ ಸಭೆಯಲ್ಲಿ ಮಾತನಾಡಿ, “ಇವರಿಗಿಂತ ದೊಡ್ಡ ಆರ್ಥಿಕ ತಜ್ಞರು ಇರಬಹುದು. ಆದರೆ, ಬಹಳ ಮೃದು ಸ್ವಭಾವದ, ಮಿತ ಭಾಷಿಯಾಗಿ ಮಧ್ಯಮ ಮತ್ತು ಬಡ ಜನರ ದೃಷ್ಟಿಯಿಂದ ಈ ಜನರ ಹಿತಕ್ಕಾಗಿ ದೇಶದ ಆರ್ಥಿಕತೆಯನ್ನು ರೂಪಿಸಿದವರು. ನಾನು ಹಲವು ಬಾರಿ ಇವರನ್ನು ಭೇಟಿಯಾಗಿದ್ದೆ. ಸಂಯಮದಿಂದ ನಮ್ಮ ಮಾತನ್ನು ಕೇಳಿಸಿಕೊಂಡು ಬಳಿಕ ಪ್ರಾಮಾಣಿಕ ಅಭಿಪ್ರಾಯ ನೀಡುತ್ತಿದ್ದರು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

“ತಾವು ಅಲಂಕರಿಸಿದ ಎಲ್ಲ ಹುದ್ದೆಗಳಿಗೂ ನ್ಯಾಯ ಒದಗಿಸಿದರು. RBI ಗವರ್ನರ್ ಆಗಿ, ಆರ್ಥಿಕ ಸಚಿವರಾಗಿ, ಹತ್ತು ವರ್ಷಗಳ ಕಾಲ ದೇಶದ ಪ್ರಧಾನಿಯಾಗಿ ಎಲ್ಲಾ ಹುದ್ದೆಗಳಿಗೂ ಪ್ರಾಮಾಣಿಕ ನ್ಯಾಯ ಒದಗಿಸಿದರು. ಸೋನಿಯಾಗಾಂಧಿ ಅವರು ಪ್ರಧಾನಿ ಹುದ್ದೆಯನ್ನು ತ್ಯಾಗ ಮಾಡಿ ಆ ಹುದ್ದೆಗೆ ಮನಮೋಹನ್ ಸಿಂಗ್ ಅವರನ್ನು ಆರಿಸಿದರು. ಹತ್ತು ವರ್ಷಗಳ ಕಾಲ ದೇಶವನ್ನು ಅತ್ಯಂತ ಸದೃಡವಾಗಿ ಮುನ್ನಡೆಸಿದರು. ಭಾರತ ಆರ್ಥಿಕ ಸಂಕಷ್ಟದಲ್ಲಿದ್ದಾಗ ಉದಾರೀಕರಣ ಜಾರಿ ಮಾಡಿ ದೇಶವನ್ನು ಆರ್ಥಿಕವಾಗಿ ಮೇಲೆತ್ತಿದರು” ಎಂದು ವಿಶ್ಲೇಷಿಸಿದರು.

“ಮನಮೋಹನ್ ಸಿಂಗ್ ಅವರಿಗಿಂತ ಮೊದಲು ದೇಶದ ಆರ್ಥಿಕತೆಯನ್ನು ವಿಶ್ವ ಆರ್ಥಿಕತೆ ಜೊತೆಗೆ ಮುಕ್ತ ಮಾಡಿರಲಿಲ್ಲ. ಇವರು ಮುಕ್ತಗೊಳಿಸುವ ಮೂಲಕ ದೇಶದ ಆರ್ಥಿಕತೆಗೆ ಹೊಸ ಚೈತನ್ಯ ತುಂಬಿದರು. ನಮ್ಮ ಸಂವಿಧಾನದ ಮೂಲಭೂತ ಆಶಯಗಳನ್ನು ಅಕ್ಷರಶಃ ಜಾರಿ ಮಾಡಿದರು. ಆಹಾರ ಭದ್ರತೆ, ಶಿಕ್ಷಣ ಹಕ್ಕು ಕಾಯ್ದೆ, ಮಾಹಿತಿ ಹಕ್ಕು ಕಾಯ್ದೆ ಸೇರಿದಂತೆ ಹಲವು ಮೂಲಭೂತ ಹಕ್ಕುಗಳನ್ನು ಜಾರಿಗೊಳಿಸಿ ದೇಶದ ಬಡವರು, ಮಧ್ಯಮವರ್ಗದವರನ್ನು ಆರ್ಥಿಕವಾಗಿ ಮೇಲೆತ್ತುವುದರಲ್ಲಿ ಯಶಸ್ವಿಯಾದರು” ಎಂದು ತಿಳಿಸಿದರು.

ಸಿಂಗ್‌ ಅಗಲಿಕೆ ವಿಶ್ವ ಆರ್ಥಿಕತೆಗೆ ಆಗಿರುವ ನಷ್ಟ

“ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ನಾವು ಆರಂಭಿಸಿದಾಗ ನಾವು ಮನಮೋಹನ್ ಸಿಂಗ್ ಅವರನ್ನು ಕರೆಸಿದ್ದೆವು. ಕರ್ನಾಟಕದ ಆರ್ಥಿಕತೆ ಬಗ್ಗೆ ಒಂದು ಕಾರ್ಯಕ್ರಮಕ್ಕೆ ನಾವು ಕರೆಸಿದ್ದೆವು. ಆಗ, ನಮ್ಮ ಅವಧಿಯಲ್ಲಿ ರಾಜ್ಯದ ಆರ್ಥಿಕತೆ ಅತ್ಯಂದ ಸದೃಡವಾಗಿದೆ ಎಂದು ಮೆಚ್ಚುಗೆ ಸೂಚಿಸಿದ್ದರು. ಅವರ ಜ್ಞಾನ ಭಾರತದ ಅನೇಕ ಸಮಸ್ಯೆಗಳಿಗೆ ಪರಹಾರ ಕಂಡುಕೊಳ್ಳಲು ಸಾಧ್ಯವಾಯಿತು. ದೇಶದ ಆರ್ಥಿಕ ಸಮಸ್ಯೆಗಳನ್ನು ನಿಖರವಾಗಿ ಗ್ರಹಿಸಿ, ಪರಿಹರಿಸುತ್ತಿದ್ದ ಅವರು ನಿಗರ್ವಿ ಆಗಿದ್ದರು. ಅತ್ಯಂತ ವಿನಯಶೀಲರಾಗಿದ್ದರು. ನಾನು ಬದುಕಿರುವಾಗ ನನ್ನ ಕೆಲಸಗಳಿಗೆ ಹೆಚ್ಚು ಮಾನ್ಯ ಸಿಗದಿದ್ದರೂ ಮುಂದೆ ನಮ್ಮ ಕೆಲಸಗಳಿಗೆ ಹೆಚ್ಚು ಮಹತ್ವ ಸಿಗಲಿದೆ ಎಂದು ಮನಮೋಹನ್ ಸಿಂಗ್ ಅವರು ಅವತ್ತೇ ಹೇಳಿದ್ದರು‌” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು | ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಪ್ರಶ್ನಿಸಿ ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ

ತಮಿಳುನಾಡು ಸರ್ಕಾರವು ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರಿ ಬಸ್‌ಗಳಲ್ಲಿ ಜಾರಿಗೆ...

ಉತ್ತರಾಖಂಡ | ₹135.95 ಕೋಟಿ ಸಂಸದರ ನಿಧಿಯಲ್ಲಿ ಬಳಕೆಯಾಗಿದ್ದು ಕೇವಲ ಶೇ.18 ಮಾತ್ರ

ಉತ್ತರಾಖಂಡದ ಲೋಕಸಭೆ ಮತ್ತು ರಾಜ್ಯಸಭೆಯ ಹಾಲಿ ಸಂಸದರು ತಮಗೆ ಅಭಿವೃದ್ಧಿ ಕಾಮಗಾರಿಗಳಿಗಾಗಿ...

SIR ವಿವಾದ | ಕೊಪ್ಪದಲ್ಲಿ 243 ಮತದಾರರ ಹೆಸರು ಡಿಲೀಟ್‌ಗೆ ನೀಡಿದ್ದ ಅರ್ಜಿ ಹಿಂಪಡೆದ ಬಿಜೆಪಿ ಮುಖಂಡ

ರಾಜ್ಯಾದ್ಯಂತ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಮತ್ತು...