ಅಕ್ಕಿ ಕೊಡಲು ನಿರಾಕರಿಸಿದ ಬಗ್ಗೆ ‘ಮನ್‌ ಕಿ ಬಾತ್‌’ನಲ್ಲಿ ಮಾತಾಡುವಿರಾ; ದಿನೇಶ್‌ ಗುಂಡೂರಾವ್ ಪ್ರಶ್ನೆ

Date:

ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಅಕ್ಕಿ ಖರೀದಿಸಲು ಕೇಂದ್ರ ಸರ್ಕಾರ ನಿರಾಕರಿಸಿದೆ. ಇಂದು (ಭಾನುವಾರ) ಪ್ರಧಾನಿ ನರೇಂದ್ರ ಮೋದಿ ಅವರ 102ನೇ ಮನ್‌ ಕಿ ಬಾತ್‌ ಸಂಚಿಕೆಯಲ್ಲಿ, ರಾಜ್ಯಕ್ಕೆ ಅಕ್ಕಿ ಕೊಡಲು ನಿರಾಕರಿಸಿದ ವಿಷಯವನ್ನು ಪ್ರಸ್ತಾಪಿಸುವಿರಾ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರಶ್ನಿಸಿದ್ದಾರೆ.

- Advertisement -

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, “ಇಂದು ಮೋದಿಯವರ 102ನೇ ಸಂಚಿಕೆಯ ಮನ್‌ ಕಿ ಬಾತ್‌. ಇತ್ತೀಚಿನ ವರದಿಗಳ ಪ್ರಕಾರ ಮೋದಿಯವರ ಅಂಧ ಭಕ್ತರೂ ಮನ್ ಕಿ ಬಾತ್ ಕೇಳುತ್ತಿಲ್ಲ. ಆದರೂ ಮೋದಿಯವರು ಛಲ ಬಿಡದ ತ್ರಿವಿಕ್ರಮನಂತೆ ಮನ್ ಕಿ ಬಾತ್ ಮಾಡುತ್ತಲೇ ಇದ್ದಾರೆ. ಮೋದಿಯವರೇ, ಇಂದಿನ ಮನ್ ಕಿ ಬಾತ್‌ನಲ್ಲಾದರೂ ಚರ್ವಿತ ಚರ್ವಣದಂತೆ ಹೇಳಿದನ್ನೇ ಹೇಳುವುದ ಬಿಟ್ಟು ಹೊಸದೇನಾದರೂ ಹೇಳುವಿರಾ” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ಮೋದಿಯವರೇ, ನಿಮ್ಮ ಇಂದಿನ ಮನ್ ಕಿ ಬಾತ್ ಬಗ್ಗೆ ಅನೇಕ ನಿರೀಕ್ಷೆಗಳಿವೆ. ಇಂದು ನಿಮ್ಮ ಮನದಾಳದ ಮಾತಿನಲ್ಲಿ ಮಣಿಪುರದ ಹಿಂಸಾಚಾರದ ಬಗ್ಗೆ ಮಾತಾಡುವಿರೆ? ಮಹಿಳಾ ಕುಸ್ತಿಪಟುಗಳ ಮೇಲೆ ನಿಮ್ಮ ಪಕ್ಷದ ಸಂಸದ ಎಸಗಿದ ಲೈಂಗಿಕ ದೌರ್ಜನ್ಯದ ಬಗ್ಗೆ ಮಾತಾಡುವಿರೆ? ಚೀನಾ ಮತ್ತು ಭಾರತದ ಗಡಿ ಸಂಘರ್ಷದ ಬಗ್ಗೆ ದೇಶದ ಜನರೆದುರು ಸತ್ಯ ಮಾತಾಡುವಿರೆ?” ಎಂದು ದಿನೇಶ್‌ ಗುಂಡೂರಾವ್‌ ಟ್ವೀಟ್‌ ಮಾಡಿದ್ದಾರೆ.

“ಮೋದಿಯವರೇ, ನಮ್ಮ ರಾಜ್ಯಕ್ಕೆ ಅಕ್ಕಿ ಕೊಡಲು ಒಪ್ಪಿ ನಂತರ ನಿರಾಕರಿಸಿದ ಬಗ್ಗೆ ಮನ್‌ ಕಿ ಬಾತ್‌ನಲ್ಲಿ ಮಾತಾಡುವಿರೆ? ಬಡವರಿಗೆ ಸಿಗಬೇಕಾಗಿದ್ದ ಅಕ್ಕಿಯನ್ನು ಹೆಂಡ ತಯಾರಿಸಲು ಬೇಕಾದ ಎಥೆನಾಲ್ ಉತ್ಪಾದನೆಗೆ‌ ಕೊಟ್ಟಿದ್ಯಾಕೆ ಎಂಬ ಬಗ್ಗೆ ಮಾತಾಡುವಿರೆ? ನೀವು ಇಲ್ಲಿಯವರೆಗೂ ಕೊಟ್ಟ ಆಶ್ವಾಸನೆಗಳು ಎಷ್ಟು ಈಡೇರಿದೆ ಎಂಬ ಬಗ್ಗೆ ‌ಮಾತಾಡುವಿರೆ” ಎಂದು ಪ್ರಶ್ನಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೂರು ತಿಂಗಳೊಳಗೆ ‘108’ ಆರೋಗ್ಯ ಸೇವೆಗೆ ಹೊಸ ರೂಪ: ದಿನೇಶ್‌ ಗುಂಡೂರಾವ್‌

“ಮೋದಿಯವರೇ, ನಿಮ್ಮ ಇಂದಿನ ಮನ್ ಕಿ‌ ಬಾತ್ ಸತ್ಯ ಹಾಗೂ ವಾಸ್ತವದ ಅನಾವರಣವಾಗಿರಲಿ. ಸತ್ಯ ಹೇಳುವ ಮೂಲಕ ಈ ಮನ್ ಕಿ ಬಾತ್‌ ವಿಶಿಷ್ಟ ವಿಭಿನ್ನವಾಗಿರಲಿ. ಮೋದಿಯವರೆ ಸತ್ಯ ಮಾತಾಡಲು ಹೃದಯ ಶುದ್ಧಿಯಿರಬೇಕು ಹಾಗೂ ಮನಸ್ಸು ಕಲ್ಮಶ ರಹಿತವಾಗಿರಬೇಕು. ಎಲ್ಲಕ್ಕಿಂತ ಹೆಚ್ಚಾಗಿ ಧೈರ್ಯವಿರಬೇಕು.‌ ಇಂದಾದರೂ ನಾವು ನಿಮ್ಮಿಂದ ಸತ್ಯ ನಿರೀಕ್ಷಿಸಬಹುದೇ?” ಎಂದು ಕುಟುಕಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...