ಬಹಳ ಜನ ದಲಿತರು ನನಗೆ ಬಿಜೆಪಿ ಸೇರಬೇಡಿ ಎಂದಿದ್ದರು: ಸಂಸದ ರಮೇಶ ಜಿಗಜಿಣಗಿ

Date:

ಬಹಳ ಜನ ದಲಿತರು ಬಿಜೆಪಿ ಸೇರಬೇಡಿ ಎಂದು ನನ್ನ ಜೊತೆ ವಾದ ಮಾಡಿದ್ದರು. ಆದರೂ ಬೆಂಬಲ ಕೊಟ್ಟಿದ್ದಾರೆ. ದಲಿತನಾಗಿ ದಕ್ಷಿಣ ಭಾರತದಲ್ಲಿ ಬಿಜೆಪಿಯಿಂದ ಏಳು ಚುನಾವಣೆಗಳಲ್ಲಿ ಗೆದ್ದು ಬಂದ ಏಕೈಕ ಸಂಸದನಾದರೂ ಸಚಿವ ಸ್ಥಾನಕ್ಕೆ ಪರಿಗಣಿಸಿಲ್ಲ ಎಂದು ವಿಜಯಪುರ ಸಂಸದ ರಮೇಶ ಜಿಗಜಿಣಗಿ ಹೈಕಮಾಂಡ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

- Advertisement -

ವಿಜಯಪುರ ನಗರದಲ್ಲಿ ಸಂಸದರ‌ ಕಚೇರಿ‌ ಉದ್ಘಾಟನೆ ವೇಳೆ ಸುದ್ದಿಗಾರರ ಜೊತೆ ಮಾತನಾಡಿ, “ದೆಹಲಿಯಿಂದ ವಿಜಯಪುರಕ್ಕೆ ಮರಳಿದಾಗ ಜನ ನನಗೆ ‘ಥೂ’ ಎಂದು ಬೈದಿದ್ದರು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಬಿಜೆಪಿ ದಲಿತರ ವಿರೋಧಿ. ಹೀಗಾಗಿ ಈ ಪಕ್ಷ ಸೇರಬೇಡಿ ಎಂದು ಬಹಳ ಜನ ದಲಿತರು ನನಗೆ ಹೇಳಿದ್ದಾರೆ. ನನಗೋಸ್ಕರ ಅಲ್ಲದಿದ್ದರೂ ಜನರ ಒತ್ತಡವಂತೂ ಇದೆ. ಎಲ್ಲ ಮೇಲ್ವರ್ಗದ ಜಾತಿಯವರೇ ಸಚಿವರಾಗಿದ್ದಾರೆ. ದಲಿತರೇನು ಬಿಜೆಪಿಗೆ ಬೆಂಬಲ ನೀಡಿಲ್ಲವೇ” ಎಂದು ಜಿಗಜಿಣಗಿ‌ ಪ್ರಶ್ನಿಸಿದರು.

“ಬಿಜೆಪಿ ನಾಯಕರ ಒಳ ರಾಜಕೀಯದಿಂದಾಗಿ ನನಗೆ ಸಚಿವ ಸ್ಥಾನ ತಪ್ಪಿದೆ. ನಾನು ಸಚಿವನಾಗಬೇಕು ಎಂಬುದು ಉತ್ತರ ಕರ್ನಾಟಕದ ಜನರ ಮತ್ತು ನಮ್ಮ ಸಮಾಜದ ಜನರ ಬಯಕೆಯಾಗಿತ್ತು. ರಾಜ್ಯದ ನಾಯಕರು ಸಚಿವ ಸ್ಥಾನಕ್ಕೆ ನನ್ನ ಹೆಸರನ್ನು ಶಿಫಾರಸು ಮಾಡುತ್ತಾರೆ ಎಂಬ ನಂಬಿಕೆ ಇತ್ತು. ಆದರೆ,
ಯಾರೊಬ್ಬರೂ ನನ್ನ ಪರ ಮಾತನಾಡಲಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...