ವಿಜಯೇಂದ್ರ ನೇಮಕಕ್ಕೆ ಬಿಜೆಪಿ ನಾಯಕರಲ್ಲೇ ತೀವ್ರ ಅಸಮಾಧಾನ: ಸಿದ್ದರಾಮಯ್ಯ

Date:

Advertisements
  • ಪ್ರತಿಪಕ್ಷದ ನಾಯಕರು ಯಾರಾದರೂ ನಮಗೆ ಅಭ್ಯಂತರವಿಲ್ಲ: ಸಿಎಂ
  • ‘ಬಿಜೆಪಿಯ ಭ್ರಷ್ಟಾಚಾರದ ಆರೋಪಕ್ಕೆ ಅಧಿವೇಶನದಲ್ಲಿ ಉತ್ತರಿಸುವೆ’

ರಾಜ್ಯದಲ್ಲಿ ದ್ವೇಷದ ರಾಜಕಾರಣ ಮಾಡದೇ, ಶಾಂತಿಯುತವಾದ ವಾತಾವರಣವನ್ನು ಸರ್ಕಾರ ನಿರ್ಮಿಸುತ್ತಿದೆ. ಬಿಜೆಪಿಯವರು ಸರ್ಕಾರದ ವಿರುದ್ಧ ಮಾಡುತ್ತಿರುವ ಭ್ರಷ್ಟಾಚಾರದ ಆರೋಪಗಳಿಗೆ ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಉತ್ತರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಶನಿವಾರ ಮೈಸೂರಿನಲ್ಲಿ ಬಿಜೆಪಿಯ ಅಶೋಕ್ ಅವರನ್ನು ಪ್ರತಿಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿ, “ಪ್ರತಿಪಕ್ಷದ ನಾಯಕರು ಯಾರಾದರೂ ನಮಗೆ ಅಭ್ಯಂತರವಿಲ್ಲ. ಜನರ ಆಶೀರ್ವಾದದಿಂದ ಸರ್ಕಾರ ರಚಿಸಿರುವ ನಮ್ಮ ಕಾಂಗ್ರೆಸ್ ಸರ್ಕಾರ ಜನರಿಗೆ ನೀಡಿರುವ ಆಶ್ವಾಸನೆಗಳನ್ನು ಈಡೇರಿಸುತ್ತಿದೆ” ಎಂದರು.

ರಾಜ್ಯಾಧ್ಯಕ್ಷರ ನೇಮಕದಿಂದ ಬಿಜೆಪಿಯ ನಾಯಕರಲ್ಲಿ ಅಸಮಧಾನ

Advertisements

ಇಂದು ಚುನಾವಣೆ ನಡೆದರೂ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂಬ ಯಡಿಯೂರಪ್ಪನವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, “ಚುನಾವಣೆಯಲ್ಲಿ ಕೇವಲ 66 ಸೀಟು ಪಡೆದು ವಿರೋಧ ಪಕ್ಷದಲ್ಲಿ ಕುಳಿತಿದ್ದಾರೆ. ಅವರ ಮಗ ವಿಜಯೇಂದ್ರರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಿರುವುದರಿಂದ ಅವರ ಪಕ್ಷದ ಅನೇಕ ನಾಯಕರು ಅಸಮಾಧಾನ ಗೊಂಡಿದ್ದಾರೆ. ಇನ್ನು ಸ್ಪಲ್ಪ ದಿನಗಳಲ್ಲಿ ಬಿಜೆಪಿಯ ಪರಿಸ್ಥಿತಿಯನ್ನು ಎಲ್ಲರೂ ನೋಡಬಹುದು” ಎಂದರು.

ಮಾಜಿ ಸಿಎಂ ಕುಮಾರಸ್ವಾಮಿ ಯವರು ವಿವೇಕಾನಂದ ಎಂಬುವವರ ವರ್ಗಾವಣೆ ಬಗ್ಗೆ ಟ್ವೀಟ್ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ವಿವೇಕಾನಂದ ಎಂಬುವವರು ಮೈಸೂರು ಗ್ರಾಮಾಂತರ ಕ್ಷೇತ್ರಶಿಕ್ಷಣಾಧಿಕಾರಿಗಳಾಗಿದ್ದಾರೆ. ಅವರ ಬಗ್ಗೆ ಮಾತನಾಡಲಾಗಿದೆಯೆ ಹೊರತು ಪೋಲಿಸ್ ಅಧಿಕಾರಿ ಬಗ್ಗೆಯಲ್ಲ, ವಿವಿಪುರಂ ಇನ್ಸ್ ಪೆಕ್ಟರ್ ವಿವೇಕಾನಂದ ಚಾಮರಾಜ ವಿಧಾನಸಭಾ ಕ್ಷೇತ್ರಕ್ಕೆ, ವರ್ಗಾವಣೆಯಾಗಿರುವ ಬಗ್ಗೆ ಸ್ಥಳೀಯ ಶಾಸಕರನ್ನು ಕೇಳಲಿ” ಎಂದು ಹೇಳಿದರು.

ಆತಂಕದಿಂದ ಅರ್ಥವಿಲ್ಲದ ಹೇಳಿಕೆಗಳು

“ಕಾಂಗ್ರೆಸ್ ವಿರುದ್ಧ ಬಿಜೆಪಿ ಪೋಸ್ಟರ್ ಚಳವಳಿ ಪ್ರಾರಂಭಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಜನ ಬಿಜೆಪಿಯವರಿಗೆ ತಕ್ಕ ಪಾಠ ಕಲಿಸಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಸೇರಿ ಸಮ್ಮಿಶ್ರ ಸರ್ಕಾರ ರಚಿಸುವ ಕನಸು ಕಂಡಿದ್ದರು. ಆದರೆ ಜನ ಕಾಂಗ್ರೆಸ್ ಪಕ್ಷಕ್ಕೆ 136 ಸ್ಥಾನಗಳನ್ನು ನೀಡಿರುವುದು ಅವರನ್ನು ಆತಂಕಕ್ಕೆ ದೂಡಿದ್ದು, ಇದರಿಂದ ಅರ್ಥವಿಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ” ಎಂದು ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ಜೀವಮಾನದಲ್ಲಿಯೇ ಮತ್ತೆ ಅಧಿಕಾರ ಕೈಗೆ ಬಾರದು ಎಂಬ ವಾಸ್ತವ ಕುಮಾರಸ್ವಾಮಿ ನಿದ್ದೆಗೆಡಿಸಿದೆ: ಸಿದ್ದರಾಮಯ್ಯ

ಸುಳ್ಳು ಆರೋಪಗಳಿಗೆ ಉತ್ತರ ನೀಡುವುದಿಲ್ಲ

ಕಾಂಗ್ರೆಸ್ ನವರು ಕೌರವ ಸಂಸ್ಕೃತಿಯನ್ನು ನನ್ನ ಬಳಿ ತೋರಿಸುವುದು ಬೇಡ ಎಂಬ ಕುಮಾರಸ್ವಾಮಿಯವರ ಹೇಳಿಕೆಗೆ ಉತ್ತರಿಸುತ್ತಾ, “ಕುಮಾರಸ್ವಾಮಿಯವರು ಎಂದಿಗೂ ತಾವು ಮಾಡಿರುವ ಆರೋಪಗಳನ್ನು ಸಾಬೀತು ಪಡಿಸಿಲ್ಲ. ದ್ವೇಷ ಹಾಗೂ ಅಸೂಯೆಯ ರಾಜಕಾರಣ ಮಾಡುತ್ತಿದ್ದಾರೆ. 38 ಸ್ಥಾನದಲ್ಲಿದ್ದ ಜೆಡಿಎಸ್ ನವರು ಈಗ 19 ಸ್ಥಾನಕ್ಕೆ ಇಳಿದಿದ್ದಾರೆ. ಅವರು ಮಾಡುವ ಸುಳ್ಳು ಆರೋಪಗಳಿಗೆ ಉತ್ತರ ನೀಡುವ ಅವಶ್ಯಕತೆ ಇಲ್ಲ” ಎಂದರು.

ಚಿಕ್ಕದಾದರೂ ಅಪರಾಧ ಅಪರಾಧವೇ 

ಪೆನ್ ಡ್ರೈವ್ ನಲ್ಲಿ ಸಾಕಷ್ಟು ಮಾಹಿತಿಗಳಿದ್ದು, ಆಡಳಿತ ಪಕ್ಷದವರು ಅದನ್ನು ಬಹಿರಂಗಗೊಳಿಸದಂತೆ ಮನವಿ ಮಾಡಿದ್ದಾರೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಉತ್ತರಿಸಿ, “ಅವರ ಪೆನ್ ಡ್ರೈವ್ ಹೇಳಿಕೆಯ ನಂತರ ವಿಧಾನಸಭೆ ಅಧಿವೇಶನ ನಡೆದರೂ, ಅದರ ಬಗ್ಗೆ ಅವರು ಪ್ರಸ್ತಾಪ ಮಾಡಲಿಲ್ಲವೇಕೆ? ಪೆನ್ ಡ್ರೈವ್ ಬಹಿರಂಗಗೊಳಿಸಬೇಡಿ ಎಂದು ಮನವಿ ಮಾಡಿದವರು ಯಾರು ಎಂಬ ಮಾಹಿತಿಯನ್ನು ನೀಡಲಿ” ಎಂದರು.

“ಮಾಜಿ ಮುಖ್ಯಮಂತ್ರಿಯಾಗಿದ್ದುಕೊಂಡು ವಿದ್ಯುತ್ ಕಳವು ಮಾಡಿರುವ ಕುಮಾರಸ್ವಾಮಿಯವರಿಗೆ ಇಂತಹ ಹೇಳಿಕೆಗಳನ್ನು ನೀಡಲು ಯಾವ ನೈತಿಕತೆಯೂ ಇಲ್ಲ. ದಂಡ ಕಟ್ಟುವ ಮೂಲಕ ವಿದ್ಯುತ್ ಕಳುವು ಮಾಡಿರುವ ಅಪರಾಧವನ್ನು ಒಪ್ಪಿಕೊಂಡಿದ್ದಾರೆ. ಚಿಕ್ಕದಾದರೂ ಅಪರಾಧ ಅಪರಾಧವೇ” ಎಂದು ಕುಟುಕಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

Download Eedina App Android / iOS

X