ಜಮ್ಮು ಕಾಶ್ಮೀರ | ಮೀಸಲಾತಿ ಪ್ರತಿಭಟನೆ; ಮುಫ್ತಿ ಸೇರಿ ಹಲವು ನಾಯಕರಿಗೆ ಗೃಹಬಂಧನ

Date:

ಜಮ್ಮು ಕಾಶ್ಮೀರದಲ್ಲಿ ಅಸ್ತಿತ್ವದಲ್ಲಿರುವ ಮೀಸಲಾತಿ ನೀತಿಯ ವಿರುದ್ಧ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸುವುದನ್ನು ತಡೆಯಲು ಹಲವು ನಾಯಕರುಗಳಿಗೆ ಗೃಹಬಂಧನ ವಿಧಿಸಲಾಗಿದೆ. ನ್ಯಾಷನಲ್ ಕಾನ್ಫರೆನ್ಸ್‌ನ ಸಂಸತ್ ಸದಸ್ಯ ಅಗಾ ರುಹುಲ್ಲಾ ಮೆಹದಿ, ಮಾಜಿ ಸಿಎಂ, ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ ಸೇರಿದಂತೆ ಹಲವು ನಾಯಕರುಗಳನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ.

- Advertisement -

ಜಮ್ಮು ಕಾಶ್ಮೀರದಲ್ಲಿ ಮೀಸಲಾತಿ ನೀತಿಯ ವಿರುದ್ಧದ ಹೋರಾಟವು ತೀವ್ರಗೊಳ್ಳುತ್ತಿದೆ. ಪ್ರಸ್ತುತ ಜಾರಿಯಲ್ಲಿರುವ ನೀತಿಯಿಂದಾಗಿ ಮುಕ್ತ ವರ್ಗದ ಪಾಲನ್ನು ಶೇ. 40ಕ್ಕಿಂತ ಕಡಿಮೆ ಮಾಡಲಾಗಿದೆ ಮತ್ತು ಒಟ್ಟು ಮೀಸಲಾತಿಯನ್ನು ಶೇ. 60ಕ್ಕಿಂತ ಹೆಚ್ಚು ಮಾಡಲಾಗಿದೆ. ದ್ಯಾರ್ಥಿಗಳು ಮುಕ್ತ ವರ್ಗದ ಪಾಲನ್ನು ಕನಿಷ್ಠ ಶೇ. 50ಕ್ಕೆ ಏರಿಸಬೇಕು ಮತ್ತು ಮೀಸಲಾತಿಯನ್ನು ವೈಜ್ಞಾನಿಕವಾಗಿ ಮರುಪರಿಶೀಲಿಸಬೇಕು ಎಂದು ವಿದ್ಯಾರ್ಥಿಗಳು, ನಾಯಕರುಗಳು ಆಗ್ರಹಿಸುತ್ತಿದ್ದಾರೆ. ಈ ನಡುವೆ ನಾಯಕರ ಗೃಹಬಂಧನ ಮಾಡಿರುವ ಆರೋಪಗಳು ಕೇಳಿಬರುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಇದನ್ನು ಓದಿದ್ದೀರಾ? ಲಡಾಖ್ ಗ್ರೌಂಡ್ ರಿಪೋರ್ಟ್ ಸರಣಿ-5 | ತೆರೆಮರೆಯ ನಾಯಕ ಸಜ್ಜಾದ್ ಕಾರ್ಗಿಲಿ: ಸಂದರ್ಶನ

ಈ ಬಗ್ಗೆ ಮಾಹಿತಿ ನೀಡಿರುವ ಶ್ರೀನಗರದ ಸಂಸತ್ ಸದಸ್ಯ ಅಗಾ ರುಹುಲ್ಲಾ, “ನನ್ನನ್ನು ಗೃಹಬಂಧನದಲ್ಲಿ ಇರಿಸಲಾಗಿದೆ. ಬುದ್ಗಾಮ್‌ನಲ್ಲಿರುವ ನನ್ನ ನಿವಾಸದ ಸುತ್ತಲೂ ಪೊಲೀಸರನ್ನು ನಿಯೋಜಿಸಲಾಗಿದೆ, ಗೇಟ್‌ಗಳನ್ನು ಮುಚ್ಚಲಾಗಿದೆ. ಪ್ರತಿಭಟನೆಗೆ ಮುಂಚಿತವಾಗಿಯೇ ಹಲವು ವಿದ್ಯಾರ್ಥಿ ನಾಯಕರುಗಳನ್ನೂ ಬಂಧಿಸಲಾಗಿದೆ” ಎಂದು ಹೇಳಿದ್ದಾರೆ.

“ಸಂಸದ ರುಹುಲ್ಲಾ ಮೆಹದಿ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ. ಹೊರಗೆ ಹೆಜ್ಜೆ ಹಾಕುವುದನ್ನು ನಿಷೇಧಿಸಲಾಗಿದೆ ಎಂದು ಪೊಲೀಸರು ಅಧಿಕೃತವಾಗಿ ಅವರಿಗೆ ತಿಳಿಸಿದ್ದಾರೆ. ನಿನ್ನೆ ತಡರಾತ್ರಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ ಮತ್ತು ಅವರ ಕುಟುಂಬಗಳಿಗೆ ಪೊಲೀಸರು ಬೆದರಿಸಿದ್ದಾರೆ ಎಂದು ವರದಿಯಾಗಿವೆ. ಮೀಸಲಾತಿ ನೀತಿ ಮೂಲಕ ನ್ಯಾಯಯುತ ಅವಕಾಶವನ್ನು ಕೇಳುತ್ತಿರುವುದೇ ಇದಕ್ಕೆ ಕಾರಣ” ಎಂದು ಆಗಾಸ್ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ.

ಸದ್ಯ ಮುಖ ನಾಯಕರ ಬಂಧನ ಮತ್ತು ಪೊಲೀಸರ ಬಿಗಿ ಭದ್ರತೆಯಿಂದಾಗಿ ‘ಓಪನ್ ಮೆರಿಟ್ ಸ್ಟೂಡೆಂಟ್ಸ್ ಅಸೋಸಿಯೇಷನ್’ ತನ್ನ ಯೋಜಿತ ಪ್ರತಿಭಟನೆಯನ್ನು ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು 2024ರಲ್ಲಿ ಜಾರಿಗೆ ತಂದ ತಿದ್ದುಪಡಿಯ ಮೂಲಕ ಪಹಾರಿ ಜನಾಂಗಕ್ಕೆ ಶೇ. 10ರಷ್ಟು ಎಸ್‌ಟಿ (ST) ಮೀಸಲಾತಿ ನೀಡಿದ್ದು ಮತ್ತು ಇತರ ಹಿಂದುಳಿದ ವರ್ಗಗಳ (OBC) ಪಟ್ಟಿಯನ್ನು ವಿಸ್ತರಿಸಿದ್ದು ಈ ವಿವಾದಕ್ಕೆ ಮೂಲ ಕಾರಣವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಖಿನ್ನತೆ, ಆತ್ಮಹತ್ಯೆಯ ಆಲೋಚನೆ: NTF ವರದಿ ಹೊರತಂದ ಆಘಾತಕಾರಿ ಸತ್ಯ!

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಕುರಿತು ಸುಪ್ರೀಂ ಕೋರ್ಟ್...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು...

ಪರ್ವತದಷ್ಟು ಹಗರಣ, ಸಾಸಿವೆಯಷ್ಟು ದಂಡ: ₹1.48 ಕೋಟಿಗೆ ಅದಾನಿ ಸಮೂಹದ ಅಕ್ರಮಗಳಿಗೆ ಸೆಬಿ ‘ಕ್ಲೀನ್ ಚಿಟ್’

ಅದಾನಿ ಸಮೂಹದ ಬೃಹತ್ ಆರ್ಥಿಕ ಅವ್ಯವಹಾರಗಳ ಆರೋಪಗಳೆದುರು ಭಾರತದ ಷೇರುಪೇಟೆ ನಿಯಂತ್ರಕ...

ಸಂಭಲ್ ಪ್ರಕರಣ: ಆರೋಪಿ ಮೇಲಿನ NSA ರದ್ದು, ಯೋಗಿ ಸರ್ಕಾರಕ್ಕೆ 10 ಲಕ್ಷ ರೂ. ದಂಡ ವಿಧಿಸಿದ ಸುಪ್ರೀಂ!

2024ರ ಸಂಭಲ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮುಲ್ಲಾ ಅಫ್ರೋಜ್ ವಿರುದ್ಧ...