ವಿಧಾನಸಭೆ | ಬಿಜೆಪಿ ಸದಸ್ಯರನ್ನು ಹೊತ್ತು ಹೊರ ಹಾಕಿದ ಮಾರ್ಷಲ್‌ಗಳು

Date:

ಸದನದ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರ ಮೇಲೆ ವಿಧೇಯಕ ಪ್ರತಿಗಳನ್ನು ಹರಿದು ಪೀಠಕ್ಕೆ ಎಸೆದ ಹಿನ್ನೆಲೆಯಲ್ಲಿ ಬಿಜೆಪಿಯ 10 ಶಾಸಕರನ್ನು ಅಮಾನತು ಮಾಡಿ ವಿಧಾನ ಸಭಾಧ್ಯಕ್ಷ ಯು ಟಿ ಖಾದರ್ ಆದೇಶಿಸಿದ ಬಳಿಕ, ಬಿಜೆಪಿ ಸದಸ್ಯರು ಸದನದ ದ್ವಾರದ ಬಳಿ ಪ್ರತಿಭಟನೆ ನಡೆಸಿದರು. ಈ ಹಿನ್ನೆಲೆಯಲ್ಲಿ ಕೆಲ ಬಿಜೆಪಿ ಸದಸ್ಯರನ್ನು ಭುಜದ ಮೇಲೆ ಹೊತ್ತುಕೊಂಡು ಮಾರ್ಷಲ್‌ಗಳು ಹೊರ ಹಾಕಿದ ಘಟನೆಯೂ ನಡೆಯಿತು.

- Advertisement -

ಈ ನಡುವೆ ಮಾರ್ಷಲ್‌ಗಳು ಮತ್ತು ಬಿಜೆಪಿ ಸದಸ್ಯರ ನಡುವೆ ತಳ್ಳಾಟ ನೂಕಾಟವೂ ನಡೆಯಿತು. ಆ ಬಳಿಕ ಬಿಜೆಪಿ ಮಲ್ಲೇಶ್ವರಂ ಶಾಸಕ ಡಾ. ಸಿ. ಎನ್. ಅಶ್ವಥ್ ನಾರಾಯಣ್‌ ಅವರನ್ನು ಭುಜದ ಮೇಲೆ ಹೊತ್ತೊಯ್ದು, ಹೊರಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಇದೇ ವೇಳೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೂಡಲೇ ಅವರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಈ ಎಲ್ಲ ಬೆಳವಣಿಗೆಗಳ ನಡುವೆಯೇ ಕಲಾಪ ಮತ್ತೆ ಆರಂಭಗೊಂಡಿದೆ. ಆದರೆ ಯಾವುದೇ ಬಿಜೆಪಿ ಸದಸ್ಯರಾಗಲೀ, ಜೆಡಿಎಸ್ ಸದಸ್ಯರಾಗಲೀ ಹಾಜರಾಗಿಲ್ಲ.

ಸದನದಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕ ಅಶೋಕ್ ಪಟ್ಟಣ, ‘ಪ್ರವೇಶ ದ್ವಾರದ ಬಳಿ ಬಿಜೆಪಿಯವರು ನೂಕುನುಗ್ಗಲು ಮಾಡಿದ್ದಾರೆ. ಇದರಿಂದಾಗಿ ದ್ವಾರದ ಬಳಿ ಇದ್ದ ಗಾಜು ಒಡೆದ ಪರಿಣಾಮ ಪತ್ರಕರ್ತರೋರ್ವರ ಕೈಗೆ ಗಾಯವಾಗಿದೆ. ಪೊಲೀಸರಿಗೆ ದೂರು ನೀಡಿ, ಕಾನೂನು ಕ್ರಮ ಕೈಗೊಳ್ಳಬೇಕು. ಈ ಥರ ಬಿಜೆಪಿಯವರು ನಡೆದುಕೊಂಡಿರುವುದು ಸರಿಯಲ್ಲ. ಈ ರೀತಿ ಮುಂದೆ ನಡೆಯದಂತೆ ಕ್ರಮ ತೆಗೆದುಕೊಳ್ಳಬೇಕು’ ಎಂದು ಸ್ಪೀಕರ್ ಯು ಟಿ ಖಾದರ್ ಅವರನ್ನು ಆಗ್ರಹಿಸಿದರು.

WhatsApp Image 2023 07 19 at 5.58.04 PM edited

ಈ ನಡುವೆ 10 ಮಂದಿ ಬಿಜೆಪಿ ಸದಸ್ಯರನ್ನು ಸದನದಿಂದ ಅಮಾನತು ಮಾಡಿರುವುದನ್ನು ಖಂಡಿಸಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ವಿಧಾನಸಭೆಯ ಸ್ಪೀಕರ್ ಕಚೇರಿ ಎದುರು ಬಿಜೆಪಿ ಸದಸ್ಯರು ಪ್ರತಿಭಟನೆ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರತಿಭಟನೆ ನಡೆಸುವುದಿಲ್ಲವೆಂದು ಯಾವುದೇ ಬಾಂಡ್‌ಗೆ ಸಹಿ ಹಾಕಿಲ್ಲ: ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ಸ್ಪಷ್ಟನೆ

ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ಸಿಪಿಜೆ ಆಯೋಜಿಸಿದ್ದ ಪ್ರತಿಭಟನೆಯ ವೇಳೆ...

ಸಂಸದನೆಂದು ಹೇಳಿದರೂ ಬಿಡದೆ ಹಲ್ಲೆ, ಉಸಿರುಗಟ್ಟಿಸಲು ಯತ್ನ: ಸಿಆರ್‌ಪಿಎಫ್ ವಿರುದ್ಧ ಸಿಪಿಐಎಂ ಎಂಪಿ ಗಂಭೀರ ಆರೋಪ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಸಂದರ್ಭದಲ್ಲಿ, ತಮ್ಮನ್ನು ಸಿಆರ್‌ಪಿಎಫ್ ಸಿಬ್ಬಂದಿ ಬಸ್‌ನೊಳಗೆ ಕೆಳಗೆ...

ಸುಪ್ರೀಂ ಆದೇಶ ಉಲ್ಲಂಘನೆ: ಕಾನೂನುಬಾಹಿರ ವಶಕ್ಕೆ ತಡೆ ಇದ್ದರೂ 100ಕ್ಕೂ ಹೆಚ್ಚು ಪ್ರತಿಭಟನಾಕಾರರ ಬಂಧನ!

ರಾಜಧಾನಿ ದೆಹಲಿಯಲ್ಲಿ ಕನ್ಹಾಟ್ ಪ್ಲೇಸ್ ಹಾಗೂ ಜಂತರ್ ಮಂತರ್ ಸುತ್ತಮುತ್ತ ನಡೆಯುತ್ತಿರುವ...