ಹುತಾತ್ಮ ಸಿಬ್ಬಂದಿಯ ಗುಂಪು ವಿಮಾ ಮೊತ್ತ 20 ಲಕ್ಷದಿಂದ 50 ಲಕ್ಷಕ್ಕೆ ಏರಿಕೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

Advertisements

ಕರ್ತವ್ಯದ ಮೇಲಿದ್ದಾಗ ಹುತಾತ್ಮರಾಗುವ ಪೊಲೀಸ್ ಸಿಬ್ಬಂದಿಯ ಗುಂಪು ವಿಮಾ ಮೊತ್ತವನ್ನು 20 ಲಕ್ಷ ರೂ.ಗಳಿಂದ 50 ಲಕ್ಷ ರೂ.ಗಳಿಗೆ ಏರಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.

ಇಂದು ಪೊಲೀಸ್ ಸಂಸ್ಮರಣ ದಿನದ ಅಂಗವಾಗಿ ಮೈಸೂರು ರಸ್ತೆಯ ಹುತಾತ್ಮರ ಉದ್ಯಾನವನದಲ್ಲಿ ಹುತಾತ್ಮರಿಗೆ ಪುಷ್ಪಚಕ್ರ ಅರ್ಪಿಸಿ ನಮನ ಸಲ್ಲಿಸಿ ಮಾತನಾಡಿದರು.

ಪೊಲೀಸ್ ವ್ಯವಸ್ಥೆ ರಾಜ್ಯದ, ಸರ್ಕಾರದ ಘನತೆಯನ್ನು ಹೆಚ್ಚಿಸುವಂತೆ ಕೆಲಸ ಮಾಡುತ್ತದೆ. ಅಭಿವೃದ್ಧಿ ಮತ್ತು ಕಾನೂನು ಸುವ್ಯವಸ್ಥೆಗೆ ನೇರ ಸಂಬಂಧವಿದೆ. ಯಾವ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಮರ್ಪಕವಾಗಿರುತ್ತದೋ ಅಲ್ಲಿಗೆ ಬಂಡವಾಳ ಹೆಚ್ಚಾಗಿ ಬರುತ್ತದೆ. ಇದರಿಂದ ಉದ್ಯೋಗ ಸೃಷ್ಟಿ ಹೆಚ್ಚಾಗಿ, ಅಭಿವೃದ್ಧಿ ವೇಗ ಪಡೆದುಕೊಳ್ಳುತ್ತದೆ. ಇದರ ಪರಿಣಾಮ ನಾಡಿನ‌ ಜನರ ತಲಾ ಆದಾಯದ ಪ್ರಮಾಣವೂ ಹೆಚ್ಚಾಗುತ್ತದೆ. ಆದ್ದರಿಂದ ನಾಡಿನ ಕಾನೂನು ಸುವ್ಯವಸ್ಥೆಯನ್ನು ಪೊಲೀಸ್ ಇಲಾಖೆ ಕಟ್ಟು ನಿಟ್ಟಾಗಿ ನಿರ್ವಹಿಸಬೇಕು ಎಂದು‌ ಕರೆ ನೀಡಿದರು.

Advertisements

ತಂತ್ರಜ್ಞಾನ ಬೆಳೆದಂತೆ ಪೊಲೀಸ್ ವ್ಯವಸ್ಥೆ ಹೊಸ ಹೊಸ ಸವಾಲುಗಳಿಗೆ ಮುಖಾಮುಖಿ ಆಗುತ್ತದೆ. ಸೈಬರ್ ತಂತ್ರಜ್ಞಾನದ ಜತೆಗೇ ಸೈಬರ್ ಅಪರಾಧಗಳೂ ಹೆಚ್ಚಾಗುತ್ತಿವೆ. ಇದನ್ನು ಪರಿಣಾಮಕಾರಿಯಾಗಿ ತಡೆ ಹಿಡಿಯಬೇಕು ಎನ್ನುವ ಸೂಚನೆ ಮುಖ್ಯಮಂತ್ರಿಗಳು ನೀಡಿದರು.

ಸುಳ್ಳು ಸುದ್ದಿಗಳು, ಅಶಾಂತಿ ಸೃಷ್ಟಿಸುವ ಸುಳ್ಳುಗಳನ್ನು, ದ್ವೇಷ ಹರಡುವ ಸುಳ್ಳುಗಳನ್ನು ವ್ಯಾಪಕವಾಗಿ ಹರಡಲಾಗುತ್ತಿದೆ. ಸರ್ವರನ್ನೂ ಸಮಾನವಾಗಿ ಕಾಣುವ ಮತ್ತು ಸಮಾನವಾಗಿ ನಡೆಸಿಕೊಳ್ಳುವ ಜವಾಬ್ದಾರಿ ಸರ್ಕಾರ ಮತ್ತು ಪೊಲೀಸ್ ವ್ಯವಸ್ಥೆ ಮೇಲಿದೆ ಎಂದರು.

ಈ ಸುದ್ದಿ ಓದಿದ್ದೀರಾ? ಇಸ್ರೋದ ಮಾನವಸಹಿತ ಗಗನಯಾನದ ಮೊದಲ ಹಾರಾಟ ಪರೀಕ್ಷೆ ಯಶಸ್ವಿ

ಆದ್ದರಿಂದ ಸುಳ್ಳು ಸುದ್ದಿ ಹರಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು. ಸುಳ್ಳು ಮತ್ತು ದ್ವೇಷದ ಸುದ್ದಿಗಳು ನಾಡಿನ ಜಿಡಿಪಿಗೆ ಮಾರಕ. ಅಶಾಂತಿಯ ಪರಿಣಾಮವಾಗಿ ಜನರ ತಲಾ ಆದಾಯಕ್ಕೂ ಧಕ್ಕೆಯಾಗುತ್ತದೆ. ಆದ್ದರಿಂದ ಸುಳ್ಳು ಸುದ್ದಿ ಹರಡುವ ಜಾಲ ತಾಣಗಳು ಮತ್ತು ಅವನ್ನು ನಿರ್ವಹಿಸುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಮಹಿಳೆ, ಮಕ್ಕಳು ಮತ್ತು ಹಿರಿಯ ನಾಗರಿಕರ ಸುರಕ್ಷತೆ ಮತ್ತು ಭದ್ರತೆಗೆ ಹೆಚ್ಚಿನ ರಕ್ಷಣೆ ಕೊಡುವ ಅಗತ್ಯವಿದೆ. ಸುಗಮ ಸಂಚಾರ ವ್ಯವಸ್ಥೆ ಇನ್ನಷ್ಟು ಪರಿಣಾಮಕಾರಿಯಾಗಬೇಕು. ಹೀಗಾಗಿ ಹೆಚ್ಚುವರಿ ಪೊಲೀಸ್ ಹುದ್ದೆ ಸೃಷ್ಟಿಸಿದ್ದೇವೆ. ಹೆಚ್ಚುವರಿ ಮಹಿಳಾ ಮತ್ತು ಸಂಚಾರ ಠಾಣೆಗಳನ್ನು ಆರಂಭಿಸಿದ್ದೇವೆ. ಹೊಸ ವಾಹನ ಖರೀದಿಗೆ 100 ಕೋಟಿ ರೂಪಾಯಿಗಳನ್ನು ನೀಡಲಾಗುವುದು ಎಂದರು.

2125 ಪೊಲೀಸ್ ವಸತಿ ಗೃಹಗಳನ್ನು ನಿರ್ಮಿಸಲು 450 ಕೋಟಿ ನೀಡಲಾಗುವುದು. ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳ ಆರೋಗ್ಯ ಭಾಗ್ಯಕ್ಕಾಗಿ 100 ಕೋಟಿ ರೂ ಒದಗಿಸಲಾಗಿದೆ. ನಿವೃತ್ತ ಸಿಬ್ಬಂದಿಯ ಆರೋಗ್ಯ, ಚಿಕಿತ್ಸೆಗಾಗಿ ನಿಶ್ಚಿತ ಠೇವಣಿ ಇಡಲಾಗಿದೆ. ಪೊಲೀಸ್ ಸಿಬ್ಬಂದಿಯ ಮಕ್ಕಳ ಶಿಕ್ಷಣಕ್ಕಾಗಿ 7 ಜಿಲ್ಲೆಗಳಲ್ಲಿ 7 ಪೊಲೀಸ್ ಪಬ್ಲಿಕ್ ಶಾಲೆ ಆರಂಭಿಸಲಾಗುತ್ತಿದೆ. ಇವುಗಳ ಮೂಲಕ ಗುಣಮಟ್ಟದ ಶಿಕ್ಷಣ ನೀಡಲು ನಮ್ಮ ಸರ್ಕಾರ ಬದ್ದವಾಗಿದೆ. ಪೊಲೀಸ್ ಕ್ಯಾಂಟೀನ್‌ಗಳನ್ನು ಆರಂಭಿಸಲಾಗುತ್ತಿದೆ ಎಂದರು.

ಗೃಹ ಮಂತ್ರಿ ಜಿ. ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಮೋಹನ್ ಮತ್ತು ಪೊಲೀಸ್ ಇಲಾಖೆಯ ನಾನಾ ವಿಭಾಗಗಳ ಮುಖ್ಯಸ್ಥರು ಪುಷ್ಪ ನಮನ ಸಲ್ಲಿಸಿದರು.

ಕಳೆದ ಒಂದು ವರ್ಷದಲ್ಲಿ ದೇಶದಾದ್ಯಂತ ಹುತಾತ್ಮರಾದ ಎಲ್ಲಾ ರಕ್ಷಣಾ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಸ್ಮರಿಸಿ ನಮನ ಸಲ್ಲಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X