ರಾಜ್ಯ ರಾಜಕಾರಣದಲ್ಲಿ ಇನ್ನಾರು ತಿಂಗಳೊಳಗೆ ಭಾರೀ ಬದಲಾವಣೆ : ಎಚ್‌ಡಿಕೆ ಅಚ್ಚರಿ ಹೇಳಿಕೆ

Date:

  • ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಜಾರಿಯಲ್ಲಿ ಎಡವಲಿದೆ
  • ಕೆಲವರ ಪಿತೂರಿಯಿಂದ ನಮ್ಮ ಪಕ್ಷಕ್ಕೆ ಹಿನ್ನಡೆಯಾಗಿದೆ

ಸಿದ್ದರಾಮಯ್ಯ ನೇತೃತ್ವದಲ್ಲಿ ನೂತನ ಕಾಂಗ್ರೆಸ್ ಸರ್ಕಾರ ಆಡಳಿತ ಆರಂಭಿಸಲು ಸಿದ್ಧವಾಗುವ ಹೊತ್ತಿನಲ್ಲೇ ಮಾಜಿ ಸಿಎಂ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದು, ನವೆಂಬರ್ ವೇಳೆಗೆ ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆಗಳಾಗಲಿವೆ, ಕಾದು ನೋಡುವಂತೆ ಅವರು ಹೇಳಿದ್ದಾರೆ.

ಗುರುವಾರ ರಾಮನಗರದಲ್ಲಿ ಜೆಡಿಎಸ್ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮತದಾರರಿಗೆ ಕೃತಜ್ಞತಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಎಚ್ ಡಿ ಕುಮಾರಸ್ವಾಮಿ, ಬಹುಮತದ ಸರ್ಕಾರ ಬಂದಿದೆ ಎಂದು ಭಾವಿಸಬೇಡಿ. ಲೋಕಸಭಾ ಚುನಾವಣೆ ಬಳಿಕ ಏನು ಬೆಳವಣಿಗೆ ಆಗುತ್ತದೆ ಎಂದು ಕಾದು ನೋಡಿ ಎಂದಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ಬಿಜೆಪಿಯವರಂತೆಯೇ ಇವರೂ ಲೂಟಿ ಮಾಡುತ್ತಾರೆ. ಇದರಲ್ಲೇನು ಹೊಸತನ ಇರುವುದಿಲ್ಲ ಎಂದು ವ್ಯಂಗ್ಯವಾಡಿದರು. ಜೊತೆಗೆ ನಾನು ಯಾವುದೇ ಕಾರಣಕ್ಕೂ ಈ ಸರ್ಕಾರದ ಮಂತ್ರಿಗಳ ಬಳಿ ಕೈ ಚಾಚುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕಾಂಗ್ರೆಸ್ ನೀಡಿರುವ ಗ್ಯಾರಂಟಿ ಸೇರಿದಂತೆ ಯಾವುದೇ ಯೋಜನೆಯನ್ನು ಜಾರಿಗೆ ತರುವುದು ಸುಲಭವಲ್ಲ. ಈ ಹಿಂದೆ ಜಾರಿಯಲ್ಲಿರುವ ಕಾರ್ಯಕ್ರಮಗಳೇ ಮುಂದುವರಿಯುವ ಅನುಮಾನವಿದೆ. ಹೀಗಿರುವಾಗ ಹೊಸ ಯೋಜನೆಗಳಿಗೆ ಹಣವನ್ನೆಲ್ಲಿಂದ ಹೊಂದಿಸುತ್ತಾರೆ? ಇವುಗಳ ಜಾರಿಗೆ 60 ರಿಂದ 70 ಸಾವಿರ ಕೋಟಿ ರೂಪಾಯಿ ಬೇಕಾಗುತ್ತದೆ. ಇದಕ್ಕೆ ಎಲ್ಲಿಂದ ಅನುದಾನ ತರುತ್ತಾರೆ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

ಕಾಂಗ್ರೆಸ್‌ನವರ ಅಭಿವೃದ್ದಿ ಹೇಗಿರಲಿದೆ ಎನ್ನುವುದನ್ನು ಕಾದು ನೋಡಿ, ದೊಡ್ಡ ಅಭಿವೃದ್ಧಿ ಕಾರ್ಯಗಳು ಈ ಸರ್ಕಾರದಲ್ಲಿ ನಡೆಯುತ್ತದೆ ಎಂದು ಯಾವುದೇ ಕಾರಣಕ್ಕೂ ನಿರೀಕ್ಷೆ ಇಟ್ಟುಕೊಳ್ಳಬೇಡಿ ಎಂದವರು ಹೇಳಿದರು.

ಈ ಸುದ್ದಿ ಓದಿದ್ದೀರಾ?:ರಾಜ್ಯದ ನೂತನ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಬೆಳೆದು ಬಂದ ಹಾದಿ

ಜೆಡಿಎಸ್ ಈ ಬಾರಿ 60 ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಬೇಕಿತ್ತು. ಜೆಡಿಎಸ್ ಬಿಜೆಪಿ ಜೊತೆ ಹೋಗುತ್ತದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದರು. ಕೆಲವರ ಪಿತೂರಿ ಮತ್ತು ಸುಳ್ಳು ಆರೋಪಗಳಿಂದ ಎರಡು ಮೂರು ಸಮಾಜದ ಮತಗಳು ನಮ್ಮ ಪಕ್ಷಕ್ಕೆ ಬರಲಿಲ್ಲ ನಮ್ಮನ್ನು ಮುಗಿಸಲು ಹೋಗಿ ಈಗ ಬಿಜೆಪಿಯವರೇ ಮುಗಿದಿದ್ದಾರೆ.

ಸೋಲಲಿ ಗೆಲ್ಲಲಿ ನಾವು ಪಕ್ಷ ಸಂಘಟನೆ ಮುಂದುವರೆಸುತ್ತೇವೆ. ಮುಂದೆ ನಮ್ಮ ಪಕ್ಷ ಸ್ವತಂತ್ರವಾಗಿ ಅಧಿಕಾರಕ್ಕೆ ಬರಲಿದೆ ಎಂದು ಎಚ್‌ಡಿಕೆ ವಿಶ್ವಾಸ ವ್ಯಕ್ತಪಡಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಜ್ವಲ್‌ ಪೆನ್‌ಡ್ರೈವ್‌ ಪ್ರಕರಣ | ಕೆಲವೇ ಹೊತ್ತಲ್ಲಿ ಎಸ್‌ಐಟಿ ರಚನೆ: ಡಾ. ಜಿ ಪರಮೇಶ್ವರ್‌

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ...

ಕರ್ನಾಟಕಕ್ಕೆ ಇಂದು ಮೋದಿ; ಹಾಸನ ಪೆನ್‌ಡ್ರೈವ್ ಪ್ರಕರಣದ ಬಗ್ಗೆ ಮಾತಾಡ್ತಾರಾ ಪ್ರಧಾನಿ?

ಮಹಿಳೆಯರ ರಕ್ಷಣೆಗಾಗಿ 'ಬೇಟಿ ಬಚೋವೋ - ಬೇಟಿ ಪಡಾವೋ' ಎಂಬ ಘೋಷಣೆಯನ್ನು...

ಉದ್ಧವ್‌, ಶರದ್ ಪರವಾಗಿ ಅನುಕಂಪದ ಅಲೆಯಿದೆ ಎಂದ ಅಜಿತ್ ಪವಾರ್ ಬಣದ ನಾಯಕ!

"ರಾಜ್ಯದಲ್ಲಿ (ಮಹಾರಾಷ್ಟ್ರ) ಉದ್ಧವ್ ಠಾಕ್ರೆ ಮತ್ತು ಶರದ್ ಪವಾರ್ ಪರವಾಗಿ ಅನುಕಂಪದ...

ಬರ ಪರಿಹಾರ | ಬಾಕಿ ಮೊತ್ತ ತಕ್ಷಣ ಬಿಡುಗಡೆ ಮಾಡಲು ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಕೇಂದ್ರ ಸರ್ಕಾರ ಬರ ಪರಿಹಾರ ನೀಡುವ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಅನ್ಯಾಯ...