ಮಥುರಾ ದೇವಾಲಯ-ಮಸೀದಿ ಪ್ರಕರಣ | ಮುಸ್ಲಿಂ ಮುಖಂಡರ ಅರ್ಜಿ ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್

Date:

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಬಾಬರಿ ಮಸೀದಿಯನ್ನು ಧ್ವಂಸಗೊಳಿಸಿ, ವಿವಾದ ಸೃಷ್ಟಿಸಿದ್ದ ಹಿಂದುತ್ವವಾದಿಗಳ ಕಣ್ಣು ಈಗ ಮಥುರಾ ಮೇಲೆ ನೆಟ್ಟಿದೆ. ಮಥುರಾದ ಕೃಷ್ಣ ದೇವಾಲಯ ಮತ್ತು ಶಾಹಿ ಈದ್ಗಾ ಮಸೀದಿ ಒಂದೇ ಜಾಗದಲ್ಲಿದ್ದು, ಅದನ್ನು ವಿವಾದ ಸ್ಥಳವಾಗಿಸಲು ಮುಂದಾಗಿವೆ. ಈದ್ಗಾ ಮಸೀದಿ ಇರುವ ಸ್ಥಳ ಕೃಷ್ಣ ಜನ್ಮಭೂಮಿಗೆ ಸೇರಿದ್ದೆಂದು ಹಿಂದುತ್ವವಾದಿಗಳು ಅಲಹಾಬಾದ್‌ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಆ ಅರ್ಜಿಯ ಅಂಗೀಕಾರಾರ್ಹತೆ ಪ್ರಶ್ನಿಸಿ ಮುಸ್ಲಿಂ ಮುಖಂಡರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ಗುರುವಾರ ತಿರಸ್ಕರಿಸಿದೆ.

- Advertisement -

ಶಾಹಿ ಈದ್ಗಾ ಮಸೀದಿ ಪರವಾಗಿ ಮುಸ್ಲಿಂ ಮುಖಂಡರು ಸಲ್ಲಿಸಿದ್ದ ಅರ್ಜಿಯಲ್ಲಿ ಆದೇಶ 7 ನಿಯಮ 11 ಸಿಪಿಡಿ ಅಡಿಯಲ್ಲಿ ಹೈಕೋರ್ಟ್‌ ವಜಾಗೊಳಿಸಿದೆ. ಕೃಷ್ಣ ಜನ್ಮಭೂಮಿ ಪರವಾಗಿ ಹಿಂದುತ್ವವಾದಿಗಳು ಸಲ್ಲಿಸಿರುವ ಎಲ್ಲ 18 ಮೊಕದ್ದಮೆಗಳು ಅಂಗೀಕಾರಾರ್ಹವಾಗಿದೆ ಎಂದು ಕೋರ್ಟ್‌ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಹಿಂದುತ್ವವಾದಿಗಳು ಸಲ್ಲಿಸಿರುವ ಹಲವು ಅರ್ಜಿಗಳಲ್ಲಿ ರಾಜ ಔರಂಗಜೇಬ್ ಕಾಲದಲ್ಲಿ ದೇವಾಲಯವನ್ನು ನೆಲಸಮಗೊಳಿಸಿ, ಮಸೀದಿ ನಿರ್ಮಾಣ ಮಾಡಲಾಗಿದೆ ಎಂದು ವಾದಿಸಲಾಗಿದೆ. ಮಸೀದಿಯನ್ನು ಆ ಸ್ಥಳದಿಂದ ತೆರವುಗೊಳಿಸುವಂತೆ ಕೋರಲಾಗಿದೆ. ಅಲ್ಲದೆ, ಪೂಜಾಸ್ಥಳಗಳ ಕಾಯ್ದೆ, ಲಿಮಿಟೇಷನ್ ಕಾಯ್ದೆ ಮತ್ತು ವಕ್ಫ್ ಕಾಯ್ದೆಗಳು ಈ ಪ್ರಕರಣದಲ್ಲಿ ಅನ್ವಯವಾಗುವುದಿಲ್ಲ ಎಂದು ಅರ್ಜಿದಾರರು ವಾದಿಸಿದ್ದಾರೆ.

ಈ ವರದಿ ಓದಿದ್ದೀರಾ?: ಶೋಷಿತರ ವಿರುದ್ಧ ಅಸ್ತ್ರವಾದ ಅತ್ಯಾಚಾರ; ಇಸ್ರೇಲ್‌ನಿಂದ ಹೇಯ ಕೃತ್ಯ – ಭಾರತವೂ ಹೊರತಾಗಿಲ್ಲ

ಮಸೀದಿ ಇರುವ ಭೂಮಿಯನ್ನು ಯಾವುದೇ ಸರ್ಕಾರಿ ದಾಖಲೆಗಳಲ್ಲಿ ಈದ್ಗಾ ಮಸೀದಿಯ ಹೆಸರಿನಲ್ಲಿ ಗುರುತಿಸಲಾಗಿದೆ. ಹೀಗಾಗಿ, ಮಸೀದಿಯು ಅತಿಕ್ರಮಣ ಕಟ್ಟಡವಾಗಿದೆ. ಈ ಭೂಮಿಯು ವಕ್ಫ್ ಮಂಡಳಿಯ ಆಸ್ತಿಯಾಗಿದೆ ಎಂಬುದು ನಿಜವಾಗಿದ್ದಲ್ಲ, ಮಸೀದಿ ಸಮಿತಿಯು ಆ ಭೂಮಿಯನ್ನು ಮಸೀದಿಗೆ ದೇಣಿಗೆ ನೀಡಿದ ದಾನಿಯ ಕುರಿತು ಮಾಹಿತಿ ಒದಗಿಸಬೇಕು ಹಿಂದುತ್ವವಾದಿ ಅರ್ಜಿದಾರರು ತಮ್ಮ ಅರ್ಜಿಯಲ್ಲಿ ವಾದಿಸಿದ್ದಾರೆ.

1992ರಿಂದ ಅಯೋಧ್ಯೆಯ ಬಾಬರಿ ಮಸೀದಿ ಇದ್ದ ಸ್ಥಳವು ವಿವಾದದ ಸ್ಥಳವಾಗಿತ್ತು. ಬಾಬರಿ ಮಸೀದಿ ಇದ್ದ ಸ್ಥಳವು ರಾಮ ಜನ್ಮಭೂಮಿಯಾಗಿದ್ದು, ಅದನ್ನು ರಾಮಮಂದಿರಕ್ಕೆ ನೀಡಬೇಕೆಂದು ಆರ್‌ಎಸ್‌ಎಸ್‌, ಬಿಜೆಪಿ ನೇತೃತ್ವದಲ್ಲಿ ಹಿಂದುತ್ವವಾದಿಗಳು ವಿವಾದ ಸೃಷ್ಟಿಸಿದ್ದರು. ಆ ಭೂಮಿ ರಾಮಮಂದಿರಕ್ಕೆ ಸೇರಿದ್ದು ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲದಿದ್ದರೂ, ಜನರ ಭಾವನೆಯನ್ನು ಪರಿಗಣಿಸಿ ಬಾಬರಿ ಮಸೀದಿ ಇದ್ದ ಸ್ಥಳದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸುಪ್ರೀಂ ಕೋರ್ಟ್‌ ಆದೇಶಿಸಿತ್ತು.

ಆ ಸಂದರ್ಭದಲ್ಲಿಯೇ ರಾಜ್ಯದ ಬಿಜೆಪಿ ಮಾಜಿ ಸಚಿವ ಈಶ್ವರಪ್ಪ ಸೇರಿದಂತೆ ಹಲವು ಬಿಜೆಪಿ ನಾಯಕರು, ಮಥುರಾ, ಕಾಶಿಗಳನ್ನೂ ಬಿಡುವುದಿಲ್ಲ. ಅಲ್ಲಿಯೂ ಮಸೀದಿಗಳನ್ನು ತೆರವುಗೊಳಿಸಿ ದೇವಾಲಯ ಕಟ್ಟುತ್ತೇವೆಂದು ಹೇಳಿಕೆ ನೀಡಿದ್ದರು. ಈ ಬೆನ್ನಲ್ಲೇ, ಮಥುರಾದಲ್ಲಿ ಮಸೀದಿ ತೆರವಿಗೆ ಒತ್ತಾಯಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಅಲ್ಲದೆ, ಜ್ಞಾನವಾಪಿ ಮಸೀದಿಯನ್ನು ವಿವಾದದ ಬಿಂದುವಾಗಿಸಿದ್ದು, ಮಸೀದಿ ಸಂಕೀರ್ಣದ ಸರ್ವೇ ಮಾಡಲು ವಾರಣಾಸಿ ನ್ಯಾಯಾಲಯ ಆದೇಶಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...