ಎಸಿ ನ್ಯಾಯಾಲಯಗಳಲ್ಲಿನ ಬಾಕಿ ತಕರಾರು ಅರ್ಜಿ ಇತ್ಯರ್ಥಕ್ಕೆ ಮೇ.20ರ ಗಡುವು: ಸಚಿವ ಕೃಷ್ಣ ಬೈರೇಗೌಡ

Date:

Advertisements

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೇ.20ಕ್ಕೆ ಎರಡು ವರ್ಷವಾಗಲಿದೆ. ಅಷ್ಟರೊಳಗೆ ಉಪ ವಿಭಾಗಾಧಿಕಾರಿಗಳ (ಎಸಿ) ನ್ಯಾಯಾಲಯದಲ್ಲಿ ಬಾಕಿ ಇರುವ ತಕರಾರು ಪ್ರಕರಣಗಳನ್ನು ಇತ್ಯರ್ಥಗೊಳಿಸಿ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಗಡುವು ನೀಡಿದರು.

ಗುರುವಾರ ವಿಕಾಸಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ಉಪ ವಿಭಾಗಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, “ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಉಪ ವಿಭಾಗಾಧಿಕಾರಿಗಳ ನ್ಯಾಯಾಲಯಗಳಲ್ಲಿ ಐದು ವರ್ಷಕ್ಕೆ ಮೇಲ್ಪಟ್ಟ 32,787 ಪ್ರಕರಣಗಳು ಬಾಕಿ ಇದ್ದವು. ಈ ಪೈಕಿ ಶೇ.82 ರಷ್ಟು ಸರಾಸರಿಯಲ್ಲಿ 26,961 ಪ್ರಕರಣಗಳಿಗೆ ಇದೀಗ ಮುಕ್ತಿ ನೀಡಲಾಗಿದೆ. ಇದೇ ಸಮಯದಲ್ಲಿ ಒಂದು ವರ್ಷಕ್ಕೆ ಮೇಲ್ಪಟ್ಟ 59,339 ಪ್ರಕರಣಗಳ ಪೈಕಿ 40,394 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ” ಎಂದು ಅಧಿಕಾರಿಗಳ ಕೆಲಸಕ್ಕೆ ಮೆಚ್ಚುಗೆ ಸೂಚಿಸಿದರು.

ಮುಂದುವರೆದು, “ಕಳೆದ ಎರಡು ವರ್ಷಗಳಿಂದ ಅಧಿಕಾರಿಗಳು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದೀರಿ. ಎಸಿ ನ್ಯಾಯಾಲಯಗಳಲ್ಲಿನ ಪ್ರಕರಣಗಳ ವಿಲೇವಾರಿ ವೇಗ ಪಡೆಯುತ್ತಿದೆ. ಆದರೂ, ಎರಡು ವರ್ಷದಲ್ಲಿ ಎಲ್ಲಾ ಬಾಕಿ ಪ್ರಕರಣಗಳನ್ನೂ ಇತ್ಯರ್ಥಗೊಳಿಸಬೇಕು ಎಂಬ ಇಲಾಖೆಯ ಗುರಿಯನ್ನು ಮುಟ್ಟಲು ಸಾಧ್ಯವಾಗಿಲ್ಲ. ಪರಿಣಾಮ ಇನ್ನೂ 22,967 ಪ್ರಕರಣಗಳು ಬಾಕಿ ಇವೆ. ಮುಂದಿನ ಮೇ 20ಕ್ಕೆ ಸರ್ಕಾರಕ್ಕೂ ಎರಡು ವರ್ಷ ತುಂಬುತ್ತಿದ್ದು, ಅಷ್ಟರೊಳಗೆ ಈ ಪೈಕಿ ಕನಿಷ್ಟ 10 ರಿಂದ 12 ಸಾವಿರ ಪ್ರಕರಣಗಳನ್ನು ಇತ್ಯರ್ಥಗೊಳಿಸಿ” ಎಂದರು.

Advertisements

ಅಲ್ಲದೆ, “ಸರ್ಕಾರದ ಕಾನೂನಿನಂತೆ ಎಸಿ ನ್ಯಾಯಾಲಯದ ಪ್ರಕಣಗಳನ್ನು ಆರು ತಿಂಗಳ ಒಳಗೆ ಮುಗಿಸಬೇಕು ಎಂಬ ನಿಯಮ ಇದೆ. ಆದರೂ, ನಿಮಯ ಮೀರಿ ಐದು ವರ್ಷಕ್ಕೂ ಮೇಲ್ಪಟ್ಟ 5826ಪ್ರಕರಣಗಳು ಬಾಕಿ ಇದ್ದು, ಈ ಪ್ರಕರಣಗಳನ್ನು ಆದ್ಯತೆ ಮೇರೆ ಶೀಘ್ರ ವಿಲೇವಾರಿಗೊಳಿಸಬೇಕು. ಜೊತೆಗೆ ಉಪ ವಿಭಾಗಾಧಿಕಾರಿಗಳು ತಿಂಗಳಿಗೆ 300 ಹಾಗೂ ವಿಶೇಷ ಉಪ ವಿಭಾಗಾಧಿಕಾರಿಗಳು ತಿಂಗಳಿಗೆ ಕನಿಷ್ಟ 150 ಪ್ರಕರಣಗಳನ್ನು ವಿಲೇವಾರಿ ಮಾಡಬೇಕು ಎಂದು ಸೂಚಿಸಿದರು.

ಗುಣಮಟ್ಟದ ವಿಲೇವಾರಿಗೆ ಸಚಿವರ ಮೆಚ್ಚುಗೆ

ಉಪ ವಿಭಾಗಾಧಿಕಾರಿಗಳ ನ್ಯಾಯಾಲಯಗಳಲ್ಲಿನ ಪ್ರಕರಣಗಳನ್ನು ಅಭಿಯಾನ ಮಾದರಿಯಲ್ಲಿ ಇತ್ಯರ್ಥಗೊಳಿಸಲಾಗುತ್ತಿದೆ. ಬಾಕಿ ಪ್ರಕರಣಗಳ ಇತ್ಯರ್ಥ ಹಿಂದೆದಿಗಿಂತಲೂ ಭಾರೀ ಮಟ್ಟದಲ್ಲಿ ಸುಧಾರಣೆಯಾಗಿದೆ. ಈ ನಡುವೆ ಪ್ರಕರಣಗಳ ಗುಣಮಟ್ಟದ ವಿಲೇವಾರಿಗೂ ಅಧಿಕಾರಿಗಳು ಹೆಚ್ಚಿನ ಒತ್ತು ನೀಡಿರುವುದು ಉತ್ತಮ ಬೆಳವಣಿಗೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮೆಚ್ಚುಗೆ ಸೂಚಿಸಿದರು.

ಎಸಿ ನ್ಯಾಯಾಲಯಗಳಲ್ಲಿ ಐದು ವರ್ಷಕ್ಕೆ ಮೇಲ್ಪಟ್ಟ ಪ್ರಕರಣಗಳ ಪೈಕಿ ಶೇ.80 ರಷ್ಟು ಹಾಗೂ ಒಂದು ವರ್ಷಕ್ಕೆ ಮೇಲ್ಪಟ್ಟ ಶೇ.70 ರಷ್ಟು ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ. ಆದರೆ, ಡಿಸಿ ನ್ಯಾಯಾಲಯಕ್ಕೆ ಬಂದಿರುವ ಮೇಲ್ಮನವಿಗಳ ಸಂಖ್ಯೆ ಕೇವಲ ಶೇ.6 ರಷ್ಟು ಮಾತ್ರ. ಈ ಸಂಖ್ಯೆ ಎಸಿ ನ್ಯಾಯಾಲಯಗಳಲ್ಲಿನ ಪ್ರಕರಣಗಳ ಗುಣಮಟ್ಟದ ಇತ್ಯರ್ಥಕ್ಕೆ ಸಾಕ್ಷಿಯಾಗಿದೆ. ಆದರೆ, ಮುಂದಿನ ದಿನಗಳಲ್ಲಿ ಗುಣಮಟ್ಟದ ಬಗ್ಗೆ ಪ್ರಶ್ನೆ ಏಳಬಹುದು. ಹೀಗಾಗಿ ಅಧಿಕಾರಿಗಳು ಎಂದಿನಂತೆ ಎಚ್ಚರ ವಹಿಸಬೇಕಿದೆ” ಎಂದು ತಿಳಿಸಿದರು.

ದಾಖಲೆಗಳ ಡಿಜಿಟಲೀಕರಣ

ʼಭೂ ಸುರಕ್ಷಾ ʼ ಯೋಜನೆಯ ಅಡಿಯಲ್ಲಿ ಈಗಾಗಲೇ ಭೂ ಮಾಪನಾ ಇಲಾಖೆ ಹಾಗೂ ತಹಶೀಲ್ದಾರ್ ಕಚೇರಿಗಳಲ್ಲಿ ಭೂ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಿಸಲಾಗುತ್ತಿದೆ. ಮುಂದಿನ ಹಂತದಲ್ಲಿ ಉಪ ವಿಭಾಗಾಧಿಕಾರಿಗಳ ಕಚೇರಿಗಳಲ್ಲೂ ಎಲ್ಲಾ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಿಸಬೇಕು. ಅಲ್ಲದೆ, ಇಂಟರ್ ಲಿಂಕ್ ಮಾಡಿ ಸಾರ್ವಜನಿಕ ಡೊಮೈನ್ನಲ್ಲಿ ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಮುಂದುವರೆದು, “ಕಂದಾಯ ಇಲಾಖೆಯಲ್ಲಿ ಒಳ್ಳೆಯ ಕೆಲಸಗಳಾಗುತ್ತಿವೆ ಎಂದು ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದಾರೆ. ಅಧಿಕಾರಿಗಳು ಜನಪರವಾಗಿ ಕೆಲಸ ಮಾಡಿದ್ರೆ ಜನ ಗುರುತಿಸುತ್ತಾರೆ. ಇದನ್ನೇ ಪ್ರೇರಕ ಶಕ್ತಿಯನ್ನಾಗಿಸಿಕೊಂಡು ಜನರಿಗಾಗಿ ಮತ್ತಷ್ಟು ಕೆಲಸ ಮಾಡಲು ಶಕ್ತಿಮೀರಿ ಶ್ರಮಿಸಬೇಕು. ಇದರಿಂದ ಇಲಾಖೆ ಹಾಗೂ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ, ಜನರಿಗೂ ಒಳ್ಳೆಯದಾಗುತ್ತದೆ” ಎಂದು ಅವರು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.

ಸಭೆಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟಾರಿಯಾ ಹಾಗೂ ಕಂದಾಯ ಆಯುಕ್ತರಾದ ಸುನೀಲ್ ಕುಮಾರ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X