ಮುಂದಿನ ಚುನಾವಣೆ ಗೆಲ್ಲಲು ಬಿಜೆಪಿಯಿಂದ ರಾಮ ಮಂದಿರದ ಮೇಲೆ ದಾಳಿ: ಸತ್ಯಪಾಲ್ ಮಲಿಕ್ ಆರೋಪ

Date:

2024ರ ಲೋಕಸಭಾ ಚುನಾವಣೆ ಗೆಲ್ಲಲು ಬಿಜೆಪಿ ನಾಯಕರು ದೇಶದಲ್ಲಿ ಯಾವುದೇ ರೀತಿಯ ಗಂಭೀರ ಅನಾಹುತ ಮಾಡಿಸಬಹುದು ಎಂದು ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಆತಂಕ ವ್ಯಕ್ತಪಡಿಸಿದ್ದಾರೆ.

- Advertisement -

ಸುದ್ದಿ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿರುವ ಅವರು, ಚುನಾವಣೆ ಗೆಲ್ಲಲು ರಾಮಮಂದಿರ ಸ್ಫೋಟ ಅಥವಾ ಪ್ರಭಾವಿ ಬಿಜೆಪಿ ನಾಯಕನ ಹತ್ಯೆ ಮಾಡಿಸಿ ರಾಜಕೀಯ ಲಾಭ ಪಡೆದುಕೊಳ್ಳಬಹುದು. ಪುಲ್ವಾಮ ದಾಳಿ ಮಾಡಿಸಿದವರು ಏನನ್ನು ಬೇಕಾದರೂ ಮಾಡಲು ಶಕ್ತರು” ಎಂದು ಮಲಿಕ್ ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಪ್ರಧಾನಿ ಮೋದಿಯವರ ನಿರ್ದಯ ಚುನಾವಣಾ ತಂತ್ರಗಳನ್ನು ಉಲ್ಲೇಖಿಸಿದ ಮಲಿಕ್, 2019ರ ಪುಲ್ವಾಮಾ ದಾಳಿಯನ್ನು ಉಂಟುಮಾಡುವ ಸಾಮರ್ಥ್ಯವಿರುವ ಯಾರಾದರೂ ರಾಜಕೀಯ ಉದ್ದೇಶಗಳನ್ನು ಸಾಧಿಸಲು ಏನು ಬೇಕಾದರೂ ಮಾಡಬಹುದು” ಎಂದರು.

“ಪ್ರಧಾನಿ ಮೋದಿಗೆ ಹೇಗೆ ಕುತಂತ್ರವಾಗಿ ಆಡಳಿತ ನಡೆಸಬೇಕು ಎಂದು ತಿಳಿದಿದೆ. 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಸೋಲುವ ಕಾರಣದಿಂದ ಈಗಲೇ ರಾಜೀನಾಮೆ ನೀಡುವುದು ಒಳ್ಳೆಯದು” ಎಂದು ಸತ್ಯಪಾಲ್ ಮಲಿಕ್ ಆಗ್ರಹಿಸಿದರು.

ಇತ್ತೀಚೆಗೆ ‘ದಿ ವೈರ್‌’ ಸುದ್ದಿ ಸಂಸ್ಥೆಗೆ ಸಂದರ್ಶನ ನೀಡಿದ್ದ ಸತ್ಯಪಾಲ್ ಮಲಿಕ್, “ಪುಲ್ವಾಮಾ ದಾಳಿಗೂ ಮೊದಲು ಸಿಆರ್‌ಪಿಎಫ್ ಯೋಧರ ಸಾಗಣೆಗೆ ಐದು ವಿಮಾನಗಳಿಗೆ ಬೇಡಿಕೆ ಇಡಲಾಗಿತ್ತು. ಆದರೆ, ಗೃಹ ಸಚಿವಾಲಯವು ಅವುಗಳನ್ನು ಒದಗಿಸಲಿಲ್ಲ. ಅಲ್ಲದೆ ಅಲ್ಲಿ ಹಲವು ಲೋಪಗಳಾಗಿದ್ದವು. ರಸ್ತೆ ಮಾರ್ಗವಾಗಿ ತೆರಳುವ ವಾಹನಗಳನ್ನು ತಪಾಸಣೆ ಮಾಡಲು ಯಾವುದೇ ಗಸ್ತು ವಾಹನಗಳಾಗಲಿ, ತಪಾಸಣಾ ಠಾಣೆಗಳಾಗಲಿ ಇರಲಿಲ್ಲ. ತಾವು ಈ ತಪ್ಪುಗಳನ್ನು ಪ್ರಧಾನಿ ನರೇಂದ್ರ ಮೋದಿಯವರ ಗಮನಕ್ಕೆ ತಂದರೂ, ಅವರು ನನಗೆ ಮೌನವಾಗಿರುವಂತೆ ಸೂಚಿಸಿದ್ದರು. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ತಮಗೆ ಕರೆ ಮಾಡಿ, ಸರ್ಕಾರದ ಲೋಪಗಳ ಕುರಿತು ಏನೂ ಮಾತಾಡಬಾರದೆಂದು ಸೂಚಿಸಿದ್ದರು” ಎಂದು ಗಂಭೀರ ಆರೋಪ ಮಾಡಿದ್ದರು.

ಈ ಸುದ್ದಿ ಓದಿದ್ದೀರಾ? ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಡಿಸಿಎಂ ಡಿ ಕೆ ಶಿವಕುಮಾರ್‌ಗೆ ‘ಸುಪ್ರೀಂ’ನಿಂದ ಬಿಗ್‌ ರಿಲೀಫ್‌

ಏತನ್ಮಧ್ಯೆ, ಮಲಿಕ್ ಅವರು ಮಣಿಪುರ ಹಿಂಸಾಚಾರವನ್ನು ಪ್ರಸ್ತಾಪಿಸಿ ಸರ್ಕಾರವು ಅಮಾಯಕರಿಗೆ ಶಸ್ತ್ರಾಸ್ತ್ರಗಳನ್ನು ನೀಡುವ ಮೂಲಕ ರಾಜ್ಯದಲ್ಲಿ ಗಲಭೆಯನ್ನು ಉತ್ತೇಜಿಸುತ್ತಿದೆ. ಹಿಂಸಾಚಾರದಲ್ಲಿ ಬಳಸುತ್ತಿರುವ ಅಸ್ತ್ರಗಳು ಜನಸಾಮಾನ್ಯರಿಗೆ ಅಷ್ಟು ಸುಲಭವಾಗಿ ಕೈಗೆಟುಕುವುದಿಲ್ಲ ಎಂದು ಹೇಳಿದ್ದಾರೆ.

“ರೈತ ಪ್ರತಿಭಟನೆಯಲ್ಲಿ ಮೃತಪಟ್ಟ ರೈತರಿಗೆ ಶ್ರದ್ಧಾಂಜಲಿ ಅರ್ಪಿಸಿ ಎಂದು ಮೋದಿ ಅವರಿಗೆ ಸಲಹೆ ನೀಡಿದಾಗ, ಅವರು ನನಗಾಗಿ ಸತ್ತರೇ? ನಾನ್ಯಾಕೆ ಶ್ರದ್ಧಾಂಜಲಿ ಸಲ್ಲಿಸಲಿ ಎಂದು ಮೋದಿ ಹೇಳಿದ್ದರು” ಎಂದು ಮಲಿಕ್ ಅವರು ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು.

ಪುಲ್ವಾಮ ದಾಳಿ ಸಂದರ್ಭ ಮಲಿಕ್ ಅವರು ಜಮ್ಮು ಕಾಶ್ಮೀರದ ರಾಜ್ಯಪಾಲರಾಗಿದ್ದರು. ರಾಜ್ಯಪಾಲರಾಗಿದ್ದಾಗಲೇ ಸರಕಾರದ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಮಾಡಿದ್ದರು. ರಾಜೀನಾಮೆ ನಂತರವೂ ಸರಕಾರದ ಅವ್ಯವಸ್ಥೆಯ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

22 ನಿಮಿಷದ ಜಾಹೀರಾತು, 75 ಸಾವಿರ ದಂಡ! ಸಿನಿಪ್ಲೆಕ್ಸ್‌ ಕಿವಿಹಿಂಡಿದ ಗ್ರಾಹಕ ವೇದಿಕೆ

ಸಿನಿಮಾ ಶುರುವಾಗುವ ಮುನ್ನ 22 ನಿಮಿಷಗಳ ಕಾಲ ವಾಣಿಜ್ಯ ಜಾಹೀರಾತುಗಳು ಮತ್ತು...

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...