ರಾಹುಲ್‌ ಅನರ್ಹತೆ ವಿಚಾರ | ಕಾಂಗ್ರೆಸ್‌ನಿಂದ ನಿಲುವಳಿ ಸೂಚನೆ ಸಲ್ಲಿಕೆ

Date:

  • ಏಪ್ರಿಲ್‌ 6ರವರೆಗೆ ನಡೆಯಲಿರುವ ಎರಡನೇ ಅವಧಿಯ ಅಧಿವೇಶನ
  • ಲೋಕಸಭೆಗೆ ನಿಲುವಳಿ ಸೂಚನೆ ಸಲ್ಲಿಸಿದ ಮನೀಶ್‌ ತಿವಾರಿ

ಲೋಕಸಭೆ ಹಾಗೂ ರಾಜ್ಯಸಭೆಯ ಸಂಸದರು ಸಂಸತ್ತಿನಲ್ಲಿರುವ ಕಾಂಗ್ರೆಸ್‌ ಸಂಸದೀಯ ಪಕ್ಷದ ಕಚೇರಿಯಲ್ಲಿ ಸೋಮವಾರ (ಮಾರ್ಚ್‌ 27) ಬೆಳಿಗ್ಗೆ 10.30ಕ್ಕೆ ಸಭೆ ನಡೆಸಿದ್ದಾರೆ.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ಅನರ್ಹತೆಯ ವಿಚಾರವಾಗಿ ಮುಂದಿನ ತೀರ್ಮಾನ ಕೈಗೊಳ್ಳಲು ಸಭೆ ಆಯೋಜಿಸಲಾಗಿದೆ. ಅದಾನಿ ಹಗರಣ ಹಾಗೂ ರಾಹುಲ್‌ ಅವರ ಅನರ್ಹತೆಗೆ ಸಂಬಂಧಿಸಿ ಕೇಂದ್ರದ ವಿರುದ್ಧ ಕಪ್ಪು ಬಟ್ಟೆ ಧರಿಸಿ ಪ್ರತಿಭಟಿಸಲು ಕಾಂಗ್ರೆಸ್‌ ನಾಯಕರು ತೀರ್ಮಾನಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಲೋಕಸಭೆ ಮತ್ತು ರಾಜ್ಯಸಭೆಯಲ್ಲಿನ ಕಾಂಗ್ರೆಸ್‌ ಸಂಸದರು ಸಂಸತ್ತು ಅಧಿವೇಶನಕ್ಕೆ ಕಪ್ಪು ವಸ್ತ್ರ ಧರಿಸಿ ಹಾಜರಾಗಲು ನಿರ್ಧರಿಸಿದ್ದಾರೆ. ಲೋಕಸಭೆಯಲ್ಲಿ ರಾಹುಲ್‌ ಗಾಂಧಿ ಅವರ ಅನರ್ಹತೆ ವಿಚಾರವನ್ನು ಚರ್ಚೆ ನಡೆಸುವಂತೆ ಆಗ್ರಹಿಸಿ ಕಾಂಗ್ರೆಸ್‌ ನಾಯಕ ಮನೀಶ್‌ ತಿವಾರಿ ಸೋಮವಾರ ನಿಲುವಳಿ ಸೂಚನೆ ನೀಡಿದ್ದಾರೆ.

ಎರಡನೇ ಅವಧಿಯ ಬಜೆಟ್‌ ಅಧಿವೇಶನ ಆರಂಭವಾದಾಗಿನಿಂದ ಉದ್ಯಮಿ ಗೌತಮ್ ಅದಾನಿ ಕುರಿತ ಹಿಂಡನ್‌ಬರ್ಗ್‌ ಸಂಶೋಧನಾ ವರದಿ ವಿಚಾರವಾಗಿ ತನಿಖೆಗೆ ಜಂಟಿ ಸಂಸದೀಯ ಸಮಿತಿ ರಚನೆಗೆ ಒತ್ತಾಯಿಸಿ ಕಾಂಗ್ರೆಸ್‌ ಮತ್ತು ಪ್ರತಿಪಕ್ಷಗಳು ಪ್ರತಿಭಟಿಸುತ್ತಿವೆ.

ಇದನ್ನು ಓದಿದ್ದೀರಾ? ರಾಹುಲ್ ಗಾಂಧಿ ಅನರ್ಹತೆ | ನರೇಂದ್ರ ಮೋದಿ ಒಬ್ಬ ಹೇಡಿ: ಪ್ರಿಯಾಂಕ ವಾದ್ರಾ ಕಿಡಿ

ಸಮಾನಮನಸ್ಕ ಪ್ರತಿಪಕ್ಷಗಳು ಸದನದಲ್ಲಿ ರೂಪಿಸಬೇಕಾದ ಕಾರ್ಯತಂತ್ರಗಳ ಕುರಿತು ಚರ್ಚಿಸಲು ಪ್ರತಿಪಕ್ಷಗಳ ಸಂಸದರು ಸಭೆ ಸೇರಿವೆ. ಸಭೆಯಲ್ಲಿ ಆಮ್ ಆದ್ಮಿ ಪಕ್ಷ ಹಾಗೂ ತೃಣಮೂಲ ಕಾಂಗ್ರೆಸ್‌ ಸಂಸದರೂ ಭಾಗವಹಿಸಿರುವುದಾಗಿ ವರದಿಯಾಗಿದೆ.

ಎರಡನೇ ಅವಧಿಯ ಬಜೆಟ್‌ ಅಧಿವೇಶನದ ಮೂರನೇ ವಾರವೂ ಪ್ರತಿಪಕ್ಷಗಳ ಪ್ರತಿಭಟನೆಗೆ ಉಭಯ ಸದನಗಳೂ ಸಾಕ್ಷಿಯಾಗಿವೆ. ಮಾರ್ಚ್‌ 13ರಿಂದ ಆರಂಭವಾಗಿರುವ ಎರಡನೇ ಅವಧಿ ಅಧಿವೇಶನ ಏಪ್ರಿಲ್‌ 6ರವರೆಗೆ ನಡೆಯಲಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಿಜೋರಾಂ | ಝೆಡ್‌ಪಿಎಂಗೆ ಬಹುಮತ: ಇಂದಿರಾ ಭದ್ರತಾ ಉಸ್ತುವಾರಿಯಾಗಿದ್ದವ ನೂತನ ಸಿಎಂ !

ಮಿಜೋರಾಂ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬಹುತೇಕ ಮುಕ್ತಾಯವಾಗಿದ್ದು, ಒಟ್ಟು 40...

ಎಚ್‌ ಡಿ ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆ

ಸಾಮಾಜಿಕ ಹೋರಾಟಗಾರ ಸಿ ಎಸ್ ​ಸಿದ್ದರಾಜು ಅವರಿಂದ ದೂರು ಚುನಾವಣಾ...

2022 ರಲ್ಲಿ ದೇಶದಲ್ಲಿ 28,522 ಕೊಲೆ ಪ್ರಕರಣಗಳು ದಾಖಲು: ಉತ್ತರ ಪ್ರದೇಶ ಹೆಚ್ಚು

ದೇಶದಲ್ಲಿ 2022ರಲ್ಲಿ ಒಟ್ಟು 28,522 ಕೊಲೆಗಳ ಎಫ್ಐಆರ್‌ಗಳು ದಾಖಲಾಗಿವೆ ಎಂದು ರಾಷ್ಟ್ರೀಯ...