ಗಣಿ-ಪರಿಸರ ಪುನಶ್ಚೇತನ ನಿಗಮದ ಸಭೆ: ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ದರಾಮಯ್ಯ

Date:

Advertisements

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳ ಕಾರ್ಯವೈಖರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ಸೂಚಿಸಿ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.

ಕಾರ್ಯದರ್ಶಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸಿಎಂ, ಅಧಿಕಾರಿಗಳ ವಿಳಂಬ ಧೋರಣೆಯನ್ನು ಸಹಿಸುವುದಿಲ್ಲ ಎಂದು ಸ್ಪಷ್ಟ ಸೂಚನೆ ನೀಡಿದರು.

ಕೆಎಂಇಆರ್‌ಸಿಗೆ CEPMIZ ಯೋಜನೆಯಡಿ ಒಟ್ಟು 24,996.30 ಕೋಟಿ ರೂ. ಒದಗಿಸಲಾಗಿದೆ. ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳಿಗೆ ಒದಗಿಸಲಾಗಿದೆ. ಇದರಲ್ಲಿ ಯೋಜನೆಗಳ ಆಯ್ಕೆ ಹಾಗೂ ಕಾಮಗಾರಿಗಳ ಪ್ರಗತಿಯ ಮೇಲ್ವಿಚಾರಣಾ ಪ್ರಾಧಿಕಾರ ಸುಪ್ರೀಂ ಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ ರೆಡ್ಡಿ ಅವರು ಒಟ್ಟು 7928.78 ಕೋಟಿ ರೂ. ಮೊತ್ತದ 358 ಯೋಜನೆಗಳನ್ನು ಅನುಮೋದಿಸಿದ್ದಾರೆ. ಈ ಪೈಕಿ ಒಟ್ಟು 3469.41 ಕೋಟಿ ರೂ. ವೆಚ್ಚದ 182 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. 135 ಯೋಜನೆಗಳಿಗೆ ಟೆಂಡರ್‌ ಕರೆಯಲಾಗಿದ್ದು, 47 ಕಾಮಗಾರಿಗಳಿಗೆ ಕಾರ್ಯಾದೇಶ ನೀಡಲಾಗಿದೆ. 23 ಕಾಮಗಾರಿಗಳನ್ನು ವಿವಿಧ ಸಂಸ್ಥೆಗಳಿಗೆ ವಹಿಸಲಾಗಿದೆ ಎಂದು ಸಿಎಂ ಕಚೇರಿ ಮಾಹಿತಿ ನೀಡಿದೆ.

Advertisements

ಯೋಜನೆಗಳ ಅನುಷ್ಠಾನಕ್ಕೆ ಒಂದು ವಾರದೊಳಗೆ ಡಿ.ಪಿ.ಆರ್. ಪೂರ್ಣಗೊಳಿಸಬೇಕು ಎಂದು ಸಂಬಂಧಿಸಿದ ಇಲಾಖೆಗಳಿಗೆ ಸೂಚಿಸಿದ ಸಿಎಂ, ಯೋಜನೆಗಳ ಸಕಾಲಿಕ ಹಾಗೂ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಸಂಬಂಧಿಸಿದ ಇಲಾಖೆಯಲ್ಲಿ ಯೋಜನಾ ಮೇಲ್ವಿಚಾರಣೆ ಘಟಕ ಸ್ಥಾಪಿಸುವಂತೆ ನಿರ್ದೇಶನ ನೀಡಿದರು.

ವರ್ಷ ಕಳೆದರೂ ಡಿಪಿಆರ್ ಆಗದೇ ಇದ್ದುದಕ್ಕೆ ಕಾರ್ಯದರ್ಶಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸಿಎಂ, ಅಧಿಕಾರಿಗಳ ವಿಳಂಬ ಧೋರಣೆಗೆ ಗರಂ ಆದರು. ಸರ್ಕಾರಿ ಕೆಲಸಗಳಲ್ಲಿ ವಿಳಂಬ ಧೋರಣೆ ಸಹಿಸುವದಿಲ್ಲ. ತಪ್ಪಿದರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.

“ಇದು ವಿಶೇಷ ಕಾರ್ಯಕ್ರಮವಾಗಿದ್ದು, ಟೆಂಡರ್‌ನ ವಾಡಿಕೆಯ ಷರತ್ತುಗಳು ಅನ್ವಯಿಸುವುದಿಲ್ಲ. ಟೆಂಡರ್‌ನಲ್ಲಿ ನಿಗಮವು ವಾರದೊಳಗೆ ಬಿಲ್‌ ಪಾವತಿಸಲಾಗುವುದರಿಂದ ಯಾವುದೇ mobilization advance ನೀಡಲಾಗದು ಎಂಬುದನ್ನು ಗುತ್ತಿಗೆದಾರರಿಗೆ ಸ್ಪಷ್ಟಪಡಿಸಿ” ಎಂದು ಅಧಿಕಾರಿಗಳಿಗೆ ಸೂಚಿಸಿದರು.

ವಸತಿ ಯೋಜನೆಗಳಡಿ ಫಲಾನುಭವಿಗಳನ್ನು ಶೀಘ್ರವೇ ಗುರುತಿಸಲು ಸೂಚಿಸಿದ ಸಿಎಂ, ಸಣ್ಣ ನೀರಾವರಿ ಇಲಾಖೆ 14 ಯೋಜನೆಗಳ ಪೈಕಿ 7 ಯೋಜನೆಗಳ ಕಾಮಗಾರಿ ಆರಂಭಿಸಲಾಗಿದೆ. ಉಳಿದ 7 ಯೋಜನೆಗಳ ಟೆಂಡರ್ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸಿ ಕಾಮಗಾರಿ ಅನುಷ್ಠಾನ‌ ಮಾಡುವಂತೆ ಸೂಚಿಸಿದರು.

ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಶಾಲೆಗಳ ಕಟ್ಟಡ ದುರಸ್ತಿ, ಕೊಠಡಿ, ಪ್ರಯೋಗಾಲಯ ಸ್ಥಾಪನೆಗೆ ಕ್ರಮ ಕೈಗೊಳ್ಳಲು ಸೂಚಿಸಿದರು. ಅಂಗನವಾಡಿ ಕಟ್ಟಡ, ವಿದ್ಯಾರ್ಥಿ ನಿಲಯಗಳು ಮತ್ತಿತರ ಯೋಜನೆಗಳಿಗೆ ಒತ್ತು ನೀಡುವಂತೆ ಸೂಚಿಸಿದರು.

ಲಭ್ಯವಿರುವ ಅನುದಾನದಲ್ಲಿ ಈ ನಾಲ್ಕೂ ಜಿಲ್ಲೆಗಳು ಮಾದರಿ ಜಿಲ್ಲೆಗಳಾಗಿ ಅಭಿವೃದ್ಧಿ ಮಾಡುವಂತೆ ಅಭಿವೃದ್ಧಿ ಆಯುಕ್ತರಿಗೆ ಸೂಚಿಸಿದರು. ಮುಂದಿನ ಸಭೆಯಲ್ಲಿ ಸಂಬಂಧಿಸಿದ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸಹ ಭಾಗವಹಿಸುವಂತೆ ಸೂಚಿಸಿದರು. ಕಾಮಗಾರಿಯನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು ಹಾಗೂ ಕಾಮಗಾರಿಯ ಗುಣಮಟ್ಟವನ್ನು ಖಾತರಿಪಡಿಸಬೇಕು ಎಂದರು.

ಸಭೆಯಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ. ಶಾಲಿನಿ ರಜನೀಶ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕಚಂದ್ರ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X