ಹಿಂದೂಗಳಿಗೆ ಮಾನಸಿಕ ಹಿಂಸೆ; ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ: ಆರ್‌ ಅಶೋಕ್‌ ಎಚ್ಚರಿಕೆ

Date:

ಕಾಂಗ್ರೆಸ್‌ ಸರ್ಕಾರ ತಾಲಿಬಾನ್‌ ಸರ್ಕಾರವಾಗಿ ಬದಲಾಗಿದ್ದು, ಹಿಂದೂಗಳಿಗೆ ಮಾನಸಿಕ ಹಿಂಸೆ ನೀಡಲಾಗುತ್ತಿದೆ. ಇದರ ವಿರುದ್ಧ ಬಿಜೆಪಿ ಹೋರಾಟ ನಡೆಸಿ ಬುದ್ಧಿ ಕಲಿಸಲಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಎಚ್ಚರಿಕೆ ನೀಡಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಟಿಪ್ಪು ದೆವ್ವ‌ ಹಿಡಿದಿದೆ. ಇದಕ್ಕಾಗಿಯೇ ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆಯಾದರೂ ಕಾಂಗ್ರೆಸ್‌ ಸರ್ಕಾರ, ಕಾರ್ಯಕರ್ತರ ವಿರುದ್ಧವೇ ಪ್ರಕರಣ ದಾಖಲಿಸಿದೆ. ಪಾಕಿಸ್ತಾನದ ಕುನ್ನಿಗಳು ಎಂದು ಹೇಳಿದ್ದಾಗಿ ಪೊಲೀಸರು ಹೇಳಿದ್ದಾರೆ. ಆದರೆ ಇದಕ್ಕೆ ಯಾವುದೇ ದಾಖಲೆ ಇಲ್ಲ.‌ ಬಿಜೆಪಿ ಕಾರ್ಯಕರ್ತರು ಭಾರತ್‌ ಮಾತಾ ಕೀ ಜೈ ಎಂದಿದ್ದರು. ಆದರೂ ಮುಸ್ಲಿಮರನ್ನು ರಕ್ಷಣೆ ಮಾಡಿ ಹಿಂದೂಗಳಿಗೆ ಮಾನಸಿಕ ಹಿಂಸೆ ನೀಡಲಾಗುತ್ತಿದೆ” ಎಂದು ಆರೋಪಿಸಿದರು.

“ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಜನರು ಬುದ್ಧಿ ಕಲಿಸಿದ್ದಾರೆ. ಅದೇ ರೀತಿ ಮತ್ತೆ ಬುದ್ಧಿ ಕಲಿಸಲು ಬಿಜೆಪಿಯಿಂದ ದೊಡ್ಡ ಹೋರಾಟ ಮಾಡಲಾಗುವುದು. ಮತಕ್ಕಾಗಿ ಅಲ್ಪಸಂಖ್ಯಾತರನ್ನು ಓಲೈಕೆ ಮಾಡಲಾಗುತ್ತಿದೆ” ಎಂದು ದೂರಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸಮರ್ಪಕ ತನಿಖೆ ನಡೆಯಲಿ

“ಚಿತ್ರನಟ ದರ್ಶನ್‌ ಪೊಲೀಸರಿಗೆ ದೂರು ನೀಡಿ ರೇಣುಕಾಸ್ವಾಮಿಗೆ ತಿಳಿ ಹೇಳಬಹುದಿತ್ತು. ಅದು ಬಿಟ್ಟು ಕಾನೂನು ಕೈಗೆ ತೆಗೆದುಕೊಂಡು ಕೊಂದಿದ್ದರೆ ಅದು ದೊಡ್ಡ ತಪ್ಪು. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಈ ಘಟನೆಯನ್ನು ನಾನು ಖಂಡಿಸುತ್ತೇನೆ. ಹಾಗೆಯೇ ಪೊಲೀಸರು ಸೂಕ್ತವಾಗಿ ತನಿಖೆ ಮಾಡಬೇಕೆಂದು ಆಗ್ರಹಿಸುತ್ತೇನೆ” ಎಂದರು.

‌ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೊಡುವ ಸ್ಥಾನದಲ್ಲಿರುವವರು ಒಳ್ಳೆಯದನ್ನೇ ಕೊಡಬೇಕು ಎಂದು ರಾಜ್ ಹೇಳಿದ್ದು ಯಾರಿಗೆ?

“ರಾಜ್ಯದಲ್ಲಿ ಅಪರಾಧಿ ಚಟುವಟಿಕೆ ಹೆಚ್ಚಿದೆ. ಚನ್ನಗಿರಿಯಲ್ಲಿ ಪೊಲೀಸ್‌ ಠಾಣೆಗೆ ಬೆಂಕಿ ಹಾಕಲಾಗಿದೆ. ಪೊಲೀಸರಿಗೆ ಕಪಾಳ ಮೋಕ್ಷವಾಗಿದೆ. ಕಾನೂನು ಪೊಲೀಸರ ಹಿಡಿತದಲ್ಲೇ ಇಲ್ಲ. ಆದ್ದರಿಂದ ಪೊಲೀಸ್‌ ಠಾಣೆಗೆ ಶಾಮಿಯಾನ ಹಾಕಿ ಮುಚ್ಚುಮರೆ ಮಾಡುತ್ತಿದ್ದಾರೆ. ನಾವು ಕರ್ನಾಟಕದಲ್ಲಿದ್ದೇವೆಯೇ ಹೊರತು ಜಮ್ಮು ಕಾಶ್ಮೀರದಲ್ಲಿಲ್ಲ. ಇದನ್ನು ಟಿವಿ ಮಾಧ್ಯಮಗಳು ಚಿತ್ರೀಕರಣ ಮಾಡದಂತೆ ಕ್ರಮ ವಹಿಸುವುದು ಸರಿಯಲ್ಲ” ಎಂದು ಹೇಳಿದರು.

“ಚಲನಚಿತ್ರ ವಾಣಿಜ್ಯ ಮಂಡಳಿಯವರು ಕೂಡ ಈ ಕುರಿತು ನಿರ್ಧಾರ ತೆಗೆದುಕೊಳ್ಳಬೇಕು. ತನಿಖೆ ಸರಿಯಾಗಿ ನಡೆದು ಸತ್ಯಾಂಶ ಹೊರಬರಲಿ. ಈ ಪ್ರಕರಣದಲ್ಲಿ ಮೃತನಾದ ವ್ಯಕ್ತಿ ಯಾವುದೇ ಅಪರಾಧಿ ಹಿನ್ನೆಲೆ ಹೊಂದಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಎಷ್ಟೋ ಸಂದೇಶಗಳು ಬರುತ್ತವೆ. ಅದಕ್ಕಾಗಿ ಕೊಲೆ ಮಾಡಲು ಹೋಗಬಾರದು. ಇಂತಹ ಕ್ಷುಲ್ಲಕ ವಿಚಾರಕ್ಕೆ ಕೊಲೆ ಮಾಡಿರುವುದು ಇಡೀ ಚಿತ್ರೋದ್ಯಮಕ್ಕೆ ಕಳಂಕವಾಗಿದೆ. ಸರ್ಕಾರ ಮಾನವೀಯತೆ ದೃಷ್ಟಿಯಿಂದ ಮೃತ ವ್ಯಕ್ತಿಯ ಕುಟುಂಬಕ್ಕೆ ಆರ್ಥಿಕ ನೆರವು ನೀಡಬೇಕು” ಎಂದರು.

ಮಕ್ಕಳಿಗೆ ಪುಸ್ತಕ ಇಲ್ಲ

“ಶಿಕ್ಷಣ ಇಲಾಖೆ ಪಠ್ಯಪುಸ್ತಕಗಳನ್ನು ಸರಿಯಾದ ಸಮಯಕ್ಕೆ ಕೊಡದೆ ಪೋಷಕರು ಹಾಗೂ ವಿದ್ಯಾರ್ಥಿಗಳನ್ನು ಗೊಂದಲದಲ್ಲಿಟ್ಟಿದೆ. ಸರ್ಕಾರಿ ಶಾಲೆಗೆ ಮಕ್ಕಳು ಬರುವುದೇ ಕಡಿಮೆಯಾಗಿರುವಾಗ ಇಂತಹ ಸಮಸ್ಯೆ ಉಂಟಾಗಿದೆ. ಒಂದು ಕಡೆ ಗ್ಯಾರಂಟಿಗಳನ್ನು ನೀಡಿ, ಮತ್ತೊಂದು ಕಡೆ ಪುಸ್ತಕಗಳನ್ನು ನೀಡಿಲ್ಲ. ಸರ್ಕಾರಿ ಖಜಾನೆ ಖಾಲಿಯಾಗಿದ್ದು, ಕಸಕ್ಕೂ ತೆರಿಗೆ ಹಾಕಲು ಮುಂದಾಗಿದ್ದಾರೆ. ಕರ್ನಾಟಕ ಮಾಡಲ್‌ ಯಾವುದು ಎಂದು ತಿಳಿಯಲು ಆರ್ಥಿಕ ಇಲಾಖೆಯ ಒಂದು ವರ್ಷದ ಪ್ರಗತಿ ಕಾರ್ಡ್‌ ಬಿಡುಗಡೆಗೊಳಿಸಲಿ” ಎಂದು ಆಗ್ರಹಿಸಿದರು.

ಬರ ಪರಿಹಾರ ನೀಡಿಲ್ಲ

“ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ಟೀಕೆ ಮಾಡಿದರ ಅಜ್ಞಾನ ಪ್ರದರ್ಶನ ಮಾಡುತ್ತಾರೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಾರೆ. ಆದರೆ ನವಲಗುಂದ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಎನ್‌.ಎಚ್‌.ಕೋನರೆಡ್ಡಿ ಅವರು ತಮ್ಮ ಕ್ಷೇತ್ರದಲ್ಲಿ ಇನ್ನೂ ಕೆಲವು ರೈತರಿಗೆ ಪರಿಹಾರ ವಿತರಣೆ ಮಾಡಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ” ಎಂದು ಆರ್‌.ಅಶೋಕ್ ದೂರಿದರು.

“ನನಗೆ ನಿಯಮ ಪ್ರಕಾರ ಸರ್ಕಾರಿ ನಿವಾಸ ನೀಡಲು ಸರ್ಕಾರ ಬಹಳ ತಡ ಮಾಡುತ್ತಿದೆ. ನಾನು ಡಿ.ಕೆ.ಶಿವಕುಮಾರ್‌ ಅವರ ಮನೆ ಕೇಳುತ್ತಿಲ್ಲ. ನಮ್ಮ ಸರ್ಕಾರ ಇದ್ದಾಗ ಕಾಂಗ್ರೆಸ್‌ ಜೊತೆಗೆ ಮಾದರಿಯಾಗಿ ನಡೆದುಕೊಂಡಿತ್ತು. ಅದೇ ರೀತಿ ಈಗಲೂ ಸರ್ಕಾರ ನಡೆದುಕೊಳ್ಳಬೇಕು. ಈ ಬಗ್ಗೆ ಮೂರು ಪತ್ರ ಬರೆದರೂ ಸ್ಪಂದಿಸಿಲ್ಲ. ನಿವಾಸ ಕೊಡದಿದ್ದರೂ ಜನಸೇವೆ ಮಾಡುವ ಶಕ್ತಿ ಇದೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ.ಕಾಮ್ ವರದಿ ಫಲಶೃತಿ | ಕೊನೆಗೂ ಶತಾಯುಷಿ ಅಜ್ಜಿಯ ಖಾತೆಗೆ ಜಮೆಯಾಯ್ತು ವೃದ್ದಾಪ್ಯ ವೇತನ

ಭಾಲ್ಕಿ ತಾಲೂಕಿನ ಕಪಲಾಪುರ ಗ್ರಾಮದ ಲಕ್ಷ್ಮೀಬಾಯಿ ಮಹಾಪುರೆ ಎಂಬ 110 ವರ್ಷದ...

ಬಾಲ್ಯವಿವಾಹ | ಕರ್ನಾಟಕಕ್ಕೆ 2ನೇ ಸ್ಥಾನ: ನಾಚಿಕೆಗೇಡಿನ ಸಂಗತಿ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕಳೆದ ಮೂರು ವರ್ಷಗಳಲ್ಲಿ ಭಾರತದಲ್ಲಿ ಸಾವಿರಾರು ಬಾಲ್ಯವಿವಾಹಗಳು ನಡೆದಿವೆ. ಅತಿ ಹೆಚ್ಚು...

ಉತ್ತರ ಪ್ರದೇಶ | 2027ರ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷ ಸೋಲುತ್ತದೆ: ಬಿಜೆಪಿ ಶಾಸಕನ ವಿಡಿಯೋ ವೈರಲ್

"2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷವು ಸೋಲು ಕಾಣಲಿದೆ,...

ಅಪ್ಪಟ ಕನ್ನಡತಿ ಅಪರ್ಣಾ | ಶುದ್ಧ, ಅಶುದ್ಧ ಅನ್ನೋದು ಭಾಷಾ ಭಯೋತ್ಪಾದನೆ

ನಿರೂಪಕಿ, ನಟಿ ಅಪರ್ಣಾ ಮೊನ್ನೆ ತೀರಿ ಹೋದಾಗ ಆಕೆಗೆ ಐವತ್ತೇಳರ ಹರೆಯ...