ರಾಜ್ಯದಲ್ಲಿ ಜಾರಿಯಲ್ಲಿದ್ದ ಮೂರು ಜ್ಯೋತಿ ಯೋಜನೆಗಳು ‘ಗೃಹ ಜ್ಯೋತಿ’ಯಲ್ಲಿ ವಿಲೀನ

Date:

ರಾಜ್ಯದಲ್ಲಿ ಹಿಂದೆ ಜಾರಿಯಲ್ಲಿದ್ದ ಮೂರು ಜ್ಯೋತಿ ಯೋಜನೆಗಳನ್ನು ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರವು ‘ಗೃಹಜ್ಯೋತಿ’ ಯೋಜನೆಯಲ್ಲಿ ವಿಲೀನ ಮಾಡಿದೆ. ಇದರೊಂದಿಗೆ 50 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಗೃಹಜ್ಯೋತಿಯ ಲಾಭ ಸಿಗಲಿದೆ.

- Advertisement -

ಕಾಂಗ್ರೆಸ್‌ ಚುನಾವಣೆಗೂ ಮೊದಲು ನೀಡಿದ್ದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಗೃಹಜ್ಯೋತಿ ಯೋಜನೆ ಅಡಿ ಮಾಸಿಕ ಪ್ರತಿ ಕುಟುಂಬಕ್ಕೆ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಜುಲೈ 1 ರಿಂದಲೇ ಈ ಯೋಜನೆ ಜಾರಿಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ರಾಜ್ಯದಲ್ಲಿ ಈಗಾಗಲೇ ಜಾರಿಯಲ್ಲಿರುವ ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಅಮೃತ ಜ್ಯೋತಿ ಯೋಜನೆಗಳ ಭವಿಷ್ಯವೇನು? ಇದರ ಫಲಾನುಭವಿಗಳಿಗೆ ಏನಾಗುತ್ತದೆ? ಎಂಬ ಗೊಂದಲ ಜನರನ್ನು ಕಾಡುತ್ತಿತ್ತು. ಈ ಸಂಬಂಧ ಇಂಧನ ಸಚಿವ ಕೆ ಜೆ ಜಾರ್ಜ್ ಹೊಸ ಮಾರ್ಗಸೂಚಿ ಹೊರಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಹಾಘಟಬಂಧನ್ | ಕಾಂಗ್ರೆಸ್‌ ಸರ್ಕಾರದಿಂದ ರಾಜ್ಯದಲ್ಲಿ ‘ಐಎಎಸ್ ಜೀತ ಪದ್ಧತಿ’ ಜಾರಿ: ಕುಮಾರಸ್ವಾಮಿ ಆರೋಪ

ಭಾಗ್ಯ ಜ್ಯೋತಿ ಕುಟುಂಬಕ್ಕೆ ಈವರೆಗೆ 40 ಯೂನಿಟ್ ಉಚಿತ ವಿದ್ಯುತ್‌ ನೀಡಲಾಗುತ್ತಿತ್ತು, ಈಗ ಅದನ್ನು 53 ಯೂನಿಟ್ ಹಾಗೂ ಶೇ. 10ರಷ್ಟು ಹೆಚ್ಚುವರಿ ವಿದ್ಯುತ್‌ ನೀಡುವುದಾಗಿ ಘೋಷಿಸಿದೆ. ಹಾಗೆಯೇ ಅಮೃತ ಜ್ಯೋತಿಗೆ 75 ಯೂನಿಟ್ ಉಚಿತ ವಿದ್ಯುತ್‌ ನೀಡಲಾಗುತ್ತಿತ್ತು. ಈಗ ಅದನ್ನು 75 ಯೂನಿಟ್ ಜೊತೆಗೆ ಶೇ. 10ರಷ್ಟು ಹೆಚ್ಚು ಮಾಡಲಾಗಿದೆ. ಈಗ ಎಲ್ಲರೂ ಗೃಹ ಜ್ಯೋತಿ ವ್ಯಾಪ್ತಿಗೆ ಬರುತ್ತಾರೆ ಅವರಿಗೆ ಹೆಚ್ಚುವರಿ ಯೂನಿಟ್ ಗಳನ್ನು ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...