ಲಡಾಖ್ ಸಂಘರ್ಷ: ಮಾತುಕತೆಗೂ ಮುನ್ನ ಬೇಡಿಕೆಗಳ ಹೊಸ ಕರಡು ಕೇಳಿದ ಕೇಂದ್ರ ಸರ್ಕಾರ

Date:

ಲಡಾಖ್ ನಾಯಕರೊಂದಿಗೆ ಮಾತುಕತೆಗೂ ಮುನ್ನ ಕೇಂದ್ರ ಗೃಹ ಸಚಿವಾಲಯವು ಲೇಹ್ ಅಪೆಕ್ಸ್ ಬಾಡಿ (LAB) ಮತ್ತು ಕಾರ್ಗಿಲ್ ಡೆಮಾಕ್ರಟಿಕ್ ಅಲೈಯನ್ಸ್ (KDA)ನಿಂದ ಬೇಡಿಕೆಗಳ ವಿವರವಾದ ಹೊಸ ಕರಡು ಸಲ್ಲಿಸುವಂತೆ ಕೋರಿದೆ.

- Advertisement -

ಈ ಬಗ್ಗೆ ಈದಿನ ಡಾಟ್‌ ಕಾಮ್‌ಗೆ ಪ್ರತಿಕ್ರಿಯಿಸಿದ ಕಾರ್ಗಿಲ್ ಡೆಮಾಕ್ರಟಿಕ್ ಅಲೈಯನ್ಸ್‌ನ ಹಿರಿಯ ನಾಯಕ ಸಜ್ಜಾದ್ ಕಾರ್ಗಿಲಿ, “ಕೇಂದ್ರ ಗೃಹ ಸಚಿವಾಲಯ ನಮ್ಮ ಬೇಡಿಕೆಗಳ ಹೊಸ ಕರಡನ್ನು ಕೇಳಿದೆ. ನಾವು ಹೊಸದಾಗಿ ಕರಡು ರಚಿಸಿ ನೀಡುತ್ತೇವೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ಲಡಾಖ್ ಗ್ರೌಂಡ್ ರಿಪೋರ್ಟ್ ಸರಣಿ-5 | ತೆರೆಮರೆಯ ನಾಯಕ ಸಜ್ಜಾದ್ ಕಾರ್ಗಿಲಿ: ಸಂದರ್ಶನ

“ಲೇಹ್ ಅಪೆಕ್ಸ್ ಬಾಡಿ ಮತ್ತು ಕಾರ್ಗಿಲ್ ಡೆಮಾಕ್ರಟಿಕ್ ಅಲೈಯನ್ಸ್ ಮೊದಲು ಪ್ರತ್ಯೇಕವಾಗಿ ಸಭೆ ನಡೆಸಿ ಬೇಡಿಕೆಗಳ ಹೊಸ ಕರಡನ್ನು ರಚಿಸಲಿದೆ. ಅದಾದ ಬಳಿಕ ಲೇಹ್, ಕಾರ್ಗಿಲ್ ನಾಯಕರುಗಳು ಜತೆಯಾಗಿ ಸಭೆ ನಡೆಸಿ ಚರ್ಚಿಸಿ ಬೇಡಿಕೆಗಳ ಒಂದೇ ಕರಡು ಪಟ್ಟಿಯನ್ನು ರಚಿಸಲಿದ್ದೇವೆ” ಎಂದು ಮಾಹಿತಿ ನೀಡಿದ್ದಾರೆ.

ಇನ್ನು ಹೊಸ ಕರಡು ಸಲ್ಲಿಸಲು ಕೇಂದ್ರ ಸಮಯ ಮಿತಿಯನ್ನು ನೀಡಿದೆಯೇ ಎಂಬ ಈದಿನ ಡಾಟ್‌ ಕಾಮ್ ವರದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಜ್ಜಾದ್ ಕಾರ್ಗಿಲಿ, “ನಾವು ಈ ವಾರದಲ್ಲಿ ಬೇಡಿಕೆಗಳ ಜಂಟಿ ಕರಡನ್ನು ಕೇಂದ್ರಕ್ಕೆ ಸಲ್ಲಿಸುವ ಸಾಧ್ಯತೆಯಿದೆ. ಕರಡನ್ನು ಸ್ವೀಕರಿಸಿದ ಕೆಲವೇ ದಿನಗಳಲ್ಲಿ ರಾಜ್ಯ ಸಚಿವ ನಿತ್ಯಾನಂದ ರೈ ಅಧ್ಯಕ್ಷತೆಯಲ್ಲಿ ನಡೆಯಲಿರುವ ಉನ್ನತ ಅಧಿಕಾರ ಸಮಿತಿ (HPC) ಸಭೆಗೆ ನಮ್ಮನ್ನು ಆಹ್ವಾನಿಸಬಹುದು” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಲಡಾಖ್ ಗ್ರೌಂಡ್ ರಿಪೋರ್ಟ್ ಸರಣಿ-6 | ಕಷ್ಟ ಕಾರ್ಪಣ್ಯಗಳಲ್ಲಿ ಬೆಂದ ಜನರ ಬೇಡಿಕೆ ಬೆಂಬಲಿಸಿದ ನಿಯೋಗ: ಬಿಜೆಪಿಗೆ ಬಿಸಿ ತಟ್ಟಿದ್ದೇಕೆ?

ಲಡಾಖ್‌ನ ಭೂಮಿ, ಸಂಸ್ಕೃತಿ ಮತ್ತು ಸಂಪನ್ಮೂಲಗಳ ರಕ್ಷಣೆಗಾಗಿ ಲಡಾಖ್‌ ಅನ್ನು ಆರನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡಬೇಕು, ಲಡಾಖ್‌ಗೆ ರಾಜ್ಯ ಸ್ಥಾನಮಾನ ನೀಡಬೇಕು, ಸ್ಥಳೀಯ ಉದ್ಯೋಗಕ್ಕಾಗಿ ಸಾರ್ವಜನಿಕ ಸೇವಾ ಆಯೋಗ(ಪಿಎಸ್‌ಎ) ರಚಿಸಬೇಕು, ಲೇಹ್ ಮತ್ತು ಕಾರ್ಗಿಲ್‌ಗೆ ತಲಾ ಒಂದು ಲೋಕಸಭೆ ಸ್ಥಾನ ನೀಡಬೇಕು ಎಂಬ ಒಟ್ಟು ಪ್ರಮುಖ ನಾಲ್ಕು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಲಡಾಖ್‌ನಲ್ಲಿ ಹಲವು ವರ್ಷಗಳಿಂದ ನಿರಂತರ ಪ್ರತಿಭಟನೆಗಳು ನಡೆಯುತ್ತಿದೆ. ಕೇಂದ್ರದೊಂದಿಗೆ ನಡೆದ ಹಲವು ಸುತ್ತುಗಳ ಮಾತುಕತೆ ವಿಫಲವಾಗಿದೆ.

ಸೆಪ್ಟೆಂಬರ್ 24ರಂದು ಲೇಹ್‌ನಲ್ಲಿ ಪ್ರತಿಭಟನೆ ನಡೆದ ಸ್ಥಳದ ಹೊರ ಭಾಗದಲ್ಲಿ ಹಿಂಸಾಚಾರ ನಡೆದಿದ್ದು, ಪೊಲೀಸರ ಗುಂಡಿನ ದಾಳಿಗೆ ನಾಲ್ವರು ಬಲಿಯಾಗಿದ್ದಾರೆ. 80ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಇದಾದ ಬಳಿಕ ಲಡಾಖ್ ನಾಯಕರು ಮತ್ತು ಕೇಂದ್ರದ ನಡುವಿನ ಮಾತುಕತೆ ಮುರಿದುಬಿದ್ದಿದೆ. ಗೃಹ ಸಚಿವಾಲಯ ಹಿಂಸಾಚಾರದ ಬಗ್ಗೆ ನ್ಯಾಯಾಂಗ ತನಿಖೆಯನ್ನು ಘೋಷಿಸಿದ ನಂತರ, ಮಾತುಕತೆ ಪುನರಾರಂಭಗೊಂಡಿದ್ದು, ಕೊನೆಯದಾಗಿ ಅಕ್ಟೋಬರ್ 22ರಂದು ಮಾತುಕತೆ ನಡೆದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

22 ನಿಮಿಷದ ಜಾಹೀರಾತು, 75 ಸಾವಿರ ದಂಡ! ಸಿನಿಪ್ಲೆಕ್ಸ್‌ ಕಿವಿಹಿಂಡಿದ ಗ್ರಾಹಕ ವೇದಿಕೆ

ಸಿನಿಮಾ ಶುರುವಾಗುವ ಮುನ್ನ 22 ನಿಮಿಷಗಳ ಕಾಲ ವಾಣಿಜ್ಯ ಜಾಹೀರಾತುಗಳು ಮತ್ತು...

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...