ಹಾಲಿನ ದರ ಏರಿಕೆ | ರೈತರ ನೆಪದಲ್ಲಿ ಸರಕಾರ ಬಿಸ್ನೆಸ್ ಮಾಡುತ್ತಿದೆ: ಹೆಚ್‌ ಡಿ ಕುಮಾರಸ್ವಾಮಿ ಆರೋಪ

Date:

ಹಾಲು ಮತ್ತು ವಿದ್ಯುತ್ ದರ ಏರಿಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, “ಕರ್ನಾಟಕ ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಎರಡು ವರ್ಷಗಳ ಸರಣಿ ಸುಲಿಗೆ! ಯುಗಾದಿ ಹಬ್ಬಕ್ಕೆ ಬೆಲೆ ‘ಏರಿಕೆ ಹೋಳಿಗೆ’ ಎಂದು ಟಾಂಗ್ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

“ರಾಜ್ಯದಲ್ಲಿ ಹಾಲಿನ ಹಾಲಾಹಲ ಶುರುವಾಗಿದೆ. 3ನೇ ಸಲ ದರ ಏರಿಕೆ ಮಾಡಲಾಗಿದೆ. 2023 ಆಗಸ್ಟ್ ತಿಂಗಳಲ್ಲಿ ₹3, 2024 ಜೂನ್ ತಿಂಗಳಿನಲ್ಲಿ ₹2 ಹಾಗೂ 2025 ಮಾರ್ಚ್, ಅಂದರೆ ಈಗ ₹4 ಏರಿಕೆ ಮಾಡಲಾಗಿದೆ. ಹಾಗೆಯೇ ವಿದ್ಯುತ್ ಕೂಡ ದುಬಾರಿ ಆಗಿದೆ. ಜನರಿಗೆ ವಿದ್ಯುತ್ ಶಾಕ್ ನೀಡಿದ್ದಾರೆ. ಈಗ ಎಲ್ಲರಿಗೂ ಪ್ರತೀ ಯೂನಿಟ್ಟಿಗೆ ₹36 ಪೈಸೆ ಬರೆ. ಮಹಾದೇವಪ್ಪನಿಗೂ ಶಾಕು! ಕಾಕಾ ಪಾಟೀಲಗೂ ಶಾಕು” ಎಂದು ಲೇವಡಿ ಮಾಡಿದ್ದಾರೆ.

“ಒಂದು ಕೈಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ಕಿತ್ತುಕೊಳ್ಳುವ ದಶಾವತಾರಿ ರಾವಣರೂಪಿ ಸುಲಿಗೆ ಪ್ರವೃತ್ತಿ ಕನ್ನಡಿಗರ ಪಾಲಿಗೆ ಮರಣಶಾಸನ. ಹಾಲು, ವಿದ್ಯುತ್ ದರ ಏರಿಕೆ ಖಂಡನೀಯ. ನೆಪ ರೈತರದು, ಲಾಭ ಕೆಎಂಎಫ್ ಗೆ! ಕಂಪನಿ ಆಡಳಿತ ನಡೆಸುತ್ತಿದೆ ಸರಕಾರ! ಮೊಸರು ದರ ₹4 ಏರಿಕೆ ಮಾಡಿದ್ದೀರಿ. ಈ ಹಣ ಏನು ಮಾಡುತ್ತೀರಿ? ರೈತರಿಗೆ ವರ್ಗಾಯಿಸುತ್ತೀರೋ ಅಥವಾ ಕೆಎಂಎಫ್ ತಾನೇ ಉಳಿಸಿಕೊಳ್ಳಲಿದೆಯೋ?” ಸ್ಪಷ್ಟಪಡಿಸಿ ಎಂದು ಸರ್ಕಾರವನ್ನು ಒತ್ತಾಯ ಮಾಡಿದ್ದಾರೆ.

“ಇದು ಪ್ರಜಾಪ್ರಭುತ್ವ ಸರಕಾರವಲ್ಲ. ದರ ಏರಿಕೆ, ತೆರಿಗೆ ಹೇರಿಕೆ ಸರಕಾರ! ಇದು ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ! ಸುಲಿಗೆಯಷ್ಟೇ ನಿತ್ಯಕೃತ್ಯ. ಕರ್ನಾಟಕ ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿದೆ. ಈಸ್ಟ್ ಇಂಡಿಯಾ ಕಾಂಗ್ರೆಸ್” ಎಂದು ಕಿಡಿ ಕಾರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

OBC ಮೀಸಲಾತಿಗೆ ಮತಾಂತರದ ಬೇಲಿ: ಸುಪ್ರೀಂ ಹೊಸ ಆದೇಶದಲ್ಲಿ ಸಾಂವಿಧಾನಿಕ ವಿರೋಧಾಭಾಸ!

ಧರ್ಮ ಬದಲಾದರೆ ಸಾಮಾಜಿಕ ಹಿಂದುಳಿದಿರುವಿಕೆಯೂ ಅಳಿಸಿಹೋಗುತ್ತದೆಯೇ? ಮಂಡಲ್ ಆಯೋಗದ 11 ಮಾನದಂಡಗಳಲ್ಲಿ...

ಅ.26ರಂದು ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಸಭೆ: ಸಿಎಂ ಡಿ ಕೆ ಶಿವಕುಮಾರ್

ಇದೇ ಅಕ್ಟೋಬರ್ 26 ರಂದು ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ...

ರಾಜ್ಯದಲ್ಲಿ ಮಧ್ಯಾಹ್ನವೇ ಮಳೆ ಅಬ್ಬರ; 13 ಜಿಲ್ಲೆಗಳಲ್ಲಿ ಇನ್ನೂ 4 ದಿನ ಭರ್ಜರಿ ಮಳೆ: ಹವಾಮಾನ ಇಲಾಖೆ

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಿಂಗಾರು ಮಳೆ...

‘ಟಿಪ್ಪು ನಿಜ ಕನಸು’ಗಳಿಂದ ‘ಗಾಂಧೀ ಹತ್ಯೆಯ ಸತ್ಯ’ದವರೆಗೆ: ಇತಿಹಾಸ ತಿರುಚುವಿಕೆಯ ಸುತ್ತ ಮತ್ತೆ ವಿವಾದ

ನಾಟಕಕಾರ, ಬರಹಗಾರ ಅಡ್ಡಂಡ ಕಾರ್ಯಪ್ಪ ಹಿಂದಿನಿಂದಲೂ ಒಂದಲ್ಲೊಂದು ಕಾರಣಕ್ಕೆ ಸಾರ್ವಜನಿಕ ಚರ್ಚೆಯ...