ಸಿರಿಧಾನ್ಯ ಉತ್ಪಾದನೆ | 4ನೇ ಸ್ಥಾನದಿಂದ ಮೊದಲ ಸ್ಥಾನಕ್ಕೆ ಕೊಂಡೊಯ್ಯಲು ಸಂಕಲ್ಪ: ಕೃಷಿ ಸಚಿವ ಚಲುವರಾಯಸ್ವಾಮಿ

Date:

Advertisements

“ಸ್ಥಳೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಿರಿಧಾನ್ಯಗಳ ಬೇಡಿಕೆ ಹಾಗೂ ಬಳಕೆಯನ್ನು ಹೆಚ್ಚಿಸಿ ಬೆಳೆಗಾರರಿಗೆ ಹಾಗೂ ಗ್ರಾಹಕರಿಗೆ ಅನುಕೂಲ ಮಾಡುವುದೇ ಈ ಸಿರಿಧಾನ್ಯ ರಫ್ತಿನ ಮೂಲ ಉದ್ದೇಶ” ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.

ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳದ ಪೂರ್ವಭಾವಿಯಾಗಿ ಸಿರಿಧಾನ್ಯ ಮತ್ತು ಅದರ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆ ಹಾಗು ರಫ್ತುದಾರರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಸಿರಿಧಾನ್ಯವನ್ನು ಇಡೀ ವಿಶ್ವವೇ ಮೆಚ್ಚುವಂತೆ ಮಾಡಿದೆ” ಎಂದರು.

“ರಾಜ್ಯದಲ್ಲಿ ವಿಶೇಷವಾಗಿ ಚಿತ್ರದುರ್ಗ, ಹಾವೇರಿ, ಬಳ್ಳಾರಿ, ಕೊಪ್ಪಳ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಂದ ಬೆಳೆದ ಸಿರಿಧಾನ್ಯಗಳನ್ನು ರಫ್ತು ಮಾಡಲಾಗುತ್ತಿದೆ. ಸಿರಿಧಾನ್ಯಗಳ ಉತ್ಪಾದನೆಯಲ್ಲಿ ದೇಶದಲ್ಲಿ ನಾಲ್ಕನೇ ಸ್ಥಾನದಲ್ಲಿರುವ ರಾಜ್ಯವನ್ನು ಪ್ರಥಮ ಸ್ಥಾನಕ್ಕೆ ತರಲು ಸರಕಾರ ಸಂಕಲ್ಪ ಮಾಡಿದೆ. ಅದಕ್ಕೆ ಸಂಪೂರ್ಣ ಸಹಕಾರ ನೀಡಲಾಗುವುದು” ಎಂದರು.

Advertisements

krishi

“ಸಿರಿಧಾನ್ಯ ಬೇಡಿಕೆಯಲ್ಲಿರುವ ರಾಗಿ, ಸಾಮೆ, ಉದ್ದು, ನವಣೆ ಮುಂತಾದ ಸಿರಿಧಾನ್ಯಗಳನ್ನು ಮೊದಲು ಯಥೇಚ್ಛವಾಗಿ ಬೆಳೆಯಲಾಗುತ್ತಿತ್ತು. ಇಂದಿನ ಆಧುನಿಕ ಜೀವನದಲ್ಲಿ ಜನ ಸಾವಯವ ಹಾಗೂ ಸಿರಿಧಾನ್ಯಗಳ ಉತ್ಪನ್ನಗಳಿಗೆ ಹೆಚ್ಚು ಒತ್ತು ನೀಡುತ್ತಿದ್ದಾರೆ” ಎಂದು ಸಚಿವರು ತಿಳಿಸಿದರು.

“ಸಾವಯವ ಹಾಗೂ ಸಿರಿಧಾನ್ಯಗಳ ಬಳಕೆಯು ಆರೋಗ್ಯಕ್ಕೆ ಹೆಚ್ಚು ಉಪಯುಕ್ತವಾಗಿದ್ದು ಇವುಗಳ ಉತ್ಪಾದನೆಯನ್ನು ಹೆಚ್ಚಿಸಲು ಹೆಚ್ಚು ಒತ್ತು ನೀಡಬೇಕಾಗಿದೆ. ಸಿರಿಧಾನ್ಯಗಳ ಬಳಕೆ ಹಾಗೂ ಉತ್ಪಾದನೆ ಕುರಿತಂತೆ ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಕಾರ್ಯವಾಗಬೇಕಾಗಿದೆ. ಸಾವಯವ ಕೃಷಿ ಪದ್ಧತಿಯಲ್ಲಿ ಬೆಳೆದ ಉತ್ಪನ್ನಗಳಿಗೆ ಜಗತ್ತಿನಾದ್ಯಂತ ಹೆಚ್ಚಿನ ಬೇಡಿಕೆಯಿದೆ. ಸಿರಿಧಾನ್ಯ ಹಾಗೂ ಸಾವಯವ ಕೃಷಿ ಪದ್ಧತಿ, ಮಾರುಕಟ್ಟೆ ವ್ಯವಸ್ಥೆ ಬಗ್ಗೆ ಮಾಹಿತಿ ಪಡೆಯಲು ಮೇಳ ಸಹಕಾರಿಯಾಗಲಿದೆ” ಎಂದು ಸಚಿವ ಎನ್. ಚಲುವರಾಯಸ್ವಾಮಿ ಅಭಿಪ್ರಾಯಿಸಿದರು.

ಇದನ್ನು ಓದಿದ್ದೀರಾ? ಜನವರಿ 5 ರಿಂದ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ

“ರೈತರು ತಮ್ಮ ಕೃಷಿ ಪದ್ಧತಿಯಲ್ಲಿ ಸಾವಯವ ಹಾಗೂ ಸಿರಿಧಾನ್ಯಗಳ ಉತ್ಪಾದನೆಗೆ ಹೆಚ್ಚು ಒತ್ತು ನೀಡಬೇಕು. ಈ ಕುರಿತು ಇಲಾಖೆಯಿಂದ ರೈತರಿಗೆ ಹೆಚ್ಚಿನ ಪ್ರೋತ್ಸಾಹ ಹಾಗೂ ತಿಳಿವಳಿಕೆ ನೀಡಲಾಗುವುದು” ಎಂದು ತಿಳಿಸಿದರು.

ಸಿರಿಧಾನ್ಯ ಮತ್ತು ಸಾವಯವ ಆಹಾರ ಪದ್ಧತಿಗಳ ಬಗ್ಗೆ ಕಾಲೇಜಿನ ವಿದ್ಯಾರ್ಥಿಗಳಲ್ಲೂ ಅರಿವು ಮೂಡಿರುವುದು ಸಂತೋಷದ ವಿಚಾರ. 20ನೇ ವಯಸ್ಸಿನಿಂದಲೇ ಸಿರಿ ಧಾನ್ಯವನ್ನು ಉಪಯೋಗಿಸುವುದರಿಂದ ಆರೋಗ್ಯದ ಬಗ್ಗೆ ಇನ್ನು ಹೆಚ್ಚಿನ ಕಾಳಜಿ ವಹಿಸಬಹುದು ಎಂದು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದರು.

ಕೃಷಿ ಇಲಾಖೆಯ ಕಾರ್ಯದರ್ಶಿ ಅನ್ಬುಕುಮಾರ್, ಆಯುಕ್ತ ವೈ.ಎಸ್.ಪಾಟೀಲ್, ಆಹಾರ ಸಂಸ್ಕರಣೆ ಮತ್ತು ಕಟಾವು ತಂತ್ರಜ್ಞಾನದ ವಿಶೇಷ ಕಾರ್ಯದರ್ಶಿ ರೋಹಿಣಿ ಸಿಂಧೂರಿ, ನಿರ್ದೇಶಕ ಡಾ.ಜಿ.ಟಿ.ಪುತ್ರ, ಜಲಾನಯನ ಅಭಿವೃದ್ಧಿ ಇಲಾಖೆ ಆಯುಕ್ತ ಗಿರೀಶ್, ನಿರ್ದೇಶಕ ಶ್ರೀನಿವಾಸ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X