ಗಣಿ ಪ್ರಕರಣ | 420ಕುಮಾರ ಅವರೇ, ನಿಮ್ಮ ಸಾಚಾತನದ ಮುಖವಾಡ ಕಳಚಿದೆ: ಕಾಂಗ್ರೆಸ್‌ ಕಿಡಿ

Date:

“ಇದ್ದಿದ್ದು ಇದ್ದಂಗೆ ಹೇಳಿದ್ರೆ ಎದ್ದು ಬಂದು ಎದೆ ಮೇಲೆ ಒದ್ದನಂತೆ” ಎನ್ನುವ ಆಡು ಮಾತಿನಂತೆ 420ಕುಮಾರ ಅವರು ತಮ್ಮ ಹುಳುಕು ಹೊರಬಿದ್ದಾಗ ಎಗರಿ ಬೀಳುತ್ತಿದ್ದಾರೆ ಎಂದು ಕಾಂಗ್ರೆಸ್‌ ಲೇವಡಿ ಮಾಡಿದೆ.

- Advertisement -

ಕುಮಾರಸ್ವಾಮಿ ಮಾತಿನ ವಿಡಿಯೋ ತುಣಕನ್ನು ಎಕ್ಸ್‌ ತಾಣದಲ್ಲಿ ಹಂಚಿಕೊಂಡು ಪೋಸ್ಟ್‌ ಮಾಡಿರುವ ಕಾಂಗ್ರೆಸ್‌, “ಎಚ್‌ ಡಿ ಕುಮಾರಸ್ವಾಮಿ ಅವರೇ, ಸಾಯಿ ವೆಂಕಟೇಶ್ವರ ಕಂಪೆನಿಗೆ ಕಾನೂನುಬಾಹಿರವಾಗಿ ತಾವು ಗಣಿ ಗುತ್ತಿಗೆ ನೀಡಿದ್ದು ಏಕೆ” ಎಂದು ಪ್ರಶ್ನಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ನಿಮ್ಮ ಈ ಹಗರಣದ ಬಗ್ಗೆ ನಿಮ್ಮ ದೋಸ್ತಿ ನಾಯಕರಾದ ಯಡಿಯೂರಪ್ಪನವರೇ ಸದನದಲ್ಲಿ ಆರೋಪ ಮಾಡಿದ್ದಾರೆ, ಅದಕ್ಕೆ ತಮ್ಮ ಉತ್ತರವೇನು? ಲೋಕಾಯುಕ್ತದ ಪತ್ರ ಹೇಗೆ ಹೊರಬಿತ್ತು ಎಂದು ಕೇಳುವ ತಮ್ಮ ಡೋಂಗಿ ಪಾರದರ್ಶಕತೆ ಬಯಲಾಗಿದೆಯಲ್ಲವೇ?” ಎಂದು ಕುಟುಕಿದೆ.

“ಟೆಂಡರ್ ಅಧಿಕಾರಿಗಳು ಕೊಟ್ಟಿದ್ದು, ನಾನು ಕೇವಲ ರೆಕಮೆಂಡ್ ಮಾಡಿದ್ದು ಎನ್ನುತ್ತಿದ್ದೀರಿ, ಮುಖ್ಯಮಂತ್ರಿ ರೆಕಮೆಂಡ್ ಮಾಡಿದ್ದಕ್ಕೆ ಅಧಿಕಾರಿಗಳು ಮಣೆ ಹಾಕಿದ್ದಾರೆ ಎನ್ನುವುದನ್ನು ಏಕೆ ಮರೆಮಾಚುವಿರಿ” ಎಂದು ಕಾಂಗ್ರೆಸ್‌ ಕೇಳಿದೆ.

“ದಶಕದ ಹಿಂದಿನ ಹಗರಣದ ವಿಷಯ ಈಗ ಕೆದಕಿದ್ದು ತಪ್ಪು ಎಂಬಂತೆ ಮಾತಾಡುತ್ತಿದ್ದೀರಿ, ದಶಕದ ಹಿಂದೆ ಸಿದ್ದರಾಮಯ್ಯನವರ ಕುಟುಂಬಕ್ಕೆ ಬಿಜೆಪಿ ಸರ್ಕಾರವೇ ಇದ್ದಾಗ ಮಂಜೂರಾದ ಸೈಟ್ ಗಳ ಬಗ್ಗೆ ತಾವು ಈಗ ಕೆದಕಿದ್ದೀರಿ” ಎಂದು ಪ್ರಶ್ನಿಸಿದೆ.

“ಈ ಹಿಂದೆ ಇದೇ ನಿಮ್ಮ ರೆಕಮೆಂಡೇಷನ್ ಸಹಿ ನನ್ನದಲ್ಲ ಎಂದು ಸುಳ್ಳು ಹೇಳಿದ್ದಿರಿ ಅಲ್ಲವೇ? ಮಾನ್ಯ 420ಕುಮಾರ ಅವರೇ, ನಿಮ್ಮ ಸಾಚಾತನದ ಮುಖವಾಡ ನಾಡಿನ ಜನರ ಮುಂದೆ ಕಳಚಿದೆ, ರಾಜೀನಾಮೆ ಯಾವಾಗ ಕೊಡುವಿರಿ ಎಂಬುದನ್ನು ಮೊದಲು ಸ್ಪಷ್ಟಪಡಿಸಿ” ಎಂದು ಕಾಂಗ್ರೆಸ್ ಪ್ರಶ್ನೆಯನ್ನು ಮುಂದಿಟ್ಟಿದೆ.

ರಾಜ್ಯಪಾಲರು ಯಾವುದೇ ಕ್ರಮ ಕೈಗೊಂಡಿಲ್ಲ

“ಸಿದ್ದರಾಮಯ್ಯನವರ ವಿರುದ್ಧ ಬಿಜೆಪಿಗರು ಮಾಡುತ್ತಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ, ಸೈಟ್ ಪಡೆಯುವ ಪ್ರಕ್ರಿಯೆಯಲ್ಲಿ ಸಿದ್ದರಾಮಯ್ಯನವರು ಹಸ್ತಕ್ಷೇಪ ಮಾಡಿದ್ದಕ್ಕಾಗಲಿ, ಪ್ರಭಾವ ಬೀರಿದ್ದಕ್ಕಾಗಲಿ ಯಾವುದೇ ದಾಖಲೆಗಳಿಲ್ಲ. ಮೂಡ ನಿವೇಶನ ಹಂಚಿಕೆಯ ಸಂದರ್ಭದಲ್ಲಿ ಅಧಿಕಾರದಲ್ಲಿದ್ದಿದ್ದು ಬಿಜೆಪಿಯೇ ಹೊರತು ಕಾಂಗ್ರೆಸ್ ಅಲ್ಲ. ಒಂದು ಖಾಸಗಿ ದೂರಿನ ಆಧಾರದಲ್ಲಿ ತುರಾತುರಿಯಲ್ಲಿ ಸಿದ್ದರಾಮಯ್ಯನವರಿಗೆ ನೋಟಿಸ್ ನೀಡಿದ ರಾಜ್ಯಪಾಲರು ಕುಮಾರಸ್ವಾಮಿಯವರ ವಿರುದ್ಧದ ದೂರಿಗೆ ಸ್ಪಂದನೆ ಇಲ್ಲದೆ ಕುಳಿತಿರುವುದೇಕೆ? ಸಂವಿಧಾನತ್ಮಕವಾಗಿರುವ ಲೋಕಾಯುಕ್ತ ಸಂಸ್ಥೆಯೇ ತನಿಖೆಗೆ ಅನುಮತಿ ಕೇಳಿರುವಾಗ ರಾಜ್ಯಪಾಲರು ಯಾವುದೇ ಕ್ರಮ ವಹಿಸದೆ 9 ತಿಂಗಳಿಂದ ಕಡತವನ್ನು ಮುಚ್ಚಿಟ್ಟು ಕುಳಿತಿರುವುದೇಕೆ?” ಎಂದು ಹರಿಹಾಯ್ದಿದೆ.

“ಎಚ್‌ ಡಿ ಕುಮಾರಸ್ವಾಮಿ ಅವರೇ ಡಿನೋಟಿಫಿಕೇಶನ್ ಹಗರಣ, ಗಣಿ ಹಗರಣ ಸೇರಿದಂತೆ ನಿಮ್ಮ ವಿರುದ್ಧ ಹಲವು ಪ್ರಕರಣಗಳಿವೆ, ಸೆಕ್ಷನ್ 420 ಅಡಿಯಲ್ಲೂ ದೂರು ದಾಖಲಾಗಿದೆ. ಹೀಗಿದ್ದೂ ಯಾವ ನೈತಿಕತೆಯಲ್ಲಿ ಕಾಂಗ್ರೆಸ್ ಸರ್ಕಾರದ ಬಗ್ಗೆ ಮಾತಾಡುವಿರಿ ಮಿಸ್ಟರ್ 420ಸ್ವಾಮಿಗಳೇ?” ಎಂದು ವ್ಯಂಗ್ಯ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರ‍್ಯಾಂಕ್ ಸಾಮರ್ಥ್ಯದ ಮಾನದಂಡವಲ್ಲ: ಮಕ್ಕಳ ವಿಕಾಸಕ್ಕೆ ಒತ್ತಡ ರಹಿತ ಕಲಿಕೆಯ ವಾತಾವರಣ ಅಗತ್ಯ

ಶಿಕ್ಷಣವೆಂದರೆ ಕೇವಲ ಅಂಕ ಗಳಿಸುವುದು, ರ‍್ಯಾಂಕ್ ಪಡೆಯುವುದು ಅಥವಾ ಪರೀಕ್ಷೆಯಲ್ಲಿ ಶೇ.90ಕ್ಕಿಂತ...

ಪಶ್ಚಿಮ ಬಂಗಾಳ | ದುರ್ಗಾ ಪೂಜೆ ಪಂಡಾಲ್‌ನಲ್ಲಿ ಮಮತಾ ಮೇಲೆ ದಾಳಿ; ಟಿಎಂಸಿ ಮುಖಂಡರೇ ಗುರಿಯೆ?

ಈಗಾಗಲೇ ಸರಣಿ ದಾಳಿಯು ಟಿಎಂಸಿ ಕಾರ್ಯಕರ್ತರಲ್ಲಿ ಆತಂಕ ಸೃಷ್ಟಿಸಿದೆ. ಹೀಗಿರುವಾಗ ನಿನ್ನೆಯಷ್ಟೇ...

ದಿನಸಿ ಬೆಲೆ ಏರಿಕೆ ಬರೆ; ಗ್ರಾಮೀಣ ಕುಟುಂಬಗಳ ಬಜೆಟ್‌ಗೆ ಕತ್ತರಿ

ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲದ ಬೆಲೆ ಏರಿಕೆಯ...

KPSC ಅಕ್ರಮ | ಫೋನ್ ಟ್ಯಾಪಿಂಗ್ ಆರೋಪದ ನೆರಳು; ಹೈಕೋರ್ಟ್ ಎಸ್‌ಐಟಿ ತಂಡಕ್ಕೆ ಸುಪ್ರೀಂ ಬ್ರೇಕ್

ಕರ್ನಾಟಕ ಲೋಕಸೇವಾ ಆಯೋಗದ (KPSC) ಗಂಭೀರ ಅಕ್ರಮ ಮತ್ತು ಭ್ರಷ್ಟಾಚಾರ ಪ್ರಕರಣಗಳ...