ಬಾಣಂತಿಯರ ಸಾವು | ರಾಜೀನಾಮೆಗೂ ಸಿದ್ಧ ಎಂದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್

Date:

ಬಳ್ಳಾರಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆ ಒಳಗಾಗಿದ್ದ ಐವರು ತಾಯಂದಿರು ಪ್ರಸವಾ ನಂತರ ಸಾವನ್ನಪ್ಪಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಸೌಲಭ್ಯ, ಆರೈಕೆ ದೊರೆಯುತ್ತಿಲ್ಲವೆಂಬ ಆರೋಪಗಳು ಮತ್ತೆ ಮುನ್ನೆಲೆಗೆ ಬಂದಿವೆ. ಪ್ರಕರಣ ಸಂಬಂಧ ಔಷಧ ನಿಯಂತ್ರಕ ಅಧಿಕಾರಿಯನ್ನು ಸರ್ಕಾರ ಅಮಾನತು ಮಾಡಿದೆ. ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್, ‘ತಾಯಂದಿರ ಸಾವು ಪ್ರಕರಣವನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಸಮಸ್ಯೆಗೆ ನನ್ನ ರಾಜೀನಾಮೆ ಪರಿಹಾರವೆಂದರೆ, ಅದಕ್ಕೂ ಸಿದ್ದನಿದ್ದೇನೆ’ ಎಂದಿದ್ದಾರೆ.

- Advertisement -

ನವೆಂಬರ್ 9ರಂದು ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ 7 ಮಂದಿ ಗರ್ಭಿಣಿಯರಿಗೆ ಸಿಜೇರಿಯನ್ ಮೂಲಕ ಹೆರಿಗೆ ಮಾಡಿಸಲಾಗಿತ್ತು. ಅವರಲ್ಲಿ, ಇಬ್ಬರು ನವೆಂಬರ್ 10ರಂದು ಸಾವನ್ನಪ್ಪಿದ್ದಾರೆ. ಬಳಿಕ, ಉಳಿದ 5 ಮಂದಿ ಬಾಣಂತಿಯರನ್ನು ವಿಮ್ಸ್‌ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದಾಗ್ಯೂ, ಓರ್ವ ಬಾಣಂತಿ ಮೂರು ದಿನಗಳ ಬಳಿಕ ಸಾವನ್ನಪ್ಪಿದ್ದಾರೆ. ಇದೀಗ, ಗುರುವಾರ ಮತ್ತೋರ್ವ ಬಾಣಂತಿ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಬಳ್ಳಾರಿ ಜಿಲ್ಲೆಯ ತಾಯಂದಿರ ಸಾವಿನ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ದಿನೇಶ್, “ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇಂತಹ ಪ್ರಕರಣಗಳಲ್ಲಿ ತಪ್ಪತಸ್ಥರಿಗೆ ಶಿಕ್ಷೆ ಆಗಲೇಬೇಕು. ಈ ರೀತಿಯ ಸಮಸ್ಯೆಗಳನ್ನು ನಿಭಾಯಿಸಲು ವಿರೋಧ ಪಕ್ಷಗಳ ಸಹಕಾರವೂ ಅಗತ್ಯ. ನನ್ನ ರಾಜೀನಾಮೆಯಿಂದ ಸಮಸ್ಯೆ ಸರಿಯಾಗುತ್ತದೆ ಎಂದಾದರೆ, ಅದಕ್ಕೂ ಸಿದ್ದನಿದ್ದೇನೆ” ಎಂದಿದ್ದಾರೆ.

ನವೆಂಬರ್ 9ರಂದು ಸಿಜೇರಿಯನ್ ಹೆರಿಗೆಗೆ ಒಳಗಾಗಿದ್ದವರಿಗೆ ರಿಂಗರ್ ಲ್ಯಾಕ್ಟೇಟ್ ದ್ರಾವಣ‌ ಕೊಡಲಾಗಿತ್ತು. ಹೀಗಾಗಿ, ಔಷಧ ನಿಯಂತ್ರಕರನ್ನು ಅಮಾನತು ಮಾಡಲಾಗಿದೆ. ಔಷಧ ಪೂರೈಕೆ ಕಂಪನಿಯ ವಿರುದ್ಧವೂ ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ಮೃತ ತಾಯಂದಿರ ಕುಟುಂಬಗಳಿಗೆ ಪರಿಹಾರ ನೀಡಲಾಗುತ್ತಿದೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು; ಡ್ರಗ್ ಕಂಟ್ರೋಲರ್ ಸಸ್ಪೆಂಡ್: ಸಿ.ಎಂ.ಸಿದ್ದರಾಮಯ್ಯ

“ಈ ವರ್ಷ (2024) ರಾಜ್ಯದಲ್ಲಿ ಹೆರಿಗೆಗೆ ಸಂಬಂಧಿಸಿದಂತೆ 327 ಸಾವುಗಳು ಸಂಭವಿಸಿವೆ. ಎಲ್ಲ ಪ್ರಕರಣಗಳನ್ನೂ ಪರಿಶೀಲಿಸಲು ಸೂಚನೆ ನೀಡಿದ್ದೇವೆ. ಈ ಪ್ರಕರಣಗಳಲ್ಲಿ ಯಾರೇ ತಪ್ಪು ಮಾಡಿದ್ದರೂ ಕಠಿಣ ಕ್ರಮ ಕೈಗೊಳ್ಳಬೇಕು. ಔಷಧ ಕಂಪನಿಗಳ ವಿರುದ್ಧವೂ ಕಾನೂನಾತ್ಮಕ ಕ್ರಮ ಜರುಗಿಸಬೇಕು” ಎಂದು ಹೇಳಿದ್ದಾರೆ.
ಇದನ್ನೂ ಓದಿ ಬಾಣಂತಿಯರ ಸಾವು | ವ್ಯವಸ್ಥೆಯೇ ಮಾಡಿದ ಕೊಲೆ; ಸರ್ಕಾರ ಹೊರುವುದೇ ಹೊಣೆ?

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭಾರತದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ; ಮಾವಳ್ಳಿ ಶಂಕರ್

ಚಿಕ್ಕಮಗಳೂರಿನ ಮಹಾರಾಜ ಗ್ರ್ಯಾಂಡ್ ಹೋಟೆಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಸಿಜೆಪಿ ಹೋರಾಟಕ್ಕೆ ಬೆಂಬಲ: ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಎಡ ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ

ದೆಹಲಿಯಲ್ಲಿ ಸಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...