ಕಲಬುರಗಿ, ಬೀದರ್ ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರಗಳಾಗಿ ಘೋಷಿಸಿದ ಸಚಿವ ಈಶ್ವರ ಖಂಡ್ರೆ

Date:

  • ಪ್ರಸಕ್ತ ವರ್ಷ 5 ಕೋಟಿ ಸಸಿ ನೆಟ್ಟು ಪೋಷಿಸುವ ಗುರಿ ಹೊಂದಿರುವ ಅರಣ್ಯ ಇಲಾಖೆ
  • ಉಳಿದ ನಗರಗಳನ್ನೂ ಹಂತಹಂತವಾಗಿ ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಮಾಡಲಾಗುವುದು

ವಿಶ್ವ ಪರಿಸರ ದಿನದಂದು ಐದು ನಗರ ಅಥವಾ ಪಟ್ಟಣವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಮಾಡುವುದಾಗಿ ಘೋಷಿಸಿದ್ದ ಅರಣ್ಯ, ಪರಿಸರ ಸಚಿವ ಈಶ್ವರ ಖಂಡ್ರೆ ಇಂದು ಆ ಐದು ನಗರಗಳ ಪೈಕಿ ಎರಡು ನಗರಗಳ ಹೆಸರು ಘೋಷಣೆ ಮಾಡಿದ್ದಾರೆ.

- Advertisement -

ಕಲಬುರಗಿ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ. ಜೂ. 5ರಂದು ಘೋಷಿಸಿದಂತೆ, ಈ ವರ್ಷ ಐದು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರ, ಪಟ್ಟಣ ಮಾಡುವ ಸಂಕಲ್ಪ ಮಾಡಿದ್ದು, ಇದರಲ್ಲಿ ಕಲ್ಯಾಣ ಕರ್ನಾಟಕದ ಎರಡು ನಗರಗಳೂ ಸೇರಿವೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ನಾನಕ್ ಝೀರಾ, ಬಂದೇ ನವಾಜ್ ದರ್ಗಾ, ಝರಣಿ ನರಸಿಂಹ ದೇವಾಲಯ, ಸಂತ ಪಾಲರ ಮೆಥಾಡಿಸ್ಟ್ ಚರ್ಚ್ ಇರುವ ಸರ್ವ ಜನಾಂಗದ ಶಾಂತಿಯ ತೋಟವಾದ ಬೀದರ್ ನಗರ, ಐತಿಹಾಸಿಕ ನಗರಿ ಕಲ್ಬುರ್ಗಿಯನ್ನು ಪ್ರಥಮ ಹಂತದಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಮಾಡಲಾಗುವುದು. ಹಂತ ಹಂತವಾಗಿ ಉಳಿದ ನಗರಗಳನ್ನೂ ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಮಾಡಲಾಗುವುದು ಎಂದರು.

ಪ್ಲಾಸ್ಟಿಕ್ ನೀರಲ್ಲಿ ಕರಗುವುದಿಲ್ಲ. ಮಣ್ಣಲ್ಲಿ ಮಣ್ಣಾಗುವುದಿಲ್ಲ. ಜೈವಿಕವಾಗಿ ವಿಘಟನೆಯೂ ಆಗುವುದಿಲ್ಲ. ಭೂಮಿಯ ಒಡಲು ಸೇರಿ ವಿಷವಾಗುತ್ತಿದೆ. ಕಸದ ರಾಶಿಯಾಗಿ ದೊಡ್ಡ ಸಮಸ್ಯೆ ತರುತ್ತಿದೆ. ಏಕ ಬಳಕೆ ಪ್ಲಾಸ್ಟಿಕ್ ನಲ್ಲಿ ಮನೆಯ ಕಸ ಎಲ್ಲ ಗಂಟು ಕಟ್ಟಿ ಜನ ಹೊರಗೆ ಎಸೆಯುತ್ತಿದ್ದಾರೆ. ಇದರಿಂದ ಮಳೆ ನೀರು ಚರಂಡಿಗಳು ಕಟ್ಟಿಕೊಂಡು ರಸ್ತೆಯಲ್ಲಿ ಪ್ರವಾಹ ಸ್ಥಿತಿ ಉಂಟಾಗುತ್ತದೆ ಎಂದು ಹೇಳಿದರು.

ಪ್ಲಾಸ್ಟಿಕ್ ಕವರ್ ಗಳಲ್ಲಿ ಉಳಿದ ಅನ್ನ, ಕತ್ತರಿಸಿದ ತರಕಾರಿ ತುಂಬಿ ಎಸೆಯುವ ಕಾರಣ, ಅದನ್ನು ತಿನ್ನುವ ದನಕರುಗಳ ಹೊಟ್ಟೆಗೆ ಪ್ಲಾಸ್ಟಿಕ್ ಸೇರಿ ಸಾವಿಗೀಡಾಗುತ್ತಿವೆ. ಪ್ಲಾಸ್ಟಿಕ್ ಕಸದ ರಾಶಿಗೆ ಬೆಂಕಿ ಹಚ್ಚುವ ದುರಭ್ಯಾಸವೂ ಕೆಲವರಿಗಿದೆ. ಇದರಿಂದ ವಿಷಕಾರಿ ಹೊಗೆ ಪರಿಸರ ಸೇರಿ ಆಸ್ತಮಾ, ಉಸಿರಾಟದ ಸಮಸ್ಯೆ ಉಂಟಾಗುತ್ತಿದೆ. ಈ ತೀವ್ರತೆ ಅರಿತು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರ ಕಲ್ಪನೆಯನ್ನು ಸಾಕಾರ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದರು.

ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರಗಳಲ್ಲಿ ಪ್ಲಾಸ್ಟಿಕ್ ಉತ್ಪಾದನೆ, ಬಳಕೆ, ಮಾರಾಟ, ದಾಸ್ತಾನು ಆಗದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಜಿಲ್ಲಾಡಳಿತದ ಸಹಕಾರದೊಂದಿಗೆ ಏಕ ಬಳಕೆ ಪ್ಲಾಸ್ಟಿಕ್ ಗೆ ಕಡಿವಾಣ ಹಾಕಲಾಗುವುದು ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ರಾಗಿ ಖರೀದಿ ಕೇಂದ್ರದಲ್ಲಿ ಅವ್ಯವಹಾರ ಆರೋಪ; ಸಮಗ್ರ ತನಿಖೆಗೆ ಆದೇಶ

5 ಕೋಟಿ ಸಸಿ ನೆಡುವ ಅಭಿಯಾನ

ಪ್ರಸಕ್ತ ವರ್ಷ 5 ಕೋಟಿ ಸಸಿ ನೆಟ್ಟು ಪೋಷಿಸುವ ಮೂಲಕ ರಾಜ್ಯದಲ್ಲಿ ಹಸಿರು ವ್ಯಾಪ್ತಿಯ ಕ್ರಾಂತಿ ಮಾಡಲು ನಿರ್ಧರಿಸಿರುವ ಅರಣ್ಯ ಇಲಾಖೆ, ಜುಲೈ 1ರಿಂದ ಆರಂಭವಾದ ವನಮಹೋತ್ಸವದ ಪ್ರಥಮ 6 ದಿನಗಳಲ್ಲಿ 68 ಲಕ್ಷ ಸಸಿಗಳನ್ನು ನೆಟ್ಟಿದೆ ಎಂದು ತಿಳಿಸಿದರು.

ವನಮಹೋತ್ಸವದ ಸಂದರ್ಭದಲ್ಲಿ ನೆಟ್ಟಿರುವ ಎಲ್ಲ ಸಸಿಗಳೂ ಬೇರೂರಿ ಬೆಳೆದು ಹೆಮ್ಮರವಾಗುವುದನ್ನು ಖಾತ್ರಿಪಡಿಸಿಕೊಳ್ಳುವ ದೊಡ್ಡ ಸವಾಲು ಇದ್ದು, ಜಿಯೋ ಟ್ಯಾಗ್, ಆಡಿಟ್ ಮೂಲಕ ಇದನ್ನು ವ್ಯವಸ್ಥಿತವಾಗಿ ನಿಭಾಯಿಸಲಾಗುವುದು. ವರ್ಷವಿಡೀ ಗಿಡ ನೆಡುವ ಅಭಿಯಾನ ಮುಂದುವರಿಸಲಾಗುವುದು ಎಂದು ಹೇಳಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಳ್ಳಾರಿ ವಿಜಯನಗರ ಹೊರತು ಪಡಿಸಿ ಉಳಿದ ಐದು ಜಿಲ್ಲೆಗಳಲ್ಲಿ ಅರಣ್ಯ ವ್ಯಾಪ್ತಿ ಶೇ. 10ಕ್ಕಿ ಕಡಿಮೆ ಇದೆ. ಇಲ್ಲಿ ಹಸಿರು ವಲಯ ವ್ಯಾಪ್ತಿ ಹೆಚ್ಚಿಸಲು ಹೆಚ್ಚಿನ ಒತ್ತು ನೀಡಲಾಗಿದೆ. ಎತ್ತರದ ಗಿಡಗಳನ್ನು ಹಚ್ಚಿ, ಹಸಿರೀಕರಣ ಹೆಚ್ಚಿಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ವಿಧಾನಪರಿಷತ್ ಸದಸ್ಯ ತಿಪ್ಪಣ್ಣ ಕಮ್ಮಕ್ನೂರ್, ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಜಗದೇವ ಗುತ್ತೇದಾರ್ ಹಾಗೂ ಇತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಬಸವಕಲ್ಯಾಣ | ಬೌದ್ಧ ಧರ್ಮ ಚಾರಿಕಾ ಕಾರ್ಯಕ್ರಮ

ಮಾತಾ ರಮಾಬಾಯಿ ಅಂಬೇಡ್ಕರ್ ಮಹಿಳಾ ಟ್ರಸ್ಟ್ ಹಾಗೂ ಸರ್ವೋದಯ ಸಿದ್ಧಾರ್ಥ ಕ್ಲಬ್...