ರಾಜೀವ್ ಗಾಂಧಿ ವಸತಿ ನಿಗಮದ ಯೋಜನೆಗೆ ವೇಗ ನೀಡಲು ಸಚಿವ ಜಮೀರ್ ಅಹಮದ್ ಖಾನ್ ಸೂಚನೆ

Date:

Advertisements

ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ಕೈಗೊಂಡಿರುವ ವಸತಿ ಯೋಜನೆಗಳು ತ್ವರಿತ ಗತಿಯಲ್ಲಿ ಪೂರ್ಣ ಗೊಳಿಸುವಂತೆ ವಸತಿ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದರು.

ರಾಜೀವ್ ಗಾಂಧಿ ವಸತಿ ನಿಗಮದ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, “ಪ್ರಧಾನಮಂತ್ರಿ ನಗರ ಅವಾಸ್ ಯೋಜನೆ ಯಡಿ ಬಡ ಕುಟುಂಬಗಳಿಗೆ ಮನೆ ನಿರ್ಮಾಣ ಮಾಡಿ ಕೊಡುವ ಕಾಮಗಾರಿಗೆ ವೇಗ ನೀಡಬೇಕು” ಎಂದು ನಿರ್ದೇಶನ ನೀಡಿದರು.

“ರಾಜ್ಯದಲ್ಲಿ ಈ ಯೋಜನೆಯಡಿ ಚಾಲ್ತಿಯಲ್ಲಿರುವ 52 ಸಾವಿರ ಮನೆಗಳ ಪೈಕಿ 11,400 ಮನೆ ಆದಷ್ಟು ಶೀಘ್ರ ಹಂಚಿಕೆ ಮಾಡಬೇಕಿದ್ದು, ವಸತಿ ಸಮುಚ್ಚಯ ಹಾಗೂ ಮೂಲ ಸೌಕರ್ಯ ಕಾಮಗಾರಿ ಕಾಲ ಮಿತಿಯಲ್ಲಿ ಪೂರ್ಣ ಗೊಳಿಸಿ. ಬಸವ, ಅಂಬೇಡ್ಕರ್, ದೇವರಾಜ ಅರಸು, ವಾಜಪೇಯಿ ನಗರ ಹಾಗೂ ಪ್ರಧಾನ ಮಂತ್ರಿ ಅವಾಸ್ ಗ್ರಾಮೀಣ ಮನೆಗಳ ವಿಚಾರದಲ್ಲಿ ಫಲಾನುಭ ವಿಗಳ ಆಯ್ಕೆ ವಿಳಂಬದ ಬಗ್ಗೆ ದೂರುಗಳಿದ್ದು, ಶಾಸಕರ ಜತೆ ಪತ್ರ ವ್ಯವಹಾರ ನಡೆಸಿ ಸಮಸ್ಯೆ ಬಗೆಹರಿಸಿ ಕೊಳ್ಳಿ. ಸಬ್ಸಿಡಿ ಮೊತ್ತ ಸಕಾಲಕ್ಕೆ ತಲುಪುವಂತೆ ನೋಡಿಕೊಳ್ಳಿ” ಎಂದು ತಿಳಿಸಿದರು.

Advertisements

“ಬೆಂಗಳೂರು ನಗರದಲ್ಲಿ ರೂಪಿಸಿರುವ ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಕಾಮಗಾರಿ ಆದಷ್ಟು ಶೀಘ್ರ ಪೂರ್ಣಗೊಳಿಸಿ, ಫಲಾನುಭ ವಿಗಳು ವರ್ಷ ಗಳಿಂದ ಕಾಯುತ್ತಿದ್ದು ಶೀಘ್ರ ಹಂಚಿಕೆಗೆ ಕ್ರಮ ಕೈಗೊಳ್ಳಿ. ಪ್ರಧಾನ ಮಂತ್ರಿ ನಗರ ಮತ್ತು ಗ್ರಾಮೀಣ ಅವಾಸ್ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರದ ಪಾಲುದಾರಿಕೆ ಇರುವುದರಿಂದ ಹೆಚ್ಚಿನ ಅನುದಾನ ಪಡೆಯಲು ಸದ್ಯದಲ್ಲೇ ದೆಹಲಿಗೆ ತೆರಳಿ ಕೇಂದ್ರ ಸಚಿವರನ್ನು ಭೇಟಿ ಮಾಡಲಾಗುವುದು” ಎಂದು ಹೇಳಿದರು.

ವಸತಿ ಇಲಾಖೆ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಸುಶೀಲಮ್ಮ, ಪ್ರಧಾನ ಅಭಿಯಂತರ ಸಂಜೀವ ರೆಡ್ಡಿ, ಪರಶು ರಾಮನ ಗೌಡ ಮತ್ತಿತರರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X