- ಮಣಿಪುರ ಸಂತ್ರಸ್ತರ ಜತೆ ಹುಟ್ಟುಹಬ್ಬ ಆಚರಿಸಿಕೊಂಡ ಜಮೀರ್ ಅಹಮದ್
- ಶಿಕ್ಷಣ ವೆಚ್ಚ ಭರಿಸಲು ಮುಂಗಡವಾಗಿ ಎರಡು ಲಕ್ಷ ರೂ. ನೀಡಿದ ಸಚಿವರು
ಮಣಿಪುರದಲ್ಲಿ ಜನಾಂಗೀಯ ಘರ್ಷಣೆಗೆ ತುತ್ತಾಗಿ ಆಶ್ರಯ ಅರಸಿ ಬಂದ ವಿದ್ಯಾರ್ಥಿಗಳ ಜತೆ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಇಂದು ಹುಟ್ಟುಹಬ್ಬ ಆಚರಿಸಿಕೊಂಡರು.
ಚಾಮರಾಜಪೇಟೆಯ ಸೇಂಟ್ ತೆರೇಸಾ ಶಿಕ್ಷಣ ಸಂಸ್ಥೆಯಲ್ಲಿ ಆಶ್ರಯ ಪಡೆಯುತ್ತಿರುವ 29 ವಿದ್ಯಾರ್ಥಿನಿಯರ ಸಂಪೂರ್ಣ ಶಿಕ್ಷಣ ವೆಚ್ಚ ಭರಿಸುವುದಾಗಿ ಇದೇ ಸಂದರ್ಭದಲ್ಲಿ ಘೋಷಿಸಿ ಎರಡು ಲಕ್ಷ ರೂ. ನೀಡಿದರು.
ಮಣಿಪುರ ವಿದ್ಯಾರ್ಥಿಗಳ ಜತೆ ಅಲ್ಲಿನ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದ ಸಚಿವರು, “ಇಲ್ಲಿ ಸುರಕ್ಷಿತವಾಗಿರಿ ನಿಮಗೆ ಏನು ಬೇಕಾದರೂ ನಾನೇ ವ್ಯವಸ್ಥೆ ಮಾಡುತ್ತೇನೆ” ಎಂದು ಭರವಸೆ ನೀಡಿದರು.
ಮಣಿಪುರ ವಿದ್ಯಾರ್ಥಿಗಳ ಜತೆಯೇ ಉಪಾಹಾರ ಸೇವಿಸಿ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ 250 ಮಕ್ಕಳಿಗೂ ತಮ್ಮ ಹುಟ್ಟುಹಬ್ಬದ ಪ್ರಯುಕ್ತ ರಾತ್ರಿ ಊಟದ ವ್ಯವಸ್ಥೆ ಮಾಡಿದರು. ಸೇಂಟ್ ತೆರೇಸಾ ವಿದ್ಯಾ ಸಂಸ್ಥೆಯ ಶಿಕ್ಷಕ ವರ್ಗ ಉಪಸ್ಥಿತರಿದ್ದರು.