ಮುಡಾ ಆರೋಪ | ಸಿದ್ದರಾಮಯ್ಯ ವಿರುದ್ದ ಕೇಂದ್ರ ಸರ್ಕಾರ ಪ್ರಾಯೋಜಿತ ಹುನ್ನಾರ : ಸಚಿವ ರಾಜಣ್ಣ

Date:

ಬಿಜೆಪಿಯವರು ಮುಡಾ ಆರೋಪ ಮಾಡಿ ಸಿದ್ದರಾಮಯ್ಯನವರ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ ಮಾಡುತ್ತಿದೆ. ಇದೊಂದು ಕೇಂದ್ರ ಸರ್ಕಾರದ ಯೋಜಿತ ಮತ್ತು ಪ್ರಯೋಜಿತ ಹುನ್ನಾರ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು.

- Advertisement -

ತುಮಕೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಸಿ ಎಂ ಸಿದ್ದರಾಮಯ್ಯನವರ ಮೇಲೆ ಮಾಡುವ ಆರೋಪ ಇಡೀ ಅಹಿಂದ ವರ್ಗದ ಮೇಲೆ ಆರೋಪ‌ ಮಾಡಿದಂತೆ. ಹಾಗಾಗಿ ಬಿಜೆಪಿಯವರು ಪಾದಯಾತ್ರೆ ಮಾಡಿದರೆ ಪಕ್ಷತೀತವಾಗಿ ಅಹಿಂದ ಸಮುದಾಯದವರು ತುಮಕೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಸಿದ್ದರಾಮಯ್ಯನವರು ಹಿಂದುಳಿದ ವರ್ಗದ ನಾಯಕ. ದೇವರಾಜ ಅರಸು ಬಳಿಕ ಉತ್ತಮ ಆಡಳಿತ ನೀಡುತ್ತಿರುವ ನಾಯಕ. ಹಿಂದುಳಿದ ವರ್ಗದವರು ಅಧಿಕಾರಕ್ಕೆ ಬಂದರೆ ಮುಂದುವರಿದವರು ದೌರ್ಜನ್ಯ ನಡೆಸುವಂತ ಕೆಲಸ ಮಾಡುತ್ತಾರೆ. ಸಿದ್ದರಾಮಯ್ಯನವರಿಗೆ ವಿರೋಧಿಸಿ ಪಾದಯಾತ್ರೆ ಮಾತನಾಡುತ್ತಿರುವುದು ಅಹಿಂದ ವರ್ಗದ ವಿರುದ್ದ ಮಾಡುತ್ತಿರುವ ಪಿತೂರಿ. ಹೀಗೆ ಮುಂದುವರಿದರೆ, ತುಮಕೂರು ಜಿಲ್ಲೆಯಲ್ಲಿ ಬೃಹತ್ ಹೋರಾಟ ಮಾಡುವ ಚಿಂತನೆ ಇದೆ. ಸುಳ್ಳನ್ನು ಸತ್ಯ ಎಂದು ನಿರೂಪಣೆ ಮಾಡುವುದೇ ಬಿಜೆಪಿ ಪಾದಯಾತ್ರೆಯ ಉದ್ದೇಶ” ಎಂದು ಆರೋಪಿಸಿದರು.

“ಮುಡಾದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪ ಮಾಡುತ್ತಿರುವ ವಿರೋಧ ಪಕ್ಷದವರು ಬೆಂಗಳೂರಿನಲ್ಲಿದ್ದುಕೊಂಡು ಮಂಡ್ಯ, ಶ್ರೀರಂಗಪಟ್ಟಣ, ಮೈಸೂರಿನಲ್ಲಿ ವಾಸವಿದ್ದೇವೆ ಎಂದು ಸುಳ್ಳು ಹೇಳಿ ಮುಡಾದಿಂದ ನಿವೇಶನ ಪಡೆದಿದ್ದಾರೆ. ಪಡೆದಿರುವ ನಿವೇಶನಗಳನ್ನು ಮೊದಲು ಮೂಡಾಗೆ ಹಿಂದಿರುಗಿಸಿ ಮಾತನಾಡಲಿ” ಎಂದು ಸಚಿವ ರಾಜಣ್ಣ ಸವಾಲೆಸೆದರು.

“ಮುಡಾದಲ್ಲಿ ಹೆಚ್ಚಿನ ಫಲಾನುಭವಿಗಳು ವಿರೋಧ ಪಕ್ಷದಲ್ಲಿ ಇರುವವರೇ ಆಗಿದ್ದಾರೆ. ಬಿಜೆಪಿಯವರ ಮಾತು ‘ತಾನು ಕಳ್ಳ ಪರರ ನಂಬ’ ಎಂಬಂತಿದೆ. 17 ಮಾರ್ಚ್ 2011ರಂದು ವಿಧಾನ ಪರಿಷತ್‌ನಲ್ಲಿ ಯಡಿಯೂರಪ್ಪ‌ನವರು ಯಾರೆಲ್ಲ ನಿವೇಶನ ಖರೀದಿಸಿದ್ದಾರೆ, ಯಾರೆಲ್ಲಾ ಭಾಗಿಯಾಗಿದ್ದಾರೆ ಎಲ್ಲವನ್ನೂ ವಿಧಾನ ಪರಿಷತ್ ನಡವಳಿಕೆಯಲ್ಲಿ ತಿಳಿಸಿದ್ದಾರೆ. ಮುಡಾದಲ್ಲಿ ಹೆಚ್ಚು ಜನ ಫಲಾನುಭವಿಗಳು ವಿರೋಧ ಪಕ್ಷದವರೆ ಆಗಿರುವುದು ಇದರಿಂದ ಬಹಿರಂಗವಾಗಿದೆ” ಎಂದರು.

“ಬಿಜೆಪಿ-ಜೆಡಿಎಸ್‌ನವರು ನಕಲಿ ಮಾಹಿತಿ‌ ನೀಡಿ ಮುಡಾ ನಿವೇಶನ ಖರಿದೀಸಿದ್ದಾರೆ. ಮೊದಲು ಅವರು ಖರೀದಿಸಿರುವ ಸೈಟುಗಳನ್ನು ವಾಪಸ್ ನೀಡಬೇಕು” ಎಂದು ಸಚಿವ ಕೆ ಎನ್ ರಾಜಣ್ಣ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ವೇಣುಗೋಪಾಲ್ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...