ಮೂವರು ಡಿಸಿಎಂ ನೇಮಕ ಬಗ್ಗೆ ಹೈಕಮಾಂಡ್‌ಗೆ ಪತ್ರ ಬರೆಯುತ್ತೇವೆ: ಸಚಿವ ಕೆ ಎನ್ ರಾಜಣ್ಣ

Date:

  • ಲೋಕಸಭೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಮೂವರು ಡಿಸಿಎಂ ಅಗತ್ಯವಿದೆ
  • ಸಂಸದ ಡಿ ಕೆ ಸುರೇಶ್ ವಿರುದ್ಧ ನಾನು ಹೇಳಿಕೆ ನೀಡುತ್ತಿಲ್ಲ: ರಾಜಣ್ಣ

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅತಿ ಹೆಚ್ಚು ಸ್ಥಾನಗಳನ್ನು ರಾಜ್ಯದಲ್ಲಿ ಗೆಲ್ಲಬೇಕಿದೆ. ಇದಕ್ಕೆ ಎಲ್ಲ ಸಮುದಾಯಗಳ ಬೆಂಬಲ ಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಮೂವರು ಉಪಮುಖ್ಯಮಂತ್ರಿಗಳನ್ನು ನೇಮಕ ಮಾಡುವಂತೆ ಹೈಕಮಾಂಡ್‌ ಕೋರುತ್ತೇವೆ ಎಂದು ಸಚಿವ ಕೆ ಎನ್ ರಾಜಣ್ಣ ತಿಳಿಸಿದರು.

ತುಮಕೂರಿನಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಮೂವರು ಡಿಸಿಎಂಗಳಾದರೆ ಚುನಾವಣೆಯಲ್ಲಿ ಅನುಕೂಲವಾಗಲಿದೆ. ಹೀಗಾಗಿ ಮೂವರು ಉಪಮುಖ್ಯಮಂತ್ರಿಗಳನ್ನು ನೇಮಕ ಮಾಡುವಂತೆ ಕೋರಿ ಪಕ್ಷದ ಹೈಕಮಾಂಡ್‌ಗೆ ಪತ್ರ ಬರೆಯಲಾಗುವುದು” ಎಂದರು.

“ಪರಿಶಿಷ್ಟ ಜಾತಿ–ಪಂಗಡ, ಅಲ್ಪಸಂಖ್ಯಾತರು, ವೀರಶೈವ ಲಿಂಗಾಯತ ಸಮುದಾಯಕ್ಕೆ ತಲಾ ಒಂದು ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಕೇಳಿಕೊಳ್ಳಲಾಗುವುದು. ಅಕ್ಟೋಬರ್ ಮೊದಲ ವಾರ ಹೈಕಮಾಂಡ್ ಭೇಟಿಯಾಗಿ ಈ ಬಗ್ಗೆ ಮನವರಿಕೆ ಮಾಡಿಕೊಡಲಾಗುವುದು” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಮೂವರು ಡಿಸಿಎಂ ನೇಮಕ ವಿಚಾರಕ್ಕೆ ಸಹಮತ ವ್ಯಕ್ತಪಡಿಸುವ ಮುಖಂಡರನ್ನು ಒಳಗೊಂಡ ನಿಯೋಗವನ್ನು ಹೈಕಮಾಂಡ್ ಬಳಿಗೆ ಕರೆದುಕೊಂಡು ಹೋಗುವ ಬಗ್ಗೆ ಚಿಂತಿಸಲಾಗುವುದು” ಎಂದು ರಾಜಣ್ಣ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕರಾವಳಿಯ ಜನ ಹಿಂದುತ್ವದ ನಶೆಯಿಂದ ಹೊರಬರಲು ಇದು ʼಚೈತ್ರಕಾಲʼ

ಬಿಜೆಪಿ ಶಾಸಕರಾದ ಎಸ್ ಟಿ ಸೋಮಶೇಖರ್, ಶಿವರಾಮ ಹೆಬ್ಬಾರ್ ಕಾಂಗ್ರೆಸ್‌ಗೆ ಬರುವ ಬಗ್ಗೆ ಮಾಹಿತಿ ಇದೆ. ಮತ್ತೊಬ್ಬ ಮುಖಂಡ ವಿ.ಸೋಮಣ್ಣ ಪಕ್ಷಕ್ಕೆ ಬಂದು ತುಮಕೂರು ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬುದು ಗಾಳಿ ಸುದ್ದಿ. ಜೆಡಿಎಸ್ ಮಾಜಿ ಶಾಸಕ ಡಿ ಸಿ ಗೌರಿಶಂಕರ್ ಪಕ್ಷಕ್ಕೆ ಬರುವ ಬಗ್ಗೆ ಮಾಹಿತಿ ಇಲ್ಲ” ಎಂದರು.

ಡಿ ಕೆ ಸುರೇಶ್ ವಿರುದ್ಧ ಹೇಳಿಕೆ ನೀಡುತ್ತಿಲ್ಲ

“ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಹೋದರ ಸಂಸದ ಡಿ.ಕೆ.ಸುರೇಶ್ ವಿರುದ್ಧ ನಾನು ಹೇಳಿಕೆ ನೀಡುತ್ತಿಲ್ಲ. ಶಿವಕುಮಾರ್ ಈಗಾಗಲೇ ಉಪಮುಖ್ಯಮಂತ್ರಿ ಇದ್ದಾರೆ. ಇತರರಿಗೂ ಅವಕಾಶ ನೀಡಬೇಕು ಎಂಬುದು ನನ್ನ ವಾದವಾಗಿದೆ. ಅವಕಾಶ ಕೇಳುವುದರಲ್ಲಿ ತಪ್ಪೇನಿದೆ” ಎಂದು ಪ್ರಶ್ನಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಬಿಸಿಲಿನ ತಾಪ ಹೆಚ್ಚಳ; ಮೃಗಾಲಯ ತಂಪಾಗಿಡಲು ವಿಶೇಷ ವ್ಯವಸ್ಥೆ

ಪ್ರಸ್ತುತ ವರ್ಷ ಮೈಸೂರು ನಗರದಲ್ಲಿ ತಾಪಮಾನ ಗಣನೀಯವಾಗಿ ಏರಿಕೆಯಾಗಿರುವುದರಿಂದ ಮೃಗಾಲಯದ ಪ್ರಾಣಿಗಳು...

ತುಮಕೂರು | ಹಾಲಪ್ಪ ಯಾರು? ಮುದ್ದಹನುಮೇಗೌಡರಿಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ: ಸಚಿವ ರಾಜಣ್ಣ

ಮಾಜಿ ಸಂಸದ ಮುದ್ದಹನುಮೇಗೌಡ ಅವರು ಯಾವುದೇ ಷರತ್ತಿಲ್ಲದೆ ಪಕ್ಷಕ್ಕೆ ಮರು ಸೇರ್ಪಡೆಯಾಗಿದ್ದು,...

ಬೆಂಗಳೂರು | ಕನ್ನಡ ನಾಮಫಲಕ ಕಡ್ಡಾಯ; ತಪ್ಪಿದಲ್ಲಿ ‘ಕರ್ನಾಟಕ ಬಂದ್’: ವಾಟಾಳ್ ನಾಗರಾಜ್ ಎಚ್ಚರಿಕೆ

ಕನ್ನಡ ನಾಮಫಲಕ ಕಡ್ಡಾಯಕ್ಕೆ ಮೂರು ದಿನಗಳಷ್ಟೇ ಬಾಕಿ ಉಳಿದಿದ್ದು, ಗಡುವು ಮುಗಿಯುವುದರೊಳಗಾಗಿ...

ತುಮಕೂರು | ಲೋಕಸಭಾ ಚುನಾವಣೆಗೆ ಜೆಡಿಎಸ್‌ ಟಿಕೆಟ್‌ ಬೇಡಿಕೆಯಿಟ್ಟ ಕೆ.ಟಿ ಶಾಂತಕುಮಾರ್

ಕಳೆದ 2019ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್...