ಪ್ರಕೃತಿ ವಿಕೋಪ | ಪರಿಹಾರ ಧನ ಹೆಚ್ಚಿಸಲು ಕೇಂದ್ರಕ್ಕೆ ಸಚಿವ ಕೃಷ್ಣ ಭೈರೇಗೌಡ ಒತ್ತಾಯ

Date:

ಬೆಳೆ ಹಾನಿ, ಬರಗಾಲ, ಅತಿವೃಷ್ಠಿ ಸೇರಿದಂತೆ ವಿವಿಧ ಪ್ರಕೃತಿ ವಿಕೋಪಗಳಿಗೆ ನೀಡುವ ಪರಿಹಾರ ಹಣ ಬಹಳಷ್ಟು ಕಡಿಮೆ ಪ್ರಮಾಣದಲ್ಲಿದ್ದು, ಅದನ್ನು ಪರಿಷ್ಕರಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಮನವಿ ಮಾಡಿದ್ದಾರೆ.

- Advertisement -

ವಿವಿಧ ರಾಜ್ಯಗಳ ವಿಪತ್ತು ನಿರ್ವಹಣಾ ಸಚಿವರ ಜೊತೆಗೆ ಅಮಿತ್ ಶಾ ನಡೆಸಿದ ಸಭೆಯಲ್ಲಿ ಕೃಷ್ಣ ಭೈರೇಗೌಡ ಭಾಗಿಯಾಗಿದ್ದರು. ಸಭೆಯಲ್ಲಿ ಮಾತನಾಡಿದ ಅವರು, “ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗುವ ಬರಗಾಲ, ಅತಿವೃಷ್ಠಿ, ಮಳೆ ಹಾನಿ, ಬೆಳೆ ಪರಿಹಾರ ಮೊತ್ತ ಕಡಿಮೆ ಇದೆ. ಆ ಮೊತ್ತವನ್ನು ಪರಿಷ್ಕರಣೆ ಮಾಡಿ, ಪರಿಹಾರ ಧನವನ್ನು ಹೆಚ್ಚಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಮೂರು ಅಂಶಗಳನ್ನು ಸಭೆಯಲ್ಲಿ ಪ್ರಸ್ತಾಪಿಸಿದ್ದೇನೆ. ಮೊದಲನೇಯದಾಗಿ ಮಳೆ ಆಶ್ರಿತ ಪ್ರತಿ ಹೆಕ್ಟೇರ್ ಭೂಮಿಗೆ 8500 ರೂ.ಬೆಳೆ ಹಾನಿ ಪರಿಹಾರ ನೀಡಲಾಗುತ್ತಿದೆ ಅದನ್ನು 20000 ರೂ.ಗಳಿಗೆ ಹೆಚ್ಚಿಸಬೇಕು, ನೀರಾವರಿ ಭೂಮಿಗೆ 17000 ರೂ. ನೀಡಲಾಗುತ್ತಿದೆ ಇದನ್ನು 35000 ರೂ‌‌.ಗೆ ಹೆಚ್ಚಿಸಬೇಕು. ತೋಟಗಾರಿಕೆ ಬೆಳೆ ಹಾನಿಗೆ 22000 ರೂ.ಗಳಿಂದ 49000 ರೂ.ಗಳಿಗೆ ಹೆಚ್ಚಿಸಲು ಮನವಿ ಮಾಡಿದ್ದೇನೆ” ಎಂದರು.

“ಇದು ಬಹಳಷ್ಟು ವರ್ಷಗಳಿಂದಿರುವ ಸಾರ್ವಜನಿಕರ ಒತ್ತಾಯವಾಗಿದೆ. ಸದ್ಯ ರಾಜ್ಯ ಸರ್ಕಾರ ಕೈಯಿಂದ ಹಣ ಹಾಕಿ ಹೆಚ್ಚಿನ ಪರಿಹಾರ ನೀಡಲಾಗುತ್ತಿದೆ. ಇದು ರಾಜ್ಯ ಸರ್ಕಾರಗಳಿಗೆ ಹೊರೆಯಾಗುತ್ತಿದೆ ಕರ್ನಾಟಕದ ಎಸ್‌ಡಿಆರ್‌ಎಫ್ ಗೆ ಈಗಾಗಲೇ ಅನುದಾನ ಕಡಿಮೆ ಬರುತ್ತಿದೆ. ಹೀಗಾಗಿ ಕೇಂದ್ರದಿಂದ ನೀಡುವ ಪರಿಹಾರ ಮೊತ್ತ ಹೆಚ್ಚಿಸಬೇಕು ಎಂದು ಆಗ್ರಹಿಸಲಾಗಿದೆ” ಎಂದು ಹೇಳಿದರು.

“ಅಕ್ಟೋಬರ್‌ನಲ್ಲಿ ಕೇಂದ್ರ ಸರ್ಕಾರ ಪಕೃತಿ ವಿಕೋಪ ಮಾರ್ಗಸೂಚಿಯಲ್ಲಿ ನಿಯಮ ಬದಲಾಯಿಸಿದೆ. ಸರ್ಕಾರ ನೀಡುವ ಪರಿಹಾರ ಮೊತ್ತದಲ್ಲಿ ವಿಮಾ ಕಂಪನಿಗಳು ವಿಮಾ ಮೊತ್ತವನ್ನು ಕಡಿತಗೊಳಿಸಿ ನೀಡುವ ನಿಯಮವನ್ನು ತೆಗೆದು ಹಾಕಬೇಕು, ಇದರಿಂದ ರೈತರು ಮತ್ತು ಸರ್ಕಾರಕ್ಕೆ ನಷ್ಟವಾಗುತ್ತಿದ್ದು ವಿಮಾ ಕಂಪನಿಗಳಿಗೆ ದೊಡ್ಡ ಲಾಭವಾಗುತ್ತಿದೆ ಇದನ್ನು ಬದಲಾಯಿಸಬೇಕು” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಬರದ ಹೊಡೆತಕ್ಕೆ ಬೆಳೆ ನಷ್ಟ, ಸಾಲದ ಹೊರೆ; ರೈತ ಆತ್ಮಹತ್ಯೆ

ಮಳೆ ಕೈಕೊಟ್ಟು ಬೆಳೆ ನಿರೀಕ್ಷಿತ ಪ್ರಮಾಣದಲ್ಲಿ ಬಾರದ ಹಿನ್ನೆಲೆಯಲ್ಲಿ ಸಾಲದ ಹೊರೆ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು...

ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ದಾರಿದೀಪ ಅವ್ಯವಸ್ಥೆ: ಜಿಲ್ಲಾಧಿಕಾರಿಗೆ ಕಾಂಗ್ರೆಸ್ ಮನವಿ

ಉಡುಪಿ ನಗರಸಭೆ ವ್ಯಾಪ್ತಿಯ ಗ್ರಾಮಾಂತರ ಹಾಗೂ ನಗರ ಪ್ರದೇಶಗಳಲ್ಲಿ ಹದಗೆಟ್ಟಿರುವ ದಾರಿದೀಪ...

ಕಲಬುರಗಿ | ಹಸುಗೂಸನ್ನು ಕಸದ ರಾಶಿಗೆ ಎಸೆದು ಪರಾರಿ; ತಾಯಿ, ಅಜ್ಜಿ ಪೊಲೀಸರ ವಶಕ್ಕೆ

ಕಲಬುರಗಿ ತಾಲೂಕಿನ ಶ್ರೀನಿವಾಸ ಸರಡಗಿ ಗ್ರಾಮದಲ್ಲಿ ಒಂದು ದಿನದ ಹಸುಗೂಸನ್ನು ಕಸದ...