ಬಿಜೆಪಿ ಅವಧಿಯಲ್ಲಿ ಬರ ಪರಿಹಾರದಲ್ಲೂ ಅವ್ಯವಹಾರ: ‘ತನಿಖೆಗೆ ಆದೇಶಿಸಿದ್ದೇವೆ’ ಎಂದ ಸಚಿವ ಕೃಷ್ಣ ಬೈರೇಗೌಡ

Date:

“ರೈತರಿಗೆ ಬರ ಹಾಗೂ ಮಳೆಹಾನಿ ಪರಿಹಾರ ತಲುಪಿಸುವ ವಿಚಾರದಲ್ಲೂ ಕೂಡ ಬಿಜೆಪಿ ಸರ್ಕಾರದ ಅವಧಿಯಲ್ಲಿ ಭಾರೀ ಅವ್ಯವಹಾರಗಳು ನಡೆದಿವೆ. ಜಮೀನು ಯಾರದ್ದೋ ಇದೆ, ಪರಿಹಾರ ಇನ್ಯಾರಿಗೋ ಹೋಗಿರುವ ಹಲವು ಪ್ರಕ್ರರಣಗಳು ನನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ತನಿಖೆಗೆ ಆದೇಶ ಮಾಡಲಾಗಿದೆ” ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ವಿಕಾಸಸೌಧದಲ್ಲಿ ಶುಕ್ರವಾರ ಜರುಗಿದ ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಉಪ ವಿಭಾಗಾಧಿಕಾರಿಗಳ ಜೊತೆಗಿನ ಮಾಸಿಕ ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, “ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲೇ 6 ಕೋಟಿ ರೂ. ಪರಿಹಾರದ ಹಣದ ವಿತರಣೆಯಲ್ಲಿ ಅಕ್ರಮ ಎಸಲಾಗಿದೆ. ಹಣ ದುರ್ಬಳಕೆಯಾದವರ ಪಟ್ಟಿ ನನ್ನ ಬಳಿ ಇದೆ. ಹಾನಗಲ್, ಶಿಗ್ಗಾಂವ್ ನಲ್ಲೂ ಇಂತಹ ಪ್ರಕರಣಗಳು ಕಂಡುಬಂದಿದೆ” ಎಂದು ಮಾಹಿತಿ ನೀಡಿದರು.

“2022-21 ಹಾಗೂ 22-23 ನೇ ಸಾಲಿನಲ್ಲಿ ಹಾವೇರಿ ಜಿಲ್ಲೆಯ ಶಿಗ್ಗಾಂವ್ ಹಾಗೂ ಹಾನಗಲ್ ನಲ್ಲಿ ವ್ಯಾಪಕವಾಗಿ ಅಕ್ರಮ ನಡೆದಿದೆ. ಈ ನಿಟ್ಟಿನಲ್ಲಿ ಸೂಕ್ತ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಲಾಗಿದೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಗರಿಷ್ಠ 5 ಎಕರೆಯವರೆಗೆ ಪರಿಹಾರ ಕೊಡಬಹುದು. ಆದರೆ, 5 ಎಕರೆ ಮೀರಿ ಕೂಡ ಪರಿಹಾರ ವಿತರಿಸಿದ್ದಾರೆ. ರೈತರಲ್ಲದವರ ಖಾತೆಗೆ 49,999 ಜಮೆ ಆಗಿದೆ. ಅಸಲಿ ರೈತರ ಖಾತೆಗೆ ಅಲ್ಪ ಪ್ರಮಾಣದ ಮೊತ್ತ ಮಾತ್ರ ಜಮೆ ಆಗಿದೆ. ಇದೇ ಕಾರಣಕ್ಕೆ ಈ ಬಾರಿ ರೈತರಿಗೆ ಬರ ಪರಿಹಾರ ನೀಡಲು ‘ಫ್ರೂಟ್ಸ್‌’ ದಾಖಲಾತಿ ಕಡ್ಡಾಯಗೊಳಿಸಲಾಗಿದೆ” ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

“ಈ ಹಿಂದೆ ಫ್ರೂಟ್ಸ್‌ ಡಾಟಾ ಬೇಸ್‌ನಲ್ಲಿ 7.7 ಲಕ್ಷ ರೈತರ ಮಾಹಿತಿಯೇ ಇರಲಿಲ್ಲ. ಇದೀಗ ಹೊಸದಾಗಿ ಸೇರಿಸಲಾಗಿದೆ. 34 ಲಕ್ಷ ರೈತರ ಜಮೀನಿನ ಮಾಹಿತಿಯನ್ನು ಈ ತಂತ್ರಾಂಶದಲ್ಲಿ ದಾಖಲು ಮಾಡಲಾಗಿದೆ. ಬಿಟ್ಟುಹೋಗಿರುವ ಅರ್ಹ ರೈತರ ಮಾಹಿತಿಯನ್ನು ಮತ್ತೆ ದಾಖಲಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕಳೆದ 15 ದಿನಗಳಿಂದ ನಮ್ಮ ಅಧಿಕಾರಿಗಳು ರಜೆ ತೆಗೆದುಕೊಳ್ಳದೆ ಕೆಲಸ ಮಾಡಿದ್ದು, ರೈತರ ಹಣ ದುರುಪಯೋಗವಾಗದಂತೆ ಅವರಿಗೆ ತಲುಪಿಸಲಾಗುವುದು. ಈಗಾಗಲೇ ಈ ಪ್ರಕ್ರಿಯೆ ಆರಂಭವಾಗಿದ್ದು, 15 ಲಕ್ಷಕ್ಕೂ ಅಧಿಕ ರೈತರಿಗೆ ಈಗಾಗಲೇ ಹಣ ತಲುಪಿಸಲಾಗಿದೆ. ಮುಂದಿನ ವಾರದೊಳಗೆ 30 ಲಕ್ಷ ರೈತರಿಗೆ ಪರಿಹಾರದ ಹಣ ತಲುಪಲಿದೆ” ಎಂದರು.

“ಬರ ಪರಿಹಾರದ ಮೊದಲ ಕಂತಿನ ಹಣವನ್ನು ಶೀಘ್ರವೇ ರೈತರಿಗೆ ತಲುಪಿಸಿ ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಫ್ರೂಟ್ಸ್‌ನಲ್ಲಿ ಶೇ.75 ರಷ್ಟು ರೈತರ ಸಂಪೂರ್ಣ ಜಮೀನಿನ ಮಾಹಿತಿಯನ್ನು ನವೀಕರಿಸಿದ್ದು ಮುಂದಿನ ಒಂದು ವಾರದಲ್ಲಿ 30 ಲಕ್ಷ ರೈತರಿಗೆ ಮೊದಲ ಕಂತಿನ ಬರ ಪರಿಹಾರದ ಹಣ ಬ್ಯಾಂಕ್ ಖಾತೆಗೆ ತಲುಪಲಿದೆ” ಎಂದು ತಿಳಿಸಿದರು.

ಕೇಂದ್ರದಿಂದ ಇನ್ನೂ ಬಂದಿಲ್ಲ ಪರಿಹಾರ!

ಬರ ಘೋಷಿಸಿ ನಾಲ್ಕು ತಿಂಗಳಾದರೂ ಕೇಂದ್ರ ಸರ್ಕಾರದಿಂದ ಬರ ಪರಿಹಾರದ ಹಣ ಇನ್ನೂ ಬಂದಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಬೇಸರ ವ್ಯಕ್ತಪಡಿಸಿದರು.

“ರಾಜ್ಯದ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಎನ್‌ಡಿಆರ್‌ಎಫ್ ಮಾರ್ಗಸೂಚಿ ಅನ್ವಯ 18,177.44 ಕೋಟಿ ರೂ. ಪರಿಹಾರ ನೀಡುವಂತೆ ಸೆಪ್ಟೆಂಬರ್ 22ರಂದೇ ಕೇಂದ್ರ ಕೃಷಿ ಸಚಿವಾಲಯಕ್ಕೆ ಮನವಿ ಸಲ್ಲಿಸಲಾಗಿದೆ. ಭಾರತ ಸರ್ಕಾರದ ಬರ ಅಧ್ಯಯನ ತಂಡ ಅಕ್ಟೋಬರ್ ತಿಂಗಳ 4 ರಿಂದ 9ರ ನಡುವೆ ಭೇಟಿ ನೀಡಿ, ವರದಿಯನ್ನೂ ಸಲ್ಲಿಸಿದೆ. ಆದರೂ, ಕೇಂದ್ರ ಸರ್ಕಾರ ಸಭೆ ನಡೆಸಿ, ತೀರ್ಮಾನ ತೆಗೆದುಕೊಂಡಿಲ್ಲ. ನಮ್ಮ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯ ಸರ್ಕಾರವೇ ಮೊದಲ ಕಂತಿನಲ್ಲಿ 2,000 ರೂ. ನೀಡಲು ಮುಂದಾಗಿದೆ” ಎಂದು ತಿಳಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೈಲಿಗೆ ಬೆಂಕಿ ಹಚ್ಚಿ ಸುಡುತ್ತೇವೆ ಎಂದವರನ್ನು ಒದ್ದು ಒಳಗೆ ಹಾಕಬೇಕು: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಅಯೋಧ್ಯೆಯ ರಾಮ ಮಂದಿರಕ್ಕೆ ತೆರಳುತ್ತಿದ್ದ ರೈಲಿಗೆ ಹೊಸಪೇಟೆಯಲ್ಲಿ ಬೆಂಕಿ ಹಚ್ಚಿ ಸುಡುತ್ತೇವೆ...

ವಿಪಕ್ಷ ನಾಯಕ ಸ್ಥಾನದಿಂದ ಅಶೋಕ್‌ರನ್ನು ಕೆಳಗಿಳಿಸಿ: ಬಿಜೆಪಿ ರಾಜ್ಯಾಧ್ಯಕ್ಷರಿಗೆ ಬಜರಂಗದಳ ಒತ್ತಾಯ

ಬಜೆಟ್ ಅಧಿವೇಶನದ ವೇಳೆ ಮಾತನಾಡುತ್ತಿದ್ದ ಸಂದರ್ಭದಲ್ಲಿ ವಿಪಕ್ಷ ನಾಯಕ ಆರ್. ಅಶೋಕ್,...

ನಟ ದರ್ಶನ್ ವಿರುದ್ಧ ಮತ್ತೆರಡು ದೂರು ದಾಖಲು; ಕ್ಷಮೆ ಕೇಳಿದ ಶಫಿ

ನಟ ದರ್ಶನ್ ಮತ್ತು ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ನಡುವಿನ ಗಲಾಟೆ...