ಭೂ ಸುರಕ್ಷಾ ಯೋಜನೆಗೆ ಕೊಡಗಿನಲ್ಲಿ ಚಾಲನೆ ನೀಡಿದ ಸಚಿವ ಕೃಷ್ಣಬೈರೇಗೌಡ

Date:

ಭೂ ದಾಖಲೆಗಳನ್ನು ಡಿಜಿಟಲೀಕರಣಗೊಳಿಸುವ ಬಹು ನಿರೀಕ್ಷಿತ “ಭೂ ಸುರಕ್ಷಾ” ಪ್ರಾಯೋಗಿಕ ಯೋಜನೆಗೆ ಇಂದು ಕೊಡಗಿನಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ ಕೊಡಗಿನಲ್ಲಿ ಚಾಲನೆ ನೀಡಿದರು.

ಈ ಯೋಜನೆಗೆ ಪ್ರಾಯೋಗಿಕವಾಗಿ 31 ಜಿಲ್ಲೆಯ 31 ತಾಲೂಕು ಗಳನ್ನು ಆಯ್ಕೆ ಮಾಡಿದ್ದು ಈ ತಾಲೂಕುಗಳ ಎಲ್ಲಾ ಭೂ ಮತ್ತು ಸರ್ವೇ ದಾಖಲೆಯನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಣಗೊಳಿಸುವುದು ಯೋಜನೆಯ ಗುರಿ. ಮುಂದಿನ ಎರಡು ತಿಂಗಳಲ್ಲಿ ಈ ಯೋಜನೆ ಪೂರ್ಣಗೊಳ್ಳಲಿದ್ದು, ಜನಸಾಮಾನ್ಯರಿಗೆ ಡಿಜಿಟಲ್ ದಾಖಲೆಗಳನ್ನೇ ನೀಡಲಾಗುವುದು. ತದನಂತರ ಈ ಯೋಜನೆಯನ್ನು ಇಡೀ ರಾಜ್ಯಾದ್ಯಂತ ವಿಸ್ತರಿಸುವ ಉದ್ದೇಶ ಹೊಂದಲಾಗಿದೆ.

ರೆಕಾರ್ಡ್ ರೂಂ ಗಳಲ್ಲಿ ಕಡತ ಕಳುವಾಗುವುದು ಹಾಗೂ ತಿದ್ದುವುದು ಸೇರಿದಂತೆ ಅನೇಕ ಅಕ್ರಮಗಳಿಂದಾಗಿ ಶತಮಾನಗಳಿಂದ ರೈತರು ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಈ ಎಲ್ಲಾ ಸಂಕಷ್ಟಗಳಿಂದ ರೈತರನ್ನು ಪಾರು ಮಾಡುವ ಹಾಗೂ ಅಕ್ರಮಗಳಿಗೆ ಕಡಿವಾಣ ಹಾಕುವ ದೃಷ್ಟಿಯಿಂದ ಸಚಿವ ಕೃಷ್ಣ ಬೈರೇಗೌಡ ಅವರ ನಿರ್ದೇಶನದಂತೆ ಹಿರಿಯ ಅಧಿಕಾರಿಗಳ ಕಳೆದ ಆರು ತಿಂಗಳ ಪರಿಶ್ರಮ ಈ ಯೋಜನೆಯಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೇಸಿಗೆಯಲ್ಲಿ ಉದ್ಯಾನವನಗಳನ್ನು ಹಸಿರಾಗಿಡಲು ಸಂಸ್ಕರಿಸಿದ ನೀರುಣಿಸಲು ಮುಂದಾದ ಬಿಬಿಎಂಪಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕುಡಿಯಲು ನೀರಿಲ್ಲದೇ ಜನ ಪರಡಾಡುವಂತಾಗಿದೆ. ಜತೆಗೆ, ಮರಗಿಡಗಳು...

ರಾಜಕೀಯ ಲಾಭಕ್ಕಾಗಿ ಬಿಜೆಪಿಯವರು ರಾಜ್ಯದ ಘನತೆ ಹಾಳು ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಬಿಜೆಪಿಯವರು ತಮ್ಮ ರಾಜಕೀಯ ಲಾಭಕ್ಕಾಗಿ ರಾಜ್ಯದ ಘನತೆ ಹಾಳು ಮಾಡುತ್ತಿದ್ದಾರೆ" ಎಂದು...

ʼಈದಿನ.ಕಾಮ್ʼ ನ್ಯೂಸ್ ಬೀದರ್ ಸಹಾಯವಾಣಿ ಬಿಡುಗಡೆಗೊಳಿಸಿದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ

ಕಲುಷಿತವಾದ ವಾತಾವರಣದಲ್ಲಿ ಸಮಾಜದ ಉನ್ನತಿಗಾಗಿ ವಸ್ತುನಿಷ್ಠ, ಪ್ರಾಮಾಣಿಕತೆ, ದಕ್ಷತೆ ಹಾಗೂ ನಿರ್ಭಡೆಯಿಂದ...

ಸಿಎಎ ರದ್ದಾಗದಿದ್ದರೆ ಬೃಹತ್ ಹೋರಾಟ; ಅಸ್ಸಾಂ ವಿಪಕ್ಷಗಳ ಎಚ್ಚರಿಕೆ

ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಅನುಷ್ಠಾನಗೊಳಿಸದಂತೆ ಅಸ್ಸಾಂನ 16 ಪಕ್ಷಗಳ...